Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:45 - ಕನ್ನಡ ಸತ್ಯವೇದವು J.V. (BSI)

45 ಅವನು ಆ ಮನೆಯನ್ನು ಕೆಡಹಿಸಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

45 ಅವನು ಆ ಮನೆಯನ್ನು ಕೆಡವಿ, ಅದರ ಎಲ್ಲಾ ಕಲ್ಲುಗಳನ್ನು, ತೊಲೆಗಳನ್ನು ಮತ್ತು ಮಣ್ಣನ್ನು ಊರಿನ ಹೊರಗೆ ಅಪವಿತ್ರಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

45 ಅವನು ಆ ಮನೆಯನ್ನು ಕೆಡವಿ ಅದರ ಎಲ್ಲಾ ಕಲ್ಲುಗಳನ್ನೂ ತೊಲೆಗಳನ್ನೂ ಮಣ್ಣನ್ನೂ ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

45 ಆ ವ್ಯಕ್ತಿಯು ಆ ಮನೆಯನ್ನು ಕೆಡವಿಹಾಕಿಸಬೇಕು. ಅವರು ಅದರ ಎಲ್ಲಾ ಕಲ್ಲುಗಳನ್ನು, ಮಣ್ಣನ್ನು ಮತ್ತು ಮರದ ತುಂಡುಗಳನ್ನು ಪಟ್ಟಣದ ಹೊರಗಿರುವ ಪ್ರತ್ಯೇಕವಾದ ಅಶುದ್ಧ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

45 ಅವನು ಆ ಮನೆಯನ್ನು ಕೆಡವಿಹಾಕಿ, ಅದರ ಕಲ್ಲುಗಳನ್ನೂ, ಮರಗಳನ್ನೂ, ಆ ಮನೆಯ ಎಲ್ಲಾ ಧೂಳನ್ನೂ ತೆಗೆದು, ಅವುಗಳನ್ನು ಪಟ್ಟಣದ ಹೊರಗೆ ಅಶುದ್ಧವಾದ ಸ್ಥಳಕ್ಕೆ ತೆಗೆದುಕೊಂಡು ಹೋಗಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:45
14 ತಿಳಿವುಗಳ ಹೋಲಿಕೆ  

ಆಲಯಕ್ಕೆ ಹೊರಗಿರುವ ಅಂಗಳವನ್ನು ಅಳೆಯದೆ ಬಿಟ್ಟುಬಿಡು; ಅದು ಅನ್ಯಜನರಿಗಾಗಿ ಬಿಟ್ಟದೆ; ಅವರು ಪರಿಶುದ್ಧ ಪಟ್ಟಣವನ್ನು ನಾಲ್ವತ್ತೆರಡು ತಿಂಗಳು ತುಳಿದಾಡುವರು.


ಆಗ ಆತನು - ಇವುಗಳನ್ನೆಲ್ಲಾ ನೋಡುತ್ತೀರಲ್ಲವೇ. ಇಲ್ಲಿ ಕಲ್ಲಿನ ಮೇಲೆ ಕಲ್ಲು ಉಳಿಯುವದಿಲ್ಲ, ಎಲ್ಲಾ ಕೆಡವಲ್ಪಡುವದು ಎಂದು ನಿಮಗೆ ಸತ್ಯವಾಗಿ ಹೇಳುತ್ತೇನೆ ಅಂದನು.


ಅರಸನು ಸಿಟ್ಟುಗೊಂಡು ತನ್ನ ದಂಡುಗಳನ್ನು ಕಳುಹಿಸಿ ಆ ಕೊಲೆಗಾರರನ್ನು ನಾಶಮಾಡಿ ಅವರ ಪಟ್ಟಣವನ್ನು ಸುಟ್ಟುಬಿಟ್ಟನು.


ಆಮೇಲೆ ಇವುಗಳಲ್ಲಿ ಕೆಲವನ್ನು ಆರಿಸಿ ಬೆಂಕಿಯೊಳಗೆ ಹಾಕಿ ಸುಡು; ಅವುಗಳಿಂದ ಬೆಂಕಿಯು ಹೊರಟು ಇಸ್ರಾಯೇಲ್ ವಂಶವನ್ನೆಲ್ಲಾ ವ್ಯಾಪಿಸುವದು.


ಯೆಹೋವನ ಆಲಯವನ್ನೂ ಅರಮನೆಯನ್ನೂ ಯೆರೂಸಲೇವಿುನ ಎಲ್ಲಾ ದೊಡ್ಡ ಮನೆಗಳನ್ನೂ ಸುಟ್ಟುಬಿಟ್ಟನು.


ಪೂಜಾಸ್ಥಳಗಳನ್ನು ಹಾಳುಮಾಡಿ ಕಲ್ಲುಕಂಬಗಳನ್ನು ಒಡೆದು ಅಶೇರವಿಗ್ರಹ ಸ್ತಂಭಗಳನ್ನು ಕಡಿದುಹಾಕಿದನು; ಮೋಶೆಯು ಮಾಡಿಸಿದ ತಾಮ್ರಸರ್ಪವನ್ನು ಚೂರು ಚೂರು ಮಾಡಿದನು. ಇಸ್ರಾಯೇಲ್ಯರು ಅದಕ್ಕೆ ಆವರೆಗೂ ಧೂಪಸುಡುತ್ತಿದ್ದರು. ಅದಕ್ಕೆ ನೆಹುಷ್ಟಾನ್ ಎಂಬ ಹೆಸರಿತ್ತು;


ಇದಲ್ಲದೆ ಬಾಳನ ವಿಗ್ರಹಸ್ತಂಭವನ್ನೂ ದೇವಸ್ಥಾನವನ್ನೂ ಕೆಡವಿ ಹಾಳುಮಾಡಿದರು. ಅಂದಿನಿಂದ ಇಂದಿನವರೆಗೂ ಆ ಸ್ಥಳವನ್ನು ಶೌಚಕ್ಕಾಗಿ ಉಪಯೋಗಿಸುತ್ತಾರೆ.


ಅದಲ್ಲದೆ ಅವನು ಆ ಮನೆಯ ಗೋಡೆಗಳ ಒಳಗಡೆಯನ್ನೆಲ್ಲಾ ಗೀಚಿಸಿ ಗೀಚಿದ ಮಣ್ಣನ್ನು ಊರಿನ ಹೊರಗೆ ಅಪವಿತ್ರ ಸ್ಥಳದಲ್ಲಿ ಹಾಕಿಸಬೇಕು.


ಆ ಮನೆಯು ಮುಚ್ಚಿರುವ ದಿನಗಳಲ್ಲಿ ಯಾವನಾದರೂ ಒಳಕ್ಕೆ ಹೋದರೆ ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು