Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:51 - ಕನ್ನಡ ಸತ್ಯವೇದವು J.V. (BSI)

51 ಆ ದೇವದಾರಿನ ಕಟ್ಟಿಗೆಯನ್ನೂ ಹಿಸ್ಸೋಪಿನ ಬರಲನ್ನೂ ರಕ್ತವರ್ಣವುಳ್ಳ ದಾರವನ್ನೂ ಸಜೀವವಾದ ಮತ್ತೊಂದು ಪಕ್ಷಿಯನ್ನೂ ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಸೆಲೇ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

51 ಆ ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪಿನ ಬರಲನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಸಜೀವವಾದ ಮತ್ತೊಂದು ಪಕ್ಷಿಯನ್ನು ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಹಾಗು ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

51 ಆ ದೇವದಾರಿನ ಕಟ್ಟಿಗೆಯನ್ನೂ ಹಿಸ್ಸೋಪಿನ ಬರಲನ್ನೂ ರಕ್ತವರ್ಣವುಳ್ಳ ದಾರವನ್ನೂ ಸಜೀವವಾದ ಮತ್ತೊಂದು ಪಕ್ಷಿಯನ್ನೂ ತೆಗೆದುಕೊಂಡು ತಾನು ವಧಿಸಿದ ಪಕ್ಷಿಯ ರಕ್ತದಲ್ಲಿಯೂ ಒರತೆಯ ನೀರಿನಲ್ಲಿಯೂ ಅದ್ದಿ ಏಳು ಸಾರಿ ಆ ಮನೆಯ ಗೋಡೆಗಳಿಗೆ ಪ್ರೋಕ್ಷಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

51 ಬಳಿಕ ಯಾಜಕನು ದೇವದಾರಿನ ಕಟ್ಟಿಗೆಯನ್ನು, ಹಿಸ್ಸೋಪನ್ನು, ಕೆಂಪು ಬಟ್ಟೆಯನ್ನು ಮತ್ತು ಸಜೀವವಾದ ಪಕ್ಷಿಯನ್ನು ತೆಗೆದುಕೊಳ್ಳುವನು. ಯಾಜಕನು ಹರಿಯುವ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಅವುಗಳನ್ನು ಅದ್ದುವನು. ಬಳಿಕ ಯಾಜಕನು ರಕ್ತವನ್ನು ಆ ಮನೆಯ ಮೇಲೆ ಏಳು ಸಲ ಚಿಮಿಕಿಸುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

51 ತರುವಾಯ ದೇವದಾರು ಕಟ್ಟಿಗೆಯನ್ನೂ, ಹಿಸ್ಸೋಪನ್ನೂ, ರಕ್ತವರ್ಣ ದಾರವನ್ನೂ, ಸಜೀವವುಳ್ಳ ಪಕ್ಷಿಯನ್ನೂ ತೆಗೆದುಕೊಂಡು, ಅವುಗಳನ್ನು ವಧಿಸಿದ ಪಕ್ಷಿಯ ರಕ್ತದಲ್ಲಿ ಮತ್ತು ಹರಿಯುವ ನೀರಿನಲ್ಲಿ ಅದ್ದಿ, ಏಳು ಸಾರಿ ಆ ಮನೆಗೆ ಚಿಮುಕಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:51
4 ತಿಳಿವುಗಳ ಹೋಲಿಕೆ  

ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಿ


ಹಾಗೆ ಆ ಪಕ್ಷಿಯ ರಕ್ತ, ಸೆಲೇ ನೀರು, ಸಜೀವಪಕ್ಷಿ, ದೇವದಾರಿನ ಕಟ್ಟಿಗೆ, ಹಿಸ್ಸೋಪು, ರಕ್ತವರ್ಣದ ದಾರ ಇವುಗಳಿಂದ ಆ ಮನೆಯನ್ನು ಶುದ್ಧಿಮಾಡುವನು.


ಅವನು ಲೆಬನೋನಿನ ದೇವದಾರುವೃಕ್ಷ ಮೊದಲುಗೊಂಡು ಗೋಡೆಯಲ್ಲಿ ಬೆಳೆಯುವ ಹಿಸ್ಸೋಪ್ ಗಿಡದವರೆಗಿರುವ ಎಲ್ಲಾ ವನಸ್ಪತಿಗಳನ್ನೂ ಎಲ್ಲಾ ಪಶುಪಕ್ಷಿಜಲಜಂತು ಕ್ರಿವಿುಕೀಟಗಳನ್ನೂ ಕುರಿತು ಪ್ರಸ್ತಾಪಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು