ಯಾಜಕಕಾಂಡ 17:12 - ಕನ್ನಡ ಸತ್ಯವೇದವು J.V. (BSI)12 ಆದದರಿಂದ - ನಿಮ್ಮಲ್ಲಿಯಾಗಲಿ ನಿಮ್ಮ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲ್ಯರಿಗೆ ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201912 ಆದುದರಿಂದ ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ನಡುವೆ ವಾಸವಾಗಿರುವ ಅನ್ಯದೇಶದವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಇಸ್ರಾಯೇಲರಿಗೆ ಆಜ್ಞಾಪಿಸಿದ್ದೇನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)12 ಎಂದೇ ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ವಾಸಮಾಡುವ ಅನ್ಯದೇಶೀಯವರಲ್ಲಾಗಲಿ ಯಾರೂ ರಕ್ತಭೋಜನ ಮಾಡಬಾರದೆಂದು ಸರ್ವೇಶ್ವರ ಇಸ್ರಯೇಲರಿಗೆ ಆಜ್ಞಾಪಿಸಿದ್ದಾರೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್12 ಆದ್ದರಿಂದ ನಾನು ಇಸ್ರೇಲರಿಗೆ ಹೇಳುವುದೇನೆಂದರೆ: ನಿಮ್ಮಲ್ಲಿ ಯಾವನೂ ರಕ್ತಭೋಜನ ಮಾಡಬಾರದು ಮತ್ತು ನಿಮ್ಮ ಮಧ್ಯದಲ್ಲಿ ವಾಸಿಸುವ ಯಾವ ಪರದೇಶಸ್ಥನೂ ರಕ್ತಭೋಜನ ಮಾಡಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ12 ಆದಕಾರಣ ನಾನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಿದೆನು, “ನಿಮ್ಮಲ್ಲಿಯಾಗಲಿ, ನಿಮ್ಮ ನಡುವೆ ತಂಗಿರುವ ಪರಕೀಯರಲ್ಲಿಯಾಗಲಿ ಯಾರೂ ರಕ್ತವನ್ನು ಭುಜಿಸಬಾರದು.” ಅಧ್ಯಾಯವನ್ನು ನೋಡಿ |