ಯಾಜಕಕಾಂಡ 14:13 - ಕನ್ನಡ ಸತ್ಯವೇದವು J.V. (BSI)13 ದೋಷಪರಿಹಾರಕಯಜ್ಞಪಶುವನ್ನೂ ಸರ್ವಾಂಗಹೋಮಪಶುವನ್ನೂ ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಯಾಕಂದರೆ ದೋಷಪರಿಹಾರಕಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ದೋಷಪರಿಹಾರಕ ಯಜ್ಞಪಶುವನ್ನು ಮತ್ತು ಸರ್ವಾಂಗಹೋಮ ಪಶುವನ್ನು ವಧಿಸುವ ಸ್ಥಳದಲ್ಲೇ ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರು ವಧಿಸಲ್ಪಡಬೇಕು. ಏಕೆಂದರೆ ದೋಷಪರಿಹಾರಕ ಯಜ್ಞದ್ರವ್ಯದಂತೆಯೇ ಪ್ರಾಯಶ್ಚಿತ್ತ ಯಜ್ಞದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು, ಅದು ಮಹಾಪರಿಶುದ್ಧವಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ದೋಷಪರಿಹಾರಕ ಬಲಿಪ್ರಾಣಿಯನ್ನೂ ದಹನ ಬಲಿಪ್ರಾಣಿಯನ್ನೂ ವಧಿಸುವ ಸ್ಥಳದಲ್ಲೇ, ಅಂದರೆ ದೇವಸ್ಥಾನದ ಪ್ರಾಕಾರದೊಳಗೆ ಆ ಟಗರನ್ನು ವಧಿಸಬೇಕು. ಏಕೆಂದರೆ ದೋಷಪರಿಹಾರಕ ಬಲಿದ್ರವ್ಯದಂತೆಯೇ ಪ್ರಾಯಶ್ಚಿತ್ತ ಬಲಿದ್ರವ್ಯವೂ ಯಾಜಕನಿಗೆ ಸಲ್ಲತಕ್ಕದ್ದು; ಅದು ಮಹಾಪರಿಶುದ್ಧವಾದದ್ದು; ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ಬಳಿಕ ಯಾಜಕನು ಪಾಪಪರಿಹಾರಕ ಮತ್ತು ಸರ್ವಾಂಗಹೋಮ ಯಜ್ಞಪಶುಗಳನ್ನು ವಧಿಸುವ ಪವಿತ್ರಸ್ಥಳದಲ್ಲಿ ಟಗರನ್ನು ವಧಿಸುವನು. ದೋಷಪರಿಹಾರಕ ಯಜ್ಞವು ಪಾಪಪರಿಹಾರಕ ಯಜ್ಞದಂತಿದೆ. ಅದು ಯಾಜಕನಿಗೆ ಸೇರುತ್ತದೆ. ಅದು ಬಹಳ ಪವಿತ್ರವಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ಇದಲ್ಲದೆ ಅವನು ಆ ಕುರಿಮರಿಯನ್ನು ಪರಿಶುದ್ಧ ಸ್ಥಳದಲ್ಲಿ ಪಾಪ ಪರಿಹಾರದ ಬಲಿಯನ್ನು, ದಹನಬಲಿಯನ್ನು ವಧಿಸುವ ಸ್ಥಳದಲ್ಲಿ ವಧಿಸಬೇಕು. ದೋಷಪರಿಹಾರ ಬಲಿಯಂತೆಯೇ ಪ್ರಾಯಶ್ಚಿತ್ತ ಬಲಿಯೂ ಯಾಜಕನದಾಗಿದೆ. ಅದು ಮಹಾಪರಿಶುದ್ಧವಾದದ್ದು. ಅಧ್ಯಾಯವನ್ನು ನೋಡಿ |