Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 16:10 - ಕನ್ನಡ ಸತ್ಯವೇದವು J.V. (BSI)

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ ಅದರ ಮೇಲೆ ದೋಷಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಯೆಹೋವನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷವನ್ನು ಹೊರಿಸಿ ಅರಣ್ಯಕ್ಕೆ ಅಜಾಜೇಲನಿಗಾಗಿ ಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಯಾವ ಹೋತ ಅಜಾಜೇಲನದೆಂದು ಗೊತ್ತಾಗುವುದೋ ಅದನ್ನು ಸರ್ವೇಶ್ವರನ ಸನ್ನಿಧಿಯಲ್ಲಿ ಸಜೀವವಾಗಿಯೇ ನಿಲ್ಲಿಸಿ, ಅದರ ಮೇಲೆ ದೋಷ ಹೊರಿಸಿ, ಮರುಭೂಮಿಗೆ ಅಜಾಜೇಲನಿಗಾಗಿ ಬಿಡಿಸಿಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಆದರೆ ಚೀಟು ಹಾಕುವುದರ ಮೂಲಕ ಅಜಾಜೇಲನಿಗಾಗಿ ಆರಿಸಲ್ಪಟ್ಟ ಹೋತವನ್ನು ಜೀವಂತವಾಗಿ ಯೆಹೋವನ ಸನ್ನಿಧಿಗೆ ತರಬೇಕು ಮತ್ತು ಈ ಹೋತವನ್ನು ಮರುಭೂಮಿಯಲ್ಲಿರುವ ಅಜಾಜೇಲನಿಗೆ ಕಳುಹಿಸಬೇಕು. ಜನರಿಗೋಸ್ಕರ ಪ್ರಾಯಶ್ಚಿತ್ತ ಮಾಡಲು ಹೀಗೆ ಮಾಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 ಆದರೆ ಬಲಿಪಶುವಿಗಾಗಿ ಚೀಟು ಬಿದ್ದ ಆ ಹೋತವನ್ನು ತನ್ನೊಂದಿಗೆ ಪ್ರಾಯಶ್ಚಿತ್ತ ಮಾಡುವುದಕ್ಕಾಗಿ ಯೆಹೋವ ದೇವರ ಸನ್ನಿಧಿಯಲ್ಲಿ ಸಜೀವವಾಗಿ ನಿಲ್ಲಿಸಿ, ಅದನ್ನು ಬಲಿಪಶುವಾಗಿ ಕಾಡಿನಲ್ಲಿ ಹೋಗುವಂತೆ ಬಿಟ್ಟುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 16:10
12 ತಿಳಿವುಗಳ ಹೋಲಿಕೆ  

ಆತನು ನಮ್ಮ ಪಾಪಗಳನ್ನು ನಿವಾರಣಮಾಡುವ ಯಜ್ಞವಾಗಿದ್ದಾನೆ; ನಮ್ಮ ಪಾಪಗಳನ್ನು ಮಾತ್ರವಲ್ಲದೆ ಸಮಸ್ತ ಲೋಕದ ಪಾಪಗಳನ್ನು ಸಹ ನಿವಾರಣಮಾಡುತ್ತಾನೆ.


ಕ್ರಿಸ್ತನು ನಮಗೋಸ್ಕರ ತನ್ನ ಪ್ರಾಣವನ್ನು ಕೊಟ್ಟದರಲ್ಲಿಯೇ ಪ್ರೀತಿ ಇಂಥದೆಂದು ನಮಗೆ ತಿಳಿದು ಬಂದದೆ. ನಾವು ಸಹ ಸಹೋದರರಿಗೋಸ್ಕರ ನಮ್ಮ ಪ್ರಾಣಗಳನ್ನು ಕೊಡುವ ಹಂಗಿನಲ್ಲಿದ್ದೇವೆ.


ನಾವು ಆತನಲ್ಲಿ ದೇವರಿಗೆ ಸಮರ್ಪಕರಾದ ನೀತಿಸ್ವರೂಪಿಗಳಾಗುವಂತೆ ದೇವರು ಪಾಪಜ್ಞಾನವಿಲ್ಲದ ಆತನನ್ನು ನಮಗೋಸ್ಕರ ಪಾಪ ಸ್ವರೂಪಿಯಾಗ ಮಾಡಿದನು.


ದೇವರು ಆತನನ್ನು ನಮ್ಮ ಅಪರಾಧಗಳ ನಿವಿುತ್ತ ಮರಣಕ್ಕೆ ಒಪ್ಪಿಸಿಕೊಟ್ಟು ನಮಗೆ ನೀತಿವಂತರೆಂಬ ನಿರ್ಣಯವು ಉಂಟಾಗುವ ನಿವಿುತ್ತ ಜೀವದಿಂದ ಎಬ್ಬಿಸಿದನು.


ಈತನು ತನ್ನ ರಕ್ತವನ್ನು ಸುರಿಸಿ ನಂಬಿಕೆಯಿದ್ದವರಿಗಾಗಿ ಕೃಪಾಧಾರವಾಗಬೇಕೆಂದು ದೇವರು ಈತನನ್ನು ಮುಂದಿಟ್ಟನು.


ಕುಷ್ಠರೋಗದ ವಿಷಯದಲ್ಲಿ ಶುದ್ಧಮಾಡಿಸಿಕೊಳ್ಳುವವನ ಮೇಲೆ ಏಳು ಸಾರಿ ಆ ರಕ್ತವನ್ನು ಚಿವಿುಕಿಸಿ ಅವನನ್ನು ಶುದ್ಧನೆಂದು ನಿರ್ಣಯಿಸಿ ಆ ಜೀವವುಳ್ಳ ಪಕ್ಷಿಯನ್ನು ಅಡವಿಯ ಕಡೆಗೆ ಬಿಟ್ಟುಬಿಡಬೇಕು.


ಆಗ ಅವನು ಆ ಹೋತಗಳ ವಿಷಯವಾಗಿ ಯೆಹೋವನಿಗೋಸ್ಕರವೆಂದೂ ಅಜಾಜೇಲನಿಗೋಸ್ಕರವೆಂದೂ ಚೀಟುಗಳನ್ನು ಬರೆದುಹಾಕಬೇಕು.


ಯಾವ ಹೋತ ಯೆಹೋವನದೆಂದು ಗೊತ್ತಾಗುವದೋ ಅದನ್ನು ಆರೋನನು ದೋಷಪರಿಹಾರಕ ಯಜ್ಞರೂಪವಾಗಿ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು