Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:13 - ಕನ್ನಡ ಸತ್ಯವೇದವು J.V. (BSI)

13 ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧಮಾಡಿಸಿಕೊಳ್ಳುವದಕ್ಕೆ ಆಗಿನಿಂದ ಏಳು ದಿನಗಳನ್ನು ಲೆಕ್ಕಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸೆಲೇ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

13 “‘ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಸಿಕೊಳ್ಳುವುದಕ್ಕೆ ಆ ದಿನದಿಂದ ಏಳು ದಿನಗಳನ್ನು ಲೆಕ್ಕಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಂಡು, ಹರಿಯುವ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

13 ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ ಅವನು ಶುದ್ಧ ಮಾಡಿಸಿಕೊಳ್ಳುವುದಕ್ಕೆ ಆಗಿನಿಂದ ಏಳು ದಿನಗಳನ್ನು ಎಣಿಸಿಕೊಂಡು ತನ್ನ ಬಟ್ಟೆಗಳನ್ನು ಒಗೆದುಕೊಂಡು ಒರತೆ ನೀರಿನಿಂದ ತನ್ನ ಶರೀರವನ್ನು ತೊಳೆದುಕೊಂಡು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

13 “ಸ್ರಾವವುಳ್ಳವನ ಸ್ರಾವವು ನಿಂತು ವಾಸಿಯಾದಾಗ, ಅವನು ಶುದ್ಧಮಾಡಿಕೊಳ್ಳುವುದಕ್ಕೆ ಏಳು ದಿನಗಳವರೆಗೆ ಕಾಯಬೇಕು. ಬಳಿಕ ಅವನು ತನ್ನ ಬಟ್ಟೆಗಳನ್ನು ತೊಳೆದುಕೊಂಡು ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

13 “ ‘ಸ್ರಾವವುಳ್ಳವನು ತನ್ನ ಸ್ರಾವದಿಂದ ತನ್ನ ಶುದ್ಧತೆಗಾಗಿ ಏಳು ದಿನಗಳನ್ನು ಲೆಕ್ಕ ಮಾಡಿ, ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಇದಲ್ಲದೆ ಹರಿಯುವ ನೀರಿನಲ್ಲಿ ಸ್ನಾನಮಾಡಬೇಕು. ಆಗ ಅವನು ಶುದ್ಧನಾಗಿರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:13
16 ತಿಳಿವುಗಳ ಹೋಲಿಕೆ  

ಆಗ ಶುದ್ಧಮಾಡಿಸಿಕೊಳ್ಳುವವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸರ್ವಾಂಗಕ್ಷೌರಮಾಡಿಸಿಕೊಂಡು ಸ್ನಾನ ಮಾಡಿದ ಮೇಲೆ ಶುದ್ಧನಾಗುವನು; ತರುವಾಯ ಅವನು ಪಾಳೆಯದೊಳಗೆ ಬರಬಹುದು; ಆದರೂ ಏಳು ದಿನಗಳ ತನಕ ತನ್ನ ಡೇರೆಯ ಹೊರಗೇ ಇರಬೇಕು.


ಇದಲ್ಲದೆ ಈ ನಿಮ್ಮ ಯಾಜಕೋದ್ಯೋಗದ ದೀಕ್ಷೆಯು ಪೂರೈಸುವದಕ್ಕೆ ಏಳು ದಿವಸ ಹಿಡಿಯುವದಾದದರಿಂದ ಆವರೆಗೂ ನೀವು ದೇವದರ್ಶನದ ಗುಡಾರದ ಬಾಗಲಿನ ಆಚೆಗೆ ಹೋಗಬಾರದು.


ಅವಳಿಗೆ ರಕ್ತಸ್ರಾವ ನಿಂತ ದಿನದಿಂದ ಅವಳು ಏಳು ದಿನಗಳನ್ನು ಲೆಕ್ಕಿಸಿಕೊಂಡು ತರುವಾಯ ಶುದ್ಧಳಾಗುವಳು.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ಮತ್ತು ಆತನ ಸಿಂಹಾಸನದ ಮುಂದಿರುವ ಏಳು ಆತ್ಮಗಳಿಂದ ಮತ್ತು ನಂಬತಕ್ಕ ಸಾಕ್ಷಿಯೂ ಸತ್ತವರೊಳಗಿಂದ ಮೊದಲು ಎದ್ದುಬಂದವನೂ ಭೂರಾಜರ ಒಡೆಯನೂ ಆಗಿರುವ ಯೇಸು ಕ್ರಿಸ್ತನಿಂದ ನಿಮಗೆ ಕೃಪೆಯೂ ಶಾಂತಿಯೂ ಆಗಲಿ. ನಮ್ಮನ್ನು ಪ್ರೀತಿಸುವವನೂ ತನ್ನ ರಕ್ತದ ಮೂಲಕ ನಮ್ಮನ್ನು ಪಾಪಗಳಿಂದ ಬಿಡಿಸಿದವನೂ ನಮ್ಮನ್ನು ರಾಜ್ಯವನ್ನಾಗಿಯೂ


ದೇವರ ಸಮೀಪಕ್ಕೆ ಬನ್ನಿರಿ, ಆಗ ಆತನು ನಿಮ್ಮ ಸಮೀಪಕ್ಕೆ ಬರುವನು. ಪಾಪಿಗಳೇ, ನಿಮ್ಮ ಕೈಗಳನ್ನು ಶುಚಿಮಾಡಿಕೊಳ್ಳಿರಿ; ಎರಡು ಮನಸ್ಸುಳ್ಳವರೇ, ನಿಮ್ಮ ಹೃದಯಗಳನ್ನು ನಿರ್ಮಲಮಾಡಿಕೊಳ್ಳಿರಿ.


ಪ್ರಿಯರೇ, ಈ ವಾಗ್ದಾನಗಳು ನಮಗಿರುವದರಿಂದ ನಾವು ಶರೀರಾತ್ಮಗಳ ಕಲ್ಮಶವನ್ನು ತೊಲಗಿಸಿ ನಮ್ಮನ್ನು ಶುಚಿಮಾಡಿಕೊಂಡು ದೇವರ ಭಯದಿಂದ ಕೂಡಿದವರಾಗಿ ಪವಿತ್ರತ್ವವನ್ನು ಸಿದ್ಧಿಗೆ ತರುವದಕ್ಕೆ ಪ್ರಯತ್ನಿಸೋಣ.


ಅವರು ನನಗೆ ವಿರುದ್ಧವಾಗಿ ಮಾಡಿರುವ ಅಧರ್ಮವನ್ನೆಲ್ಲಾ ತೊಲಗಿಸಿ ಅವರನ್ನು ಶುದ್ಧೀಕರಿಸುವೆನು; ಅವರು ನನಗೆ ಪಾಪದ್ರೋಹಗಳನ್ನು ಮಾಡಿ ನಡಿಸಿರುವ ಅಪರಾಧಗಳನ್ನೆಲ್ಲಾ ಕ್ಷವಿುಸುವೆನು.


ಅದಕ್ಕೆ ಯೆಹೋವನು - ತಂದೆ ಮುಖದ ಮೇಲೆ ಉಗುಳಿದರೆ ಆಕೆ ಹೇಗೂ ಏಳು ದಿವಸ ನಾಚಿಕೆಯಿಂದ ಮರೆಯಾಗುವದಿಲ್ಲವೇ; ಹಾಗಾದರೆ ಆಕೆ ಏಳು ದಿವಸ ಪಾಳೆಯದ ಹೊರಗೆ ಇರಬೇಕು; ತರುವಾಯ ನೀನು ಆಕೆಯನ್ನು ಪಾಳೆಯದೊಳಗೆ ಸೇರಿಸಿಕೊಳ್ಳಬಹುದು ಎಂದು ಉತ್ತರಕೊಟ್ಟನು.


ಎಂಟನೆಯ ದಿನದಲ್ಲಿ ಅವನು ಪೂರ್ಣಾಂಗವಾದ ಎರಡು ಟಗರುಗಳನ್ನೂ ಪೂರ್ಣಾಂಗವಾದ ಒಂದು ವರುಷದ ಕುರಿಯನ್ನೂ ನೈವೇದ್ಯಕ್ಕಾಗಿ ಎಣ್ಣೇ ಕಲಸಿದ ಒಂಭತ್ತು ಸೇರು ಗೋದಿಹಿಟ್ಟನ್ನೂ ಒಂದು ಸೇರು ಎಣ್ಣೆಯನ್ನೂ ತೆಗೆದುಕೊಂಡು ಬರಬೇಕು.


ಎಂಟನೆಯ ದಿನದಲ್ಲಿ ಮೋಶೆ ಆರೋನನನ್ನೂ ಅವನ ಮಕ್ಕಳನ್ನೂ ಇಸ್ರಾಯೇಲ್ಯರ ಹಿರಿಯರನ್ನೂ ಕರೆದು ಆರೋನನಿಗೆ ಹೀಗಂದನು -


ಹೀಗೆ ಏಳು ದಿನಗಳವರೆಗೂ ಯಜ್ಞವೇದಿಯ ನಿವಿುತ್ತವಾಗಿ ದೋಷಪರಿಹಾರಕಾಚಾರವನ್ನು ನಡಿಸಿ ಅದನ್ನು ಪ್ರತಿಷ್ಠಿಸಬೇಕು. ಯಜ್ಞವೇದಿಯು ಅತಿಪರಿಶುದ್ಧವಾಗಿರಬೇಕು; ಯಜ್ಞವೇದಿಗೆ ಸೋಂಕಿದ್ದೆಲ್ಲವು ಪರಿಶುದ್ಧವಾಗಿರಬೇಕು.


ನಾನು ನಿನಗೆ ಆಜ್ಞಾಪಿಸಿದ ರೀತಿಯಲ್ಲಿ ಏಳು ದಿವಸದ ಆಚಾರವನ್ನು ನಡಿಸಿ ಆರೋನನನ್ನೂ ಅವನ ಮಕ್ಕಳನ್ನೂ ಉದ್ಯೋಗಕ್ಕೆ ಸೇರಿಸಬೇಕು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು