ಯಾಜಕಕಾಂಡ 16:4 - ಕನ್ನಡ ಸತ್ಯವೇದವು J.V. (BSI)4 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಮುಂಡಾಸವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವದಕ್ಕೆ ಮುಂಚೆ ಸ್ನಾನಮಾಡಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು, ನಾರಿನ ಒಳಉಡುಪನ್ನು ಹಾಕಿಕೊಂಡು, ನಾರಿನ ನಡುಕಟ್ಟನ್ನು ಕಟ್ಟಿಕೊಂಡು ಮತ್ತು ತಲೆಗೆ ನಾರಿನ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 ಅವನು ಪರಿಶುದ್ಧವಾದ ನಾರಿನ ನಿಲುವಂಗಿಯನ್ನು ತೊಟ್ಟುಕೊಂಡು ನಾರಿನ ಚಡ್ಡಿಯನ್ನು ಹಾಕಿಕೊಂಡು ನಾರಿನ ನಡುಕಟ್ಟನ್ನು ಕಟ್ಟಿಕೊಂಡು ತಲೆಗೆ ಪೇಟವನ್ನು ಸುತ್ತಿಕೊಳ್ಳಬೇಕು. ಅವು ದೀಕ್ಷಾವಸ್ತ್ರಗಳಾದುದರಿಂದ ಅವನು ಅವುಗಳನ್ನು ಧರಿಸಿಕೊಳ್ಳುವುದಕ್ಕೆ ಮುಂಚೆ ಸ್ನಾನಮಾಡಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 ಆರೋನನು ತನ್ನ ಪೂರ್ಣಶರೀರವನ್ನು ನೀರಿನಿಂದ ತೊಳೆದುಕೊಳ್ಳಬೇಕು. ಬಳಿಕ ಅವನು ಈ ಬಟ್ಟೆಗಳನ್ನು ಹಾಕಿಕೊಳ್ಳಬೇಕು. ಆರೋನನು ಪವಿತ್ರ ನಾರಿನ ನಿಲುವಂಗಿಯನ್ನೂ ನಾರಿನ ಚಡ್ಡಿಯನ್ನೂ ಧರಿಸಿಕೊಂಡಿರಬೇಕು. ಅವನು ನಾರಿನ ನಡುಕಟ್ಟನ್ನು ಕಟ್ಟಿಕೊಳ್ಳಬೇಕು; ನಾರಿನ ಮುಂಡಾಸವನ್ನು ಇಟ್ಟುಕೊಳ್ಳಬೇಕು. ಇವುಗಳು ಪವಿತ್ರವಾದವುಗಳಾಗಿವೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 ಅವನು ಪರಿಶುದ್ಧವಾದ ನಾರುಬಟ್ಟೆಯ ಮೇಲಂಗಿಯನ್ನು ತೊಟ್ಟುಕೊಂಡು, ತನ್ನ ಶರೀರದ ಮೇಲೆ ನಾರುಬಟ್ಟೆಯ ಒಳಉಡುಪನ್ನು ಹಾಕಿಕೊಳ್ಳಬೇಕು ಮತ್ತು ನಾರಿನ ನಡುಕಟ್ಟನ್ನು ಕಟ್ಟಿಕೊಂಡು, ನಾರಿನ ಮುಂಡಾಸವನ್ನು ಧರಿಸಬೇಕು. ಇವು ಪವಿತ್ರವಾದ ಉಡುಪುಗಳು. ಆದಕಾರಣ ಅವನು ನೀರಿನಿಂದ ಸ್ನಾನಮಾಡಿ ಅವುಗಳನ್ನು ಧರಿಸಿಕೊಳ್ಳಬೇಕು. ಅಧ್ಯಾಯವನ್ನು ನೋಡಿ |