ಯಾಜಕಕಾಂಡ 17:15 - ಕನ್ನಡ ಸತ್ಯವೇದವು J.V. (BSI)15 ತಾನಾಗಿ ಸತ್ತು ಬಿದ್ದದ್ದನ್ನಾಗಲಿ ಕಾಡುಮೃಗಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾದರೂ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201915 “‘ತಾನಾಗಿ ಸತ್ತುಬಿದ್ದದ್ದನ್ನಾಗಲಿ ಅಥವಾ ಕಾಡುಮೃಗ ಕೊಂದದ್ದನ್ನು ತಿಂದವನಾಗಲಿ ಸ್ವದೇಶದವನಾದರೂ ಇಲ್ಲವೇ ಅನ್ಯದೇಶದವನಾದರೂ ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಆ ಸಾಯಂಕಾಲದ ವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)15 “ತಾನಾಗಿ ಸತ್ತುಬಿದ್ದದ್ದನ್ನಾಗಲಿ, ಕಾಡುಮೃಗ ಕೊಂದದ್ದನ್ನಾಗಲಿ ತಿಂದವನು ಸ್ವದೇಶದವನಾಗಿರಲಿ, ಅಥವಾ ಅನ್ಯದೇಶೀಯನಾಗಿರಲಿ ಅಂಥವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನ ಮಾಡಬೇಕು; ಆ ದಿನದ ಸಂಜೆಯವರೆಗೆ ಅಶುದ್ಧನಾಗಿದ್ದು ಬಳಿಕ ಶುದ್ಧನಾಗುವನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್15 “ಅಲ್ಲದೆ ಯಾವನಾದರೂ ತನ್ನಷ್ಟಕ್ಕೆ ಸತ್ತ ಪ್ರಾಣಿಯನ್ನು ತಿಂದರೆ ಅಥವಾ ಬೇರೆ ಪ್ರಾಣಿಯಿಂದ ಕೊಲ್ಲಲ್ಪಟ್ಟ ಪ್ರಾಣಿಯನ್ನು ತಿಂದರೆ, ಅವನು ಸಾಯಂಕಾಲದವರೆಗೆ ಅಶುದ್ಧನಾಗಿರುವನು. ಅವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಿಕೊಳ್ಳಬೇಕು. ಅವನು ಇಸ್ರೇಲನಾಗಿದ್ದರೂ ನಿಮ್ಮ ಮಧ್ಯದಲ್ಲಿ ವಾಸಿಸುವ ಪರದೇಶಸ್ಥನಾಗಿದ್ದರೂ ಹಾಗೆಯೇ ಮಾಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ15 “ ‘ಸ್ವದೇಶದವನಾಗಲಿ ಇಲ್ಲವೆ ಪರಕೀಯನಾಗಲಿ ತನ್ನಷ್ಟಕ್ಕೆ ತಾನೇ ಸತ್ತು ಹೋದದ್ದನ್ನು ಇಲ್ಲವೆ ಕಾಡುಮೃಗ ಕೊಂದದ್ದನ್ನು ತಿಂದ ಪ್ರತಿಯೊಬ್ಬನು ತನ್ನ ಬಟ್ಟೆಗಳನ್ನು ಒಗೆದುಕೊಂಡು ನೀರಿನಲ್ಲಿ ಸ್ನಾನಮಾಡಬೇಕು. ಸಂಜೆಯವರೆಗೆ ಅವನು ಅಶುದ್ಧನಾಗಿರಬೇಕು. ತರುವಾಯ ಅವನು ಶುದ್ಧನಾಗಿರುವನು. ಅಧ್ಯಾಯವನ್ನು ನೋಡಿ |