Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:32 - ಕನ್ನಡ ಸತ್ಯವೇದವು J.V. (BSI)

32 ಶುದ್ಧೀಕರಣಯಜ್ಞಗಳನ್ನು ಮಾಡುವದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “ಶುದ್ಧೀಕರಣ ಯಜ್ಞಗಳನ್ನು ಮಾಡುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ನಿಯಮ” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ಶುದ್ಧೀಕರಣ ಬಲಿಗಳನ್ನು ಅರ್ಪಿಸುವುದಕ್ಕೆ ಗತಿಯಿಲ್ಲದ ಕುಷ್ಠರೋಗಿಯ ವಿಷಯದಲ್ಲಿ ಇದೇ ವಿಧಿಯನ್ನು ಅನುಸರಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ಚರ್ಮರೋಗದಿಂದ ವಾಸಿಯಾದವನನ್ನು ಶುದ್ಧೀಕರಿಸುವ ನಿಯಮಗಳು ಇವೇ. ಶುದ್ಧರಾಗಲು ವಿಧಿಬದ್ಧವಾದ ಯಜ್ಞಗಳನ್ನು ಅರ್ಪಿಸುವುದಕ್ಕೆ ಶಕ್ತರಲ್ಲದ ಜನರಿಗೋಸ್ಕರವಿರುವ ನಿಯಮಗಳು ಇವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ಚರ್ಮರೋಗವುಳ್ಳವನು ಶುದ್ಧತೆ ಮಾಡಿಸಿಕೊಳ್ಳಲು ಗತಿಯಿಲ್ಲದವನಿಗೆ ತನ್ನ ಶುದ್ಧತೆಗಾಗಿ ಇರುವ ನಿಯಮವು ಇದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:32
12 ತಿಳಿವುಗಳ ಹೋಲಿಕೆ  

ಅವನು ಅಷ್ಟನ್ನು ಸಮರ್ಪಿಸುವದಕ್ಕೆ ಬಡವನಾಗಿದ್ದರೆ ಪ್ರಾಯಶ್ಚಿತ್ತಯಜ್ಞಕ್ಕಾಗಿ ಒಂದು ಟಗರುಮರಿಯನ್ನು ತಂದು ದೋಷಪರಿಹಾರಮಾಡಿಸಿಕೊಳ್ಳುವದಕ್ಕೋಸ್ಕರ [ಯಾಜಕನ ಕೈಯಿಂದ] ನೈವೇದ್ಯವಾಗಿ ನಿವಾಳಿಸಬೇಕು; ಮತ್ತು ಧಾನ್ಯನೈವೇದ್ಯಕ್ಕಾಗಿ ಎಣ್ಣೆ ಕಲಸಿದ ಮೂರು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತರಬೇಕು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ನಾವು ದೀನಾವಸ್ಥೆಯಲ್ಲಿದ್ದಾಗ ನಮ್ಮನ್ನು ನೆನಪುಮಾಡಿಕೊಂಡನು; ಆತನ ಕೃಪೆಯು ಶಾಶ್ವತವಾದದ್ದು.


ಕುಷ್ಠರೋಗಿ ಶುದ್ಧನಾಗುವ ದಿನದಲ್ಲಿ ಅವನ ವಿಷಯವಾಗಿ ನಡಿಸಬೇಕಾದ ಕ್ರಮ ಹೇಗಂದರೆ - ಅವನನ್ನು ಯಾಜಕನಿಗೆ ತೋರಿಸಬೇಕು.


ಉಣ್ಣೇಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬದು ಇದರಿಂದ ತಿಳಿಯುವದು.


ಒಬ್ಬ ಮನುಷ್ಯನ ಮೈಮೇಲೆ ಬಾವಾಗಲಿ ಗುಳ್ಳೆಯಾಗಲಿ ಹೊಳೆಯುವ ಮಚ್ಚೆಯಾಗಲಿ ಉಂಟಾಗಿ ಅದರಲ್ಲಿ ಕುಷ್ಠರೋಗದ ಲಕ್ಷಣಗಳು ತೋರಿದರೆ ಅವನನ್ನು ಮಹಾಯಾಜಕನಾದ ಆರೋನನ ಬಳಿಗೆ ಇಲ್ಲವೆ ಆರೋನನ ಮಕ್ಕಳಾದ ಯಾಜಕರಲ್ಲಿ ಒಬ್ಬನ ಬಳಿಗೆ ಕರಕೊಂಡು ಬರಬೇಕು.


ದೋಷಪರಿಹಾರಕಯಜ್ಞವಾಗಿ ಒಂದನ್ನೂ ಸರ್ವಾಂಗಹೋಮವಾಗಿ ಒಂದನ್ನೂ ನೈವೇದ್ಯದ್ರವ್ಯವನ್ನೂ ಸಮರ್ಪಿಸಬೇಕು. ಹೀಗೆ ಯಾಜಕನು ಶುದ್ಧಮಾಡಿಸಿಕೊಳ್ಳುವವನಿಗೋಸ್ಕರ ಯೆಹೋವನ ಸನ್ನಿಧಿಯಲ್ಲಿ ದೋಷಪರಿಹಾರವನ್ನು ಮಾಡುವನು.


ಯೆಹೋವನು ಮೋಶೆ ಆರೋನರಿಗೆ ಹೇಳಿದ್ದೇನಂದರೆ -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು