ಯಾಜಕಕಾಂಡ 14:36 - ಕನ್ನಡ ಸತ್ಯವೇದವು J.V. (BSI)36 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವದಕ್ಕೆ ಮುಂಚೆ ಆ ಮನೆಯನ್ನು ಬರಿದುಮಾಡಲಾಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾದಾವು. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವದಕ್ಕೆ ಒಳಗೆ ಹೋಗಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201936 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮೊದಲು ಆ ಮನೆಯನ್ನು ಬರಿದುಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದುಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುತ್ತದೆ. ಬರಿದುಮಾಡಿದ ಮೇಲೆ ಯಾಜಕನು ಆ ಮನೆಯನ್ನು ನೋಡುವುದಕ್ಕೆ ಒಳಗೆ ಹೋಗಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)36 ಯಾಜಕನು ತಾನು ಆ ರೋಗದ ಗುರುತನ್ನು ನೋಡಲು ಬರುವುದಕ್ಕೆ ಮುಂಚೆ ಆ ಮನೆಯನ್ನು ಬರಿದು ಮಾಡಲು ಆಜ್ಞಾಪಿಸಬೇಕು. ಹಾಗೆ ಬರಿದು ಮಾಡದಿದ್ದರೆ ಆ ಮನೆಯಲ್ಲಿರುವ ಎಲ್ಲಾ ವಸ್ತುಗಳೂ ಅಶುದ್ಧವಾಗುವುವು. ಬರಿದು ಮಾಡಿದ ಮೇಲೆ ಯಾಜಕನು ಆ ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್36 “ಆಗ ಯಾಜಕನು ಬೂಷ್ಟನ್ನು ನೋಡಲು ಮನೆಯ ಒಳಗೆ ಹೋಗುವುದಕ್ಕಿಂತ ಮೊದಲು ಆ ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರತೆಗೆಯಲು ಜನರಿಗೆ ಆಜ್ಞಾಪಿಸಬೇಕು. ಆಗ ಯಾಜಕನು ಮನೆಯಲ್ಲಿರುವ ಪ್ರತಿಯೊಂದು ವಸ್ತುವನ್ನು ಅಶುದ್ಧವೆಂದು ಹೇಳಬೇಕಾಗಿರುವುದಿಲ್ಲ. ಜನರು ಮನೆಯಿಂದ ಪ್ರತಿಯೊಂದು ವಸ್ತುವನ್ನು ಹೊರಗೆ ತೆಗೆದ ನಂತರ ಯಾಜಕನು ಮನೆಯೊಳಗೆ ಹೋಗುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ36 ಆಗ ಯಾಜಕನು ಆ ಮನೆಯಲ್ಲಿ ಬೂಜನ್ನು ಪರೀಕ್ಷಿಸುವುದಕ್ಕೆ ಹೋಗುವ ಮೊದಲು, ಆ ಮನೆಯೊಳಗೆ ಇರುವವುಗಳು ಅಶುದ್ಧವಾಗದಂತೆ ಆ ಮನೆಯನ್ನು ಬರಿದುಮಾಡಬೇಕೆಂದು ಆಜ್ಞಾಪಿಸಬೇಕು. ತರುವಾಯ ಯಾಜಕನು ಮನೆಯನ್ನು ಪರೀಕ್ಷಿಸುವುದಕ್ಕೆ ಒಳಗೆ ಹೋಗಬೇಕು. ಅಧ್ಯಾಯವನ್ನು ನೋಡಿ |