ಯಾಜಕಕಾಂಡ 16:8 - ಕನ್ನಡ ಸತ್ಯವೇದವು J.V. (BSI)8 ಆಗ ಅವನು ಆ ಹೋತಗಳ ವಿಷಯವಾಗಿ ಯೆಹೋವನಿಗೋಸ್ಕರವೆಂದೂ ಅಜಾಜೇಲನಿಗೋಸ್ಕರವೆಂದೂ ಚೀಟುಗಳನ್ನು ಬರೆದುಹಾಕಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20198 ಆಗ ಅವನು ಆ ಹೋತಗಳಲ್ಲಿ ಒಂದು ಯೆಹೋವನಿಗೋಸ್ಕರವೆಂದು ಮತ್ತೊಂದು ಅಜಾಜೇಲನಿಗೋಸ್ಕರವೆಂದು ಚೀಟುಗಳನ್ನು ಬರೆದು ಹಾಕಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)8 ಆಗ ಅವನು ಆ ಹೋತಗಳಲ್ಲಿ ಯಾವುದು ಸರ್ವೇಶ್ವರನಿಗೆ, ಯಾವುದು ಅಜಾಜೇಲನಿಗೆ ಎಂದು ತಿಳಿದುಕೊಳ್ಳಲು ದಾಳಹಾಕಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್8 ಆರೋನನು ಚೀಟುಹಾಕಿ ಒಂದು ಹೋತವನ್ನು ಯೆಹೋವನಿಗಾಗಿಯೂ ಇನ್ನೊಂದನ್ನು ಅಜಾಜೇಲನಿಗಾಗಿಯೂ ಎಂದು ನಿರ್ಧರಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ8 ಆರೋನನು ಆ ಎರಡು ಹೋತಗಳಿಗಾಗಿ ಚೀಟುಹಾಕಬೇಕು. ಒಂದು ಚೀಟು ಯೆಹೋವ ದೇವರಿಗೋಸ್ಕರ, ಮತ್ತೊಂದು ಚೀಟು ಬಲಿಪಶುವಿಗೋಸ್ಕರ. ಅಧ್ಯಾಯವನ್ನು ನೋಡಿ |
ನೀವು ಚೀಟುಹಾಕಿ ಆ ದೇಶವನ್ನು ನಿಮ್ಮನಿಮ್ಮ ಕುಟುಂಬಗಳಿಗೆ ಹಂಚಿಕೊಳ್ಳಬೇಕು. ಹೆಚ್ಚು ಮಂದಿಯುಳ್ಳ ಕುಟುಂಬಕ್ಕೆ ಹೆಚ್ಚಾಗಿಯೂ ಕಡಿಮೆಯಾದ ಕುಟುಂಬಕ್ಕೆ ಕಡಿಮೆಯಾಗಿಯೂ ಸ್ವಾಸ್ತ್ಯವು ದೊರಕಬೇಕು. ಒಂದೊಂದು ಕುಟುಂಬದ ಚೀಟು ಯಾವ ಯಾವ ಸ್ಥಳವನ್ನು ಸೂಚಿಸುವದೋ ಆ ಸ್ಥಳದಲ್ಲಿಯೇ ಆ ಕುಟುಂಬದ ಸ್ವಾಸ್ತ್ಯವಿರಬೇಕು. ಒಂದೊಂದು ಕುಲದ ಕುಟುಂಬಗಳು ಒಂದೇ ಪ್ರದೇಶದಲ್ಲಿರಬೇಕು.