Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:28 - ಕನ್ನಡ ಸತ್ಯವೇದವು J.V. (BSI)

28 ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆಮೇಲೆ ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧ ಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ, ಬಲಗೈಯ ಹೆಬ್ಬೆರಳಿಗೂ, ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತಯಜ್ಞ ಪಶುವಿನ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಮತ್ತು ಯಾಜಕನು ತನ್ನ ಕೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ಶುದ್ಧಿಮಾಡಿಸಿಕೊಳ್ಳುವವನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಪ್ರಾಯಶ್ಚಿತ್ತ ಬಲಿಪ್ರಾಣಿಯ ರಕ್ತವನ್ನು ಹಚ್ಚಿದ ಸ್ಥಳಗಳಲ್ಲಿಯೇ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಬಳಿಕ ತನ್ನ ಅಂಗೈಯಲ್ಲಿರುವ ಎಣ್ಣೆಯಲ್ಲಿ ಸ್ವಲ್ಪವನ್ನು ದೋಷಪರಿಹಾರಕ ಯಜ್ಞದ ರಕ್ತವನ್ನು ಹಚ್ಚಿದ ಸ್ಥಳದಲ್ಲಿಯೇ ಹಚ್ಚುವನು; ಸ್ವಲ್ಪ ಎಣ್ಣೆಯನ್ನು ಶುದ್ಧೀಕರಿಸಲ್ಪಡುವ ವ್ಯಕ್ತಿಯ ಬಲಗಿವಿಯ ತುದಿಗೆ ಹಚ್ಚಬೇಕು; ಸ್ವಲ್ಪ ಎಣ್ಣೆಯನ್ನು ಬಲಗೈಯ ಹೆಬ್ಬೆರಳಿಗೂ ಸ್ವಲ್ಪ ಎಣ್ಣೆಯನ್ನು ಬಲಗಾಲಿನ ಹೆಬ್ಬೆರಳಿಗೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಇದಲ್ಲದೆ ಯಾಜಕನು ತನ್ನ ಕೈಯಲ್ಲಿದ್ದ ಎಣ್ಣೆಯನ್ನು ಶುದ್ಧಪಡಿಸಿಕೊಳ್ಳುವವನ ಬಲಗಿವಿಯ ತುದಿಯ ಮೇಲೆಯೂ, ಅವನ ಬಲಗೈಯ ಹೆಬ್ಬೆರಳಿನ ಮೇಲೆಯೂ, ಅವನ ಬಲಗಾಲಿನ ಹೆಬ್ಬೆಟ್ಟಿನ ಮೇಲೆಯೂ ಪ್ರಾಯಶ್ಚಿತ್ತ ಬಲಿಯ ರಕ್ತದ ಸ್ಥಳದ ಮೇಲೆಯೂ ಹಚ್ಚಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:28
5 ತಿಳಿವುಗಳ ಹೋಲಿಕೆ  

ಅದನ್ನು ವಧಿಸಿ ಅದರ ರಕ್ತದಲ್ಲಿ ಸ್ವಲ್ಪವನ್ನು ಆರೋನನ ಮತ್ತು ಅವನ ಮಕ್ಕಳ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಸೋಂಕಿಸಿ ವಿುಕ್ಕ ರಕ್ತವನ್ನು ಯಜ್ಞವೇದಿಯ ನಾಲ್ಕು ಕಡೆಗಳಿಗೆ ಚೆಲ್ಲಬೇಕು.


ಕುರಿಯನ್ನು ಕೊಡುವದಕ್ಕೆ ಅವನಿಗೆ ಗತಿಯಿಲ್ಲದ ಪಕ್ಷದಲ್ಲಿ ದೋಷದ ಪ್ರಾಯಶ್ಚಿತ್ತಕ್ಕಾಗಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ಬಂದು ಸರ್ವಾಂಗಹೋಮವಾಗಿ ಒಂದನ್ನೂ ದೋಷಪರಿಹಾರಕ ಯಜ್ಞವಾಗಿ ಮತ್ತೊಂದನ್ನೂ ಯೆಹೋವನಿಗೆ ಸಮರ್ಪಿಸಬೇಕು.


ಅದರಲ್ಲಿ ಸ್ವಲ್ಪವನ್ನು ಬಲಗೈಯ ಬೆರಳಿನಿಂದ ಏಳು ಸಾರಿ ಯೆಹೋವನ ಸನ್ನಿಧಿಯಲ್ಲಿ ಚಿವಿುಕಿಸಬೇಕು.


ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವದಕ್ಕಾಗಿ ಯಾಜಕನು ತನ್ನ ಕೈಯಲ್ಲಿರುವ ವಿುಕ್ಕ ಎಣ್ಣೆಯನ್ನೆಲ್ಲಾ ಅವನ ತಲೆಯ ಮೇಲೆ ಹೊಯ್ಯಬೇಕು.


ಅದನ್ನು ವಧಿಸಿದ ನಂತರ ಮೋಶೆ ಅದರ ರಕ್ತದಲ್ಲಿ ಸ್ವಲ್ಪ ತೆಗೆದುಕೊಂಡು ಆರೋನನ ಬಲಗಿವಿಯ ತುದಿಗೂ ಬಲಗೈಯ ಹೆಬ್ಬೆರಳಿಗೂ ಬಲಗಾಲಿನ ಹೆಬ್ಬೆಟ್ಟಿಗೂ ಹಚ್ಚಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು