Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 15:31 - ಕನ್ನಡ ಸತ್ಯವೇದವು J.V. (BSI)

31 ಇಸ್ರಾಯೇಲ್ಯರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಇಸ್ರಾಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾಗುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಇಸ್ರಯೇಲರು ಅಶುದ್ಧತೆಗೆ ದೂರವಾಗಿರುವಂತೆ ನೀವು ಅವರನ್ನು ಈ ರೀತಿಯಾಗಿ ಕಾಪಾಡಬೇಕು. ಅವರು ಅಪವಿತ್ರರಾಗಿದ್ದು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಹೊಲೆಮಾಡಿದರೆ ನಾಶವಾದಾರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಆದ್ದರಿಂದ ಅಶುದ್ಧತ್ವದ ಕುರಿತು ನೀವು ಇಸ್ರೇಲರನ್ನು ಎಚ್ಚರಿಸಬೇಕು. ನೀವು ಜನರನ್ನು ಎಚ್ಚರಿಸದಿದ್ದರೆ ಅವರು ನನ್ನ ಪವಿತ್ರ ಗುಡಾರವನ್ನು ಅಶುದ್ಧಮಾಡಿ ಸಾವಿಗೀಡಾಗುವರು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ ‘ಹೀಗೆ ನೀವು ಇಸ್ರಾಯೇಲರನ್ನು ಅಶುದ್ಧತೆಯಿಂದ ದೂರವಾಗಿರುವಂತೆ ನೋಡಿಕೊಳ್ಳಬೇಕು. ಆಗ ಅವರು ತಮ್ಮ ಮಧ್ಯದಲ್ಲಿರುವ ನನ್ನ ಗುಡಾರವನ್ನು ಅಶುದ್ಧ ಮಾಡದೆ, ತಮ್ಮ ಅಶುದ್ಧತ್ವದಿಂದ ಸಾಯುವುದಿಲ್ಲ.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 15:31
22 ತಿಳಿವುಗಳ ಹೋಲಿಕೆ  

ಅಶುದ್ಧನಾಗಿ ದೋಷಪರಿಹಾರಮಾಡಿಕೊಳ್ಳದವನು ಯೆಹೋವನ ದೇವಸ್ಥಾನವನ್ನು ಅಪವಿತ್ರಪಡಿಸಿದ ಕಾರಣ ಸಭೆಯಿಂದ ತೆಗೆಯಲ್ಪಡಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಹೋದದರಿಂದ ಅವನು ಅಶುದ್ಧನೇ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನನ್ನ ಜೀವದಾಣೆ, ನೀನು ನಿನ್ನ ಹೇರಳವಾದ ಹೇಯ ವಿಗ್ರಹಗಳಿಂದಲೂ ಅಸಹ್ಯವಸ್ತುಗಳಿಂದಲೂ ನನ್ನ ಪವಿತ್ರಾಲಯವನ್ನು ಹೊಲಸು ಮಾಡಿದ್ದರಿಂದ ಖಂಡಿತವಾಗಿ ನಾನು ಸಹಿಸೆನು, ಕಟಾಕ್ಷಿಸೆನು, ಕ್ಷವಿುಸೆನು.


ಮನುಷ್ಯನ ಶವ ಸೋಂಕಿದವನು ದೋಷಪರಿಹಾರವನ್ನು ಮಾಡಿಕೊಳ್ಳದೆಹೋದರೆ ಅವನು ಯೆಹೋವನ ಗುಡಾರವನ್ನು ಅಪವಿತ್ರಪಡಿಸುವವನಾದನು. ಅಂಥವನನ್ನು ಇಸ್ರಾಯೇಲ್ಯರಿಂದ ತೆಗೆದುಹಾಕಬೇಕು. ಹೊಲೆಗಳೆವ ನೀರನ್ನು ತನ್ನ ಮೇಲೆ ಚಿವಿುಕಿಸಿಕೊಳ್ಳದೆ ಇರುವದರಿಂದ ಅವನು ಅಶುದ್ಧನು; ಅವನಿಗುಂಟಾದ ಅಪವಿತ್ರತೆಯು ಇದ್ದೇ ಇರುವದು.


ಇದಲ್ಲದೆ ನನಗೆ ಈ ಅಪರಾಧವನ್ನು ನಡಿಸಿದ್ದಾರೆ; ಆಹುತಿಕೊಟ್ಟ ದಿನದಲ್ಲೇ ನನ್ನ ಪವಿತ್ರಾಲಯವನ್ನು ಅಪವಿತ್ರಪಡಿಸಿ ನಾನು ನೇವಿುಸಿದ ಸಬ್ಬತ್ ದಿನವನ್ನು ಹೊಲಸುಮಾಡಿದರು.


ಪಾಳೆಯದಿಂದ ಹೊರಡಿಸಬೇಕೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸು. ಅಂಥವರು ಗಂಡಸರೇ ಆಗಲಿ ಹೆಂಗಸರೇ ಆಗಲಿ, ಅವರೆಲ್ಲರನ್ನೂ ಪಾಳೆಯದಿಂದ ಹೊರಡಿಸಬೇಕು.


ಯಾಕಂದರೆ ಭಕ್ತಿಹೀನರೂ ನಮ್ಮ ದೇವರ ಕೃಪೆಯನ್ನು ನೆವಮಾಡಿಕೊಂಡು ನಾಚಿಕೆಗೆಟ್ಟ ಕೃತ್ಯಗಳನ್ನು ನಡಿಸುವವರೂ ನಮ್ಮ ಒಬ್ಬನೇ ಒಡೆಯನೂ ಕರ್ತನೂ ಆಗಿರುವ ಯೇಸು ಕ್ರಿಸ್ತನನ್ನು ಅರಿಯದವರೂ ಆಗಿರುವ ಕೆಲವು ಜನರು ಸಭೆಯಲ್ಲಿ ಕಳ್ಳತನದಿಂದ ಹೊಕ್ಕಿದ್ದಾರೆ; ಅವರಿಗೆ ಈ ದಂಡನೆಯಾಗಬೇಕೆಂದು ಪೂರ್ವದಲ್ಲೇ ಅವರ ವಿಷಯವಾಗಿ ಬರೆದದೆ.


ಯಾವನು ದೇವಕುಮಾರನನ್ನು ತುಳಿದು ಒಡಂಬಡಿಕೆಯನ್ನು ಸ್ಥಿರಪಡಿಸಿದಂಥ ತನ್ನನ್ನು ಪವಿತ್ರಮಾಡಿದಂಥ ರಕ್ತವನ್ನು ಅಶುದ್ಧವೆಂದೆಣಿಸಿ ದೇವರ ಕೃಪಾವರವಾಗಿರುವ ಆತ್ಮನನ್ನು ತಿರಸ್ಕಾರ ಮಾಡಿದ್ದಾನೋ ಅವನು ಇನ್ನೂ ಎಷ್ಟೋ ಕ್ರೂರವಾದ ದಂಡನೆಗೆ ಪಾತ್ರನಾಗಬೇಕೆಂಬದನ್ನು ಯೋಚಿಸಿರಿ.


ಯಾವನಾದರೂ ದೇವರ ಆಲಯವನ್ನು ಕೆಡಿಸಿದರೆ ದೇವರು ಅವನನ್ನು ಕೆಡಿಸುವನು. ಯಾಕಂದರೆ ದೇವರ ಆಲಯವು ಪವಿತ್ರವಾದದ್ದು, ಆ ಆಲಯವು ನೀವೇ.


ಮೀಸಲಾದದ್ದಕ್ಕೂ ಮೀಸಲಲ್ಲದ್ದಕ್ಕೂ ಭೇದವನ್ನು ನನ್ನ ಜನರಿಗೆ ತೋರಿಸಿ ಶುದ್ಧಾಶುದ್ಧವಿವೇಚನೆಯನ್ನು ಅವರಿಗೆ ಬೋಧಿಸಲಿ.


ಆ ಪ್ರಭುವು ಒಂದು ವಾರದ ಮಟ್ಟಿಗೆ ಬಹುಜನರೊಂದಿಗೆ ದೃಢವಾದ ಒಡಂಬಡಿಕೆಯನ್ನು ಮಾಡಿಕೊಳ್ಳುವನು; ಅರ್ಧವಾರ ಯಜ್ಞನೈವೇದ್ಯಗಳನ್ನು ನಿಲ್ಲಿಸುವನು; ಅಸಹ್ಯಗಳನ್ನು ವಾಹನಮಾಡಿಕೊಂಡು ಒಬ್ಬ ಘಾತಕನು ಹಾರಿಬಂದು ನಿಶ್ಚಿತಪ್ರಲಯವು ಅವನನ್ನು ಮುಣುಗಿಸುವ ತನಕ ಹಾಳುಮಾಡುವನು.


ನಾನು ಕೆಟ್ಟತನದ ಮೇಲೆ ಮನಸ್ಸಿಟ್ಟಿದ್ದರೆ ಸ್ವಾವಿುಯು ನನ್ನ ವಿಜ್ಞಾಪನೆಯನ್ನು ಕೇಳುತ್ತಿದ್ದಿಲ್ಲ.


ಕುಷ್ಠರೋಗಿಗಳ ವಿಷಯದಲ್ಲಿ ಯಾಜಕರಾದ ಲೇವಿಯರು ಬೋಧಿಸುವಂತೆಯೇ ಮಾಡುವದಕ್ಕೆ ನೀವು ಜಾಗರೂಕರಾಗಿರಬೇಕು; ನಾನು ಅವರಿಗೆ ಆಜ್ಞಾಪಿಸಿದ ನಿಯಮಗಳನ್ನೇ ನೀವು ಅನುಸರಿಸಬೇಕು.


ಅವನಿಗೆ ಕಳಂಕವಿರುವದರಿಂದ ತೆರೆಯನ್ನು ದಾಟಿ ಒಳಗೆ ಬರಬಾರದು; ಯಜ್ಞವೇದಿಯ ಬಳಿಗೆ ಬರಬಾರದು; ನನ್ನ ಪವಿತ್ರಸ್ಥಾನಗಳ ಗೌರವಕ್ಕೆ ಅವನಿಂದ ಕುಂದು ಉಂಟಾಗಬಾರದು; ಆ ಸ್ಥಾನಗಳನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು; ನನ್ನ ದೇವಸ್ಥಾನದ ವಿಷಯದಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಯೆಹೋವನು.


ಉಣ್ಣೇಬಟ್ಟೆಯಲ್ಲಾಗಲಿ ನಾರಿನ ಬಟ್ಟೆಯಲ್ಲಾಗಲಿ ಹಾಸಿನಲ್ಲಾಗಲಿ ಹೊಕ್ಕಿನಲ್ಲಾಗಲಿ ತೊಗಲಿನ ಸಾಮಾನಿನಲ್ಲಾಗಲಿ ಕಾಣಬಂದ ಕುಷ್ಠರೋಗದ ಗುರುತಿನ ವಿಷಯವಾದ ವಿಧಿ ಇದೇ. ಅದು ಶುದ್ಧವೆಂದು ನಿರ್ಣಯಿಸಬೇಕೋ ಅಶುದ್ಧವೆಂದು ನಿರ್ಣಯಿಸಬೇಕೋ ಎಂಬದು ಇದರಿಂದ ತಿಳಿಯುವದು.


ಇದರಿಂದ ಶುದ್ಧಾಶುದ್ಧಗಳನ್ನೂ ಭಕ್ಷ್ಯಾಭಕ್ಷ್ಯಗಳನ್ನೂ ವಿವೇಚಿಸುವದಕ್ಕೆ ನಿಮ್ಮಿಂದಾಗುವದು.


ಮೇಹಸ್ರಾವವುಳ್ಳವನು, ವೀರ್ಯಸ್ಖಲನದಿಂದ ಅಶುದ್ಧನಾದವನು,


ಏಲಿಯ ಮನೆಯವರ ಅಪರಾಧಕ್ಕೆ ಯಜ್ಞ ನೈವೇದ್ಯಗಳಿಂದಲೂ ಎಂದಿಗೂ ಪ್ರಾಯಶ್ಚಿತ್ತವಾಗುವದಿಲ್ಲವೆಂಬದಾಗಿ ಆಣೆಯಿಟ್ಟಿದ್ದೇನೆ ಎಂದು ಹೇಳಿದನು.


ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಹೊಲೆಗೈದರು; ಅವರ ನಡತೆಯು ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು