Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 14:6 - ಕನ್ನಡ ಸತ್ಯವೇದವು J.V. (BSI)

6 ಮತ್ತೊಂದು ಪಕ್ಷಿಯನ್ನೂ ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಸೆಲೇ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನೂ ಸಜೀವವಾಗಿಯೇ ಅದ್ದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “ಅವನು ಮತ್ತೊಂದು ಪಕ್ಷಿಯನ್ನು, ಆ ದೇವದಾರಿನ ಕಟ್ಟಿಗೆಯನ್ನು, ರಕ್ತವರ್ಣವುಳ್ಳ ದಾರವನ್ನು ಮತ್ತು ಹಿಸ್ಸೋಪ್ ಗಿಡದ ಬರಲನ್ನು ತೆಗೆದುಕೊಂಡು ಹರಿಯುವ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಈ ಎಲ್ಲಾ ವಸ್ತುಗಳನ್ನು ಮತ್ತು ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್ ಗಿಡದ ಬರಲನ್ನೂ ತೆಗೆದುಕೊಂಡು ಒರತೆ ನೀರಿನ ಮೇಲೆ ವಧಿಸಿದ ಆ ಮೊದಲನೆಯ ಪಕ್ಷಿಯ ರಕ್ತದಲ್ಲಿ ಅವುಗಳನ್ನೆಲ್ಲಾ ಆ ಪಕ್ಷಿಯನ್ನು ಸಜೀವವಾಗಿಯೇ ಅದ್ದಿ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಯಾಜಕನು ಸಜೀವವಾದ ಎರಡನೆಯ ಪಕ್ಷಿಯನ್ನು, ದೇವದಾರು ಮರದ ತುಂಡನ್ನು, ಕೆಂಪುಬಣ್ಣದ ಬಟ್ಟೆಯ ತುಂಡನ್ನು ಮತ್ತು ಹಿಸ್ಸೋಪ್ ಗಿಡವನ್ನು ತೆಗೆದುಕೊಳ್ಳಬೇಕು. ಸೆಲೇ ನೀರಿನ ಮೇಲೆ ವಧಿಸಲ್ಪಟ್ಟ ಪಕ್ಷಿಯ ರಕ್ತದಲ್ಲಿ ಜೀವಂತವಾಗಿರುವ ಪಕ್ಷಿಯನ್ನು ಮತ್ತು ಇತರ ವಸ್ತುಗಳನ್ನು ಅದ್ದಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಇದಲ್ಲದೆ ಜೀವವುಳ್ಳ ಪಕ್ಷಿಯನ್ನೂ, ದೇವದಾರು ಕಟ್ಟಿಗೆಯನ್ನೂ, ರಕ್ತವರ್ಣದ ದಾರವನ್ನೂ ಮತ್ತು ಹಿಸ್ಸೋಪನ್ನೂ ತೆಗೆದುಕೊಂಡು, ಹರಿಯುವ ನೀರಿನ ಬಳಿಯಲ್ಲಿ ವಧಿಸಿದ ಆ ಪಕ್ಷಿಯ ರಕ್ತದಲ್ಲಿ ಅದ್ದಿ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 14:6
13 ತಿಳಿವುಗಳ ಹೋಲಿಕೆ  

ಸತ್ತವನಾದೆನು, ಮತ್ತು ಇಗೋ ಯುಗಯುಗಾಂತರಗಳಲ್ಲಿಯೂ ಬದುಕುವವನಾಗಿದ್ದೇನೆ; ಮರಣದ ಮತ್ತು ಪಾತಾಳದ ಬೀಗದ ಕೈಗಳು ನನ್ನಲ್ಲಿ ಅವೆ.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ಈತನು ದೇವರ ಪ್ರಭಾವದ ಪ್ರಕಾಶವೂ ಆತನ ತತ್ವದ ಮೂರ್ತಿಯೂ ತನ್ನ ಶಕ್ತಿಯ ವಾಕ್ಯದಿಂದ ಸಮಸ್ತಕ್ಕೆ ಆಧಾರವೂ ಆಗಿದ್ದು ಪಾಪವಿಶುದ್ಧಿಮಾಡಿದ ಮೇಲೆ ಉನ್ನತಲೋಕದೊಳಗೆ ಮಹತ್ವವುಳ್ಳ ದೇವರ ಬಲಗಡೆಯಲ್ಲಿ ಆಸನಾರೂಢನಾದನು.


ದೇವರಿಗೆ ವೈರಿಗಳಾಗಿದ್ದ ನಾವು ಆತನ ಮಗನ ಮರಣದ ಮೂಲಕ ಆತನೊಂದಿಗೆ ಸಮಾಧಾನವಾಗಿರಲಾಗಿ ಆತನ ಕೂಡ ಸಮಾಧಾನವಾದ ನಮಗೆ ಆ ಮಗನಿಗಿರುವ ಜೀವದಿಂದ ರಕ್ಷಣೆಯಾಗುವದು ಮತ್ತೂ ನಿಶ್ಚಯವಲ್ಲವೇ.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಇನ್ನು ಸ್ವಲ್ಪಕಾಲವಾದ ಮೇಲೆ ಲೋಕವು ನನ್ನನ್ನು ನೋಡುವದಿಲ್ಲ, ಆದರೆ ನೀವು ನನ್ನನ್ನು ನೋಡುವಿರಿ; ನಾನು ಬದುಕುವದರಿಂದ ನೀವೂ ಬದುಕುವಿರಿ.


ಆ ದಿನದಲ್ಲಿ ಪಾಪವನ್ನೂ ಅಶುಚಿಯನ್ನೂ ಪರಿಹರಿಸತಕ್ಕ ಒಂದು ಬುಗ್ಗೆಯು ದಾವೀದ ವಂಶದವರಿಗೂ ಯೆರೂಸಲೇವಿುನವರಿಗೂ ತೆರೆದಿರುವದು.


ಆಗ ಅವನಲ್ಲಿದ್ದ ಕುಷ್ಠವು ವಾಸಿಯಾಯಿತೆಂದು ಕಂಡರೆ ಶುದ್ಧ ಮಾಡಿಸಿಕೊಳ್ಳುವವನಿಗೋಸ್ಕರ ಸಜೀವವಾದ ಎರಡು ಶುದ್ಧ ಪಕ್ಷಿಗಳನ್ನೂ ದೇವದಾರಿನ ಕಟ್ಟಿಗೆಯನ್ನೂ ರಕ್ತವರ್ಣವುಳ್ಳ ದಾರವನ್ನೂ ಹಿಸ್ಸೋಪ್‍ಗಿಡದ ಬರಲನ್ನೂ ತರಬೇಕೆಂದು ಯಾಜಕನು ಆಜ್ಞಾಪಿಸಬೇಕು.


ಆ ಪಕ್ಷಿಗಳಲ್ಲಿ ಒಂದನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಬೇಕೆಂದು ಯಾಜಕನು ಆಜ್ಞಾಪಿಸಿ


ಹಿಸ್ಸೋಪ್ ಗಿಡದ ಬರಲಿನಿಂದ ನೀರನ್ನು ಚಿಮುಕಿಸಿಯೋ ಎಂಬಂತೆ ನನ್ನ ಅಶುದ್ಧತ್ವವನ್ನು ತೆಗೆದುಬಿಡು, ಆಗ ಶುದ್ಧನಾಗಿರುವೆನು; ನನ್ನನ್ನು ತೊಳೆ, ಆಗ ಹಿಮಕ್ಕಿಂತಲೂ ಬೆಳ್ಳಗಾಗುವೆನು.


ಒಂದು ಪಕ್ಷಿಯನ್ನು ಸೆಲೇ ನೀರಿನ ಮೇಲೆ ಮಣ್ಣಿನ ಪಾತ್ರೆಯಲ್ಲಿ ವಧಿಸಿ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು