Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:22 - ಕನ್ನಡ ಸತ್ಯವೇದವು J.V. (BSI)

22 ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಮತ್ತೊಂದನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಅದಲ್ಲದೆ ಅವನು ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಯಜ್ಞವಾಗಿ ಒಂದನ್ನು, ಸರ್ವಾಂಗಹೋಮಕ್ಕಾಗಿ ಮತ್ತೊಂದನ್ನು ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಅದಲ್ಲದೆ ತನ್ನ ಸ್ಥಿತಿಗೆ ತಕ್ಕಂತೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ದೋಷಪರಿಹಾರಕ ಬಲಿಯಾಗಿ ಒಂದನ್ನೂ ದಹನಬಲಿಯಾಗಿ ಮತ್ತೊಂದನ್ನೂ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಎರಡು ಬೆಳವಕ್ಕಿಗಳನ್ನು ಮತ್ತು ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಳ್ಳಬೇಕು. ಬಡವರು ಸಹ ಅವುಗಳನ್ನು ಕೊಡಲು ಶಕ್ತರಾಗಿರುವರು. ಒಂದು ಪಕ್ಷಿಯು ಪಾಪಪರಿಹಾರಕ ಯಜ್ಞಕ್ಕಾಗಿಯೂ ಇನ್ನೊಂದು ಪಕ್ಷಿಯು ಸರ್ವಾಂಗಹೋಮಕ್ಕಾಗಿಯೂ ಇರುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಮತ್ತು ಅವನಿಂದಾಗುವಷ್ಟು ಎರಡು ಬೆಳವಕ್ಕಿಗಳನ್ನೂ ಇಲ್ಲವೆ ಎರಡು ಪಾರಿವಾಳದ ಮರಿಗಳನ್ನೂ ತೆಗೆದುಕೊಳ್ಳಬೇಕು. ಅವುಗಳಲ್ಲಿ ಒಂದು ಪಾಪ ಪರಿಹಾರದ ಬಲಿಗಾಗಿಯೂ, ಇನ್ನೊಂದು ದಹನಬಲಿಗಾಗಿಯೂ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:22
11 ತಿಳಿವುಗಳ ಹೋಲಿಕೆ  

ಅವರಲ್ಲಿ ಪಲಾಯನ ಮಾಡಿದವರು ತಪ್ಪಿಸಿಕೊಂಡು ತಮ್ಮ ಅಧರ್ಮದಲ್ಲಿಯೇ ಇದ್ದು ಡೊಂಗರಗಳಲ್ಲಿನ ಪಾರಿವಾಳಗಳಂತೆ ಬೆಟ್ಟಗಳ ಮೇಲೆ ಮೊರೆಯಿಡುತ್ತಿರುವರು.


ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕೆಯಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;


ನಾವೆಲ್ಲರೂ ಕರಡಿಗಳಂತೆ ಗುರುಗುಟ್ಟುತ್ತೇವೆ, ಪಾರಿವಾಳಗಳಂತೆ ಮೂಲುಗುತ್ತಲೇ ಇದ್ದೇವೆ; ನಾವು [ಯೆಹೋವನ] ನ್ಯಾಯನಿರ್ಣಯವನ್ನು ಎದುರುನೋಡಿದರೂ ಅದು ಸಿಕ್ಕದು, [ಆತನ] ರಕ್ಷಣಕಾರ್ಯವನ್ನು ನಿರೀಕ್ಷಿಸಿದರೂ ಅದು ನಮಗೆ ದೂರ.


ನಾನು ಬಾನಕ್ಕಿಯಂತೆಯೂ ಬಕದ ಹಾಗೂ ಕೀಚುಗುಟ್ಟಿದೆನು, ಪಾರಿವಾಳದಂತೆ ಮೊರೆಯಿಟ್ಟೆನು, ಯೆಹೋವನೇ, ನಾನು ಬಾಧೆಪಡುತ್ತಿದ್ದೇನೆ, ನನಗೆ ಹೊಣೆಯಾಗು ಎಂದು ಮೇಲೆ ಮೇಲೆ ದೃಷ್ಟಿಸುತ್ತಾ ಕಂಗೆಟ್ಟೆನು.


ಬಂಡೆಯ ಬಿರುಕುಗಳಲ್ಲಿಯೂ ಜರಿಯ ಮರೆಯಲ್ಲಿಯೂ ಇರುವ ನನ್ನ ಪರಿವಾಳವೇ! ನಿನ್ನ ರೂಪು ನನಗೆ ಕಾಣಿಸು, ನಿನ್ನ ದನಿ ಕೇಳಿಸು; ನಿನ್ನ ದನಿ ಎಷ್ಟೋ ಇಂಪು, ನಿನ್ನ ರೂಪು ಎಷ್ಟೋ ಅಂದ.


ನೀವು ಕುರಿಹಟ್ಟಿಗಳಲ್ಲಿ ಮಲಗಿಕೊಂಡಿರುವದೇನು? ಪಾರಿವಾಳದ ರೆಕ್ಕೆಗಳು ಬೆಳ್ಳಿಯಿಂದಲೂ ಅದರ ಗರಿಗಳು ಬಂಗಾರದಿಂದಲೂ ಥಳಥಳಿಸುತ್ತವೆ.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಅವನು ಅಷ್ಟನ್ನು ಸಮರ್ಪಿಸುವದಕ್ಕೆ ಬಡವನಾಗಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರಮಾಡಿಸಿಕೊಳ್ಳುವದಕ್ಕೋಸ್ಕರ [ಯಾಜಕನ ಕೈಯಿಂದ] ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಮೂರು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತರಬೇಕು.


ಯಾಜಕನು ಪ್ರಾಯಶ್ಚಿತ್ತಯಜ್ಞದ ಕುರಿಯನ್ನೂ ಆ ಸೇರು ಎಣ್ಣೆಯನ್ನೂ ಯೆಹೋವನ ಸನ್ನಿಧಿಯಲ್ಲಿ ನೈವೇದ್ಯವಾಗಿ ನಿವಾಳಿಸಬೇಕು.


ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.


ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು