Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:41 - ಕನ್ನಡ ಸತ್ಯವೇದವು J.V. (BSI)

41 ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

41 ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗೋಡೆಯನ್ನೆಲ್ಲಾ ಕೆರೆದು, ಅದರ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

41 ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ, ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

41 ತರುವಾಯ ಯಾಜಕನು ಮನೆಯ ಒಳಗಿನ ಗೋಡೆಯನ್ನೆಲ್ಲಾ ಕೆರೆಯಿಸಬೇಕು. ಜನರು ಕೆರೆದುಹಾಕುವ ಮಣ್ಣನ್ನು ಪಟ್ಟಣದ ಹೊರಗೆ ಎಸೆದುಬಿಡಬೇಕು. ಅವರು ಅದನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳದಲ್ಲಿ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

41 ಆ ಮನೆಯ ಒಳಭಾಗದಲ್ಲಿ ಸುತ್ತಲೂ ಕೆರೆದು, ಕೆರೆದ ಧೂಳನ್ನು ಪಟ್ಟಣದ ಹೊರಗೆ ಅಶುದ್ಧ ಸ್ಥಳದಲ್ಲಿ ಸುರಿಯಬೇಕೆಂದೂ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:41
10 ತಿಳಿವುಗಳ ಹೋಲಿಕೆ  

ನಾಯಿಗಳಂತಿರುವವರೂ ಮಾಟಗಾರರೂ ಜಾರರೂ ಕೊಲೆಗಾರರೂ ವಿಗ್ರಹಾರಾಧಕರೂ ಸುಳ್ಳಾದದ್ದನ್ನು ಪ್ರೀತಿಸಿ ನಡಿಸುವವರೆಲ್ಲರೂ ಹೊರಗಿರುವರು ಎಂದು ಹೇಳಿದನು.


ಇವರು ದೇವದೂಷಣೆ ಮಾಡಬಾರದೆಂಬದನ್ನು ಕಲಿತುಕೊಳ್ಳುವಂತೆ ಇವರನ್ನು ಸೈತಾನನಿಗೆ ಒಪ್ಪಿಸಿಕೊಟ್ಟೆನು.


ಕಪಟಿಗಳಿಗೆ ಆಗತಕ್ಕ ಗತಿಯನ್ನು ಅವನಿಗೆ ನೇವಿುಸುವನು. ಅಲ್ಲಿ ಗೋಳಾಟವೂ ಕಟಕಟನೆ ಹಲ್ಲು ಕಡಿಯೋಣವೂ ಇರುವವು.


ಆಮೇಲೆ ಆತನು ಆಚೇದಡಕ್ಕೆ ಗದರೇನರ ಸೀಮೆಗೆ ಮುಟ್ಟಿದಾಗ ದೆವ್ವಹಿಡಿದವರಿಬ್ಬರು ಸಮಾಧಿಯ ಗವಿಗಳೊಳಗಿಂದ ಹೊರಟು ಆತನೆದುರಿಗೆ ಬಂದರು. ಅವರು ಬಹು ಉಗ್ರರಾಗಿದ್ದದರಿಂದ ಆ ದಾರಿಯಲ್ಲಿ ಯಾರೂ ತಿರುಗಾಡಲಾರದೆ ಇದ್ದರು.


ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,


ಆ ಗುರುತುಗಳು ಇರುವ ಕಲ್ಲುಗಳನ್ನು ತೆಗಿಸಿಬಿಟ್ಟು ಊರಿನ ಹೊರಗೆ ಅಪವಿತ್ರವಾದ ಸ್ಥಳದಲ್ಲಿ ಹಾಕಿಸಿಬಿಡಬೇಕು.


ಆಗ ಬೇರೆ ಕಲ್ಲುಗಳನ್ನು ತರಿಸಿ ಮೊದಲಿದ್ದ ಕಲ್ಲುಗಳ ಸ್ಥಳದಲ್ಲಿ ಹಾಕಿಸಿ ಹೊಸ ಮಣ್ಣನ್ನು ತರಿಸಿ ಆ ಗೋಡೆಗಳಿಗೆ ಗಿಲಾವು ಮಾಡಿಸಬೇಕು.


ಅವನು ಆ ಮನೆಯನ್ನು ಕೆಡಹಿಸಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಿಬಿಡಬೇಕು.


ಅವು ತೂರಿನ ಪೌಳಿಗೋಡೆಯನ್ನು ಉರುಳಿಸಿ ಅದರ ಕೊತ್ತಲಗಳನ್ನು ಕೆಡವಿಹಾಕುವವು; ನಾನು ಅದರ ಮಣ್ಣನ್ನು ಕೆರೆದು ಅದನ್ನು ಗುಡಿಸಿ ಗಂಡಾಂತರಮಾಡುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು