Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:14 - ಕನ್ನಡ ಸತ್ಯವೇದವು J.V. (BSI)

14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಎಂಟನೆಯ ದಿನದಲ್ಲಿ ಎರಡು ಬೆಳವಕ್ಕಿಗಳನ್ನಾಗಲಿ ಅಥವಾ ಎರಡು ಪಾರಿವಾಳದ ಮರಿಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಯೆಹೋವನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಎಂಟನೆಯ ದಿನ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಮರಿ ಪಾರಿವಾಳಗಳನ್ನಾಗಲಿ ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲಿಗೆ ಸರ್ವೇಶ್ವರನ ಸನ್ನಿಧಿಗೆ ಬಂದು ಯಾಜಕನಿಗೆ ಒಪ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಎಂಟನೆಯ ದಿನದಲ್ಲಿ ಆ ವ್ಯಕ್ತಿ ತನಗೋಸ್ಕರ ಎರಡು ಬೆಳವಕ್ಕಿಗಳನ್ನು ಅಥವಾ ಎರಡು ಪಾರಿವಾಳದ ಮರಿಗಳನ್ನು ತೆಗೆದುಕೊಳ್ಳಬೇಕು. ಅವನು ದೇವದರ್ಶನ ಗುಡಾರದ ಬಾಗಿಲಿನ ಬಳಿ ಯೆಹೋವನ ಸನ್ನಿಧಿಗೆ ಬರಬೇಕು. ಆ ವ್ಯಕ್ತಿ ಎರಡು ಪಕ್ಷಿಗಳನ್ನು ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಎಂಟನೆಯ ದಿನದಲ್ಲಿ ಅವನು ತನಗಾಗಿ ಎರಡು ಬೆಳವಕ್ಕಿಗಳನ್ನು ಇಲ್ಲವೆ ಎರಡು ಪಾರಿವಾಳ ಮರಿಗಳನ್ನು ತೆಗೆದುಕೊಂಡು ದೇವದರ್ಶನದ ಗುಡಾರದ ಬಾಗಿಲ ಬಳಿ ಯೆಹೋವ ದೇವರ ಎದುರಿನಲ್ಲಿ ಬಂದು ಅವುಗಳನ್ನು ಯಾಜಕನಿಗೆ ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:14
11 ತಿಳಿವುಗಳ ಹೋಲಿಕೆ  

ಕುರಿಯನ್ನು ಕೊಡುವದಕ್ಕೆ ಗತಿಯಿಲ್ಲದಿದ್ದರೆ ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ತಂದು ಸರ್ವಾಂಗಹೋಮಕ್ಕಾಗಿ ಒಂದನ್ನೂ ದೋಷಪರಿಹಾರಕ್ಕಾಗಿ ಒಂದನ್ನೂ ಸಮರ್ಪಿಸಬೇಕು. ಯಾಜಕನು ಅವಳಿಗೋಸ್ಕರ ದೋಷಪರಿಹಾರವನ್ನು ಮಾಡಿದಾಗ ಶುದ್ಧಳಾಗುವಳು.


ಪವಿತ್ರರಾಗುತ್ತಿರುವವರನ್ನು ಒಂದೇ ಸಮರ್ಪಣೆಯಿಂದ ನಿರಂತರವಾಗಿ ಸಿದ್ಧಿಗೆ ತಂದಿದ್ದಾನಷ್ಟೆ.


ಆದರೆ ಈ ಯಾಜಕನು ಪಾಪನಿವಾರಣೆಗೋಸ್ಕರ ನಿರಂತರವಾಗಿ ನಿಲ್ಲುವ ಒಂದೇ ಯಜ್ಞವನ್ನು ಸಮರ್ಪಿಸಿ ದೇವರ ಬಲಗಡೆಯಲ್ಲಿ ಕೂತುಕೊಂಡನು.


ಯೇಸು ಕ್ರಿಸ್ತನು ಒಂದೇ ಸಾರಿ ದೇಹ ಸಮರ್ಪಣೆಮಾಡಿ ದೇವರ ಚಿತ್ತವನ್ನು ನೆರವೇರಿಸಿದ್ದರಿಂದಲೇ ನಾವು ಶುದ್ಧರಾದೆವು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ಎಂಟನೆಯ ದಿನದಲ್ಲಿ ಅವನು ಎರಡು ಬೆಳವಕ್ಕಿಗಳನ್ನಾಗಲಿ ಎರಡು ಪಾರಿವಾಳದ ಮರಿಗಳನ್ನಾಗಲಿ ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತರಬೇಕು.


ಗಂಡುಮಗುವನ್ನು ಹೆತ್ತರೂ ಹೆಣ್ಣು ಮಗುವನ್ನು ಹೆತ್ತರೂ ಅವಳ ಶುದ್ಧೀಕರಣದ ದಿನಗಳು ಪೂರೈಸಿದಾಗ ಅವಳು ಸರ್ವಾಂಗಹೋಮಕ್ಕಾಗಿ ಒಂದು ವರುಷದ ಕುರಿಯನ್ನು, ದೋಷಪರಿಹಾರಕ್ಕಾಗಿ ಪಾರಿವಾಳದ ಮರಿಯನ್ನು ಇಲ್ಲವೆ ಬೆಳವಕ್ಕಿಯನ್ನು ದೇವದರ್ಶನದ ಗುಡಾರದ ಬಾಗಲಿಗೆ ತಂದು ಯಾಜಕನಿಗೆ ಒಪ್ಪಿಸಬೇಕು.


ಯೆಹೋವನಿಗೆ ಸರ್ವಾಂಗಹೋಮವಾಗಿ ಅರ್ಪಿಸುವಂಥದು ಪಕ್ಷಿಜಾತಿಯಾಗಿದ್ದರೆ ಅದು ಬೆಳವಕ್ಕಿಯಾಗಲಿ ಪಾರಿವಾಳದ ಮರಿಯಾಗಲಿ ಇರಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು