ಯಾಜಕಕಾಂಡ 14:48 - ಕನ್ನಡ ಸತ್ಯವೇದವು J.V. (BSI)48 ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201948 “ಆದರೆ ತಾನು ಆ ಮನೆಗೆ ಹೊಸದಾಗಿ ಗಿಲಾವು ಮಾಡಿಸಿದ ಮೇಲೆ ಯಾಜಕನು ಬಂದು ಪರೀಕ್ಷಿಸುವಾಗ ಆ ರೋಗದ ಗುರುತು ಕಾಣಿಸದೆಹೋದರೆ, ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)48 ಆದರೆ ತಾನು ಆ ಮನೆಗೆ ಹೊಸದಾಗಿ ಮಣ್ಣು ಮೆತ್ತಿಸಿದ ಮೇಲೆ ಯಾಜಕನು ಬಂದು ನೋಡುವಾಗ ಆ ರೋಗದ ಗುರುತು ಕಾಣಿಸದೆಹೋದರೆ ರೋಗಪರಿಹಾರವಾಗಿ ಆ ಮನೆ ಶುದ್ಧವಾಯಿತೆಂದು ನಿರ್ಣಯಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್48 “ಒಂದು ಮನೆಯಲ್ಲಿ ಹೊಸ ಕಲ್ಲುಗಳನ್ನು ಮತ್ತು ಮಣ್ಣನ್ನು ಹಾಕಿಸಿದ ನಂತರ ಯಾಜಕನು ಅದನ್ನು ಪರೀಕ್ಷಿಸಬೇಕು. ಬೂಷ್ಟು ಮನೆಯಲ್ಲಿ ಹರಡದಿದ್ದರೆ, ಯಾಜಕನು ಮನೆಯನ್ನು ಶುದ್ಧವೆಂದು ಪ್ರಕಟಿಸುವನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ48 “ಆದರೆ ಯಾಜಕನು ಒಳಗೆ ಬಂದು ಅದನ್ನು ಪರೀಕ್ಷಿಸಿದಾಗ, ಗಿಲಾವು ಮಾಡಿದ ನಂತರ ಆ ಮನೆಯಲ್ಲಿ ಆ ಬೂಜು ಹರಡಿಕೊಂಡಿರದಿದ್ದರೆ, ಆ ಮನೆಯು ಶುದ್ಧವೆಂದು ಯಾಜಕನು ನಿರ್ಣಯಿಸಬೇಕು. ಏಕೆಂದರೆ ಆ ಬೂಜು ಹೊರಟುಹೋಯಿತು. ಅಧ್ಯಾಯವನ್ನು ನೋಡಿ |