Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:5 - ಕನ್ನಡ ಸತ್ಯವೇದವು J.V. (BSI)

5 ಯಾಕಂದರೆ ಯಜ್ಞಪಶುಗಳನ್ನು ಬೈಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲ್ಯರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಲಿಗೆ ಯಾಜಕನ ಬಳಿಗೆ ತಂದು ಯೆಹೋವನ ಮುಂದೆ ಸಮಾಧಾನಯಜ್ಞರೂಪವಾಗಿ ಯೆಹೋವನಿಗೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಏಕೆಂದರೆ ಯಜ್ಞಪಶುಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಾಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು, ಯೆಹೋವನ ಮುಂದೆ ಸಮಾಧಾನಯಜ್ಞವಾಗಿ ಯೆಹೋವನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಏಕೆಂದರೆ ಬಲಿಪ್ರಾಣಿಗಳನ್ನು ಬಯಲಿನಲ್ಲಿ ವಧಿಸುತ್ತಿದ್ದ ಇಸ್ರಯೇಲರು ಇನ್ನು ಮೇಲೆ ಅವುಗಳನ್ನು ದೇವದರ್ಶನದ ಗುಡಾರದ ಬಾಗಿಲಿಗೆ ಯಾಜಕನ ಬಳಿಗೆ ತಂದು ಸರ್ವೇಶ್ವರನ ಮುಂದೆ ಶಾಂತಿಸಮಾಧಾನದ ಬಲಿಯಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸಮಾಧಾನಯಜ್ಞರೂಪವಾಗಿ ಇದನ್ನು ಯೆಹೋವನಿಗೆ ಅರ್ಪಿಸುವ ಯಜ್ಞಕ್ಕೆ ಇದೇ ನಿಯಮ. ಇಸ್ರೇಲರು ಹೊಲಗಳಲ್ಲಿ ಕೊಲ್ಲುವ ತಮ್ಮ ಪ್ರಾಣಿಗಳನ್ನು ದೇವದರ್ಶನಗುಡಾರದ ಬಾಗಿಲಿಗೆ ಅಂದರೆ ಯೆಹೋವನ ಸನ್ನಿಧಿಯಲ್ಲಿರುವ ಯಾಜಕರ ಬಳಿಗೆ ತರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಇಸ್ರಾಯೇಲರು ತಾವು ಬಯಲಿನಲ್ಲಿ ಸಮರ್ಪಿಸುವ ಬಲಿಗಳನ್ನು ಯೆಹೋವ ದೇವರಿಗೆ ದೇವದರ್ಶನದ ಗುಡಾರದ ಬಾಗಿಲಿನ ಬಳಿಯಲ್ಲಿ ಯಾಜಕನ ಬಳಿಗೆ ತಂದು ಯೆಹೋವ ದೇವರಿಗೆ ಸಮಾಧಾನದ ಬಲಿಯಾಗಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:5
20 ತಿಳಿವುಗಳ ಹೋಲಿಕೆ  

ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.


ನಾನು ಪ್ರಮಾಣಪೂರ್ವಕವಾಗಿ ಅವರಿಗೆ ವಾಗ್ದಾನಮಾಡಿದ ದೇಶಕ್ಕೆ ಅವರನ್ನು ಸೇರಿಸಿದ ಮೇಲೆ ಅವರು ಎತ್ತರವಾದ ಎಲ್ಲಾ ಗುಡ್ಡಗಳನ್ನೂ ಸೊಂಪಾಗಿ ಬೆಳೆದಿರುವ ಎಲ್ಲಾ ಮರಗಳನ್ನೂ ನೋಡಿ ಅಲ್ಲಿ ಯಜ್ಞಪಶುಗಳನ್ನು ವಧಿಸಿ ನನ್ನನ್ನು ರೇಗಿಸುವ ನೈವೇದ್ಯವನ್ನವರ್ಪಿಸಿ ಸುಗಂಧಹೋಮಮಾಡಿ ಪಾನದ್ರವ್ಯವನ್ನು ಸುರಿದು ಒಪ್ಪಿಸುತ್ತಿದ್ದರು.


ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೂ ಎಲ್ಲಾ ಹಸುರು ಮರಗಳ ಕೆಳಗೂ ಯಜ್ಞಗಳನ್ನೂ ಧೂಪಗಳನ್ನೂ ಸಮರ್ಪಿಸಿದನು.


ಎಲ್ಲಾ ದಿನ್ನೆಗಳ ಮೇಲೆ ಮತ್ತು ಎಲ್ಲಾ ಹಸುರು ಮರಗಳ ಕೆಳಗೆ ಕಲ್ಲುಕಂಬ, ಅಶೇರವಿಗ್ರಹ ಸ್ತಂಭ ಇವುಗಳನ್ನು ನಿಲ್ಲಿಸಿದರು;


ಪೂಜಾಸ್ಥಳಗಳಲ್ಲಿಯೂ ದಿನ್ನೆಗಳ ಮೇಲೆಯೂ ಎಲ್ಲಾ ಹಸುರು ಮರಗಳ ಕೆಳಗೆಯೂ ಯಜ್ಞಧೂಪಗಳನ್ನು ಸಮರ್ಪಿಸಿದನು.


ಪಿತೃಗಳಂತೆಯೇ ಅವರೂ ತಮಗೋಸ್ಕರ ಪೂಜಾಸ್ಥಳಗಳನ್ನು ಏರ್ಪಡಿಸಿಕೊಂಡರು. ಪ್ರತಿಯೊಂದು ದಿನ್ನೆಯ ಮೇಲೆಯೂ ಚೆನ್ನಾಗಿ ಬೆಳೆದಿರುವ ಪ್ರತಿಯೊಂದು ಮರದ ಕೆಳಗೆಯೂ ಕಲ್ಲಿನ ಕಂಬಗಳನ್ನೂ ಅಶೇರ ವಿಗ್ರಹಸ್ತಂಭಗಳನ್ನೂ ನಿಲ್ಲಿಸಿದರು.


ನೀವು ಸ್ವಾಧೀನಮಾಡಿಕೊಳ್ಳುವ ದೇಶದ ಜನಾಂಗಗಳು ದೊಡ್ಡ ಬೆಟ್ಟಗಳ ಮೇಲೆಯೂ ದಿನ್ನೆಗಳ ಮೇಲೆಯೂ ಹರಡಿಕೊಂಡ ಮರಗಳ ಕೆಳಗೆಯೂ ತಮ್ಮ ದೇವರುಗಳನ್ನು ಆರಾಧಿಸುತ್ತಾರಷ್ಟೆ; ಆ ಸ್ಥಳಗಳನ್ನೆಲ್ಲಾ ನೀವು ಅಗತ್ಯವಾಗಿ ನಾಶಮಾಡಬೇಕು.


ನೀವು ಯೆಹೋವನಿಗೋಸ್ಕರ ಸರ್ವಾಂಗಹೋಮಗಳನ್ನು ಮಾಡಿ ಸಮಾಧಾನಯಜ್ಞಕ್ಕಾಗಿ ಹೋರಿಗಳನ್ನು ಸಮರ್ಪಿಸಬೇಕೆಂದು ಅಪ್ಪಣೆಕೊಟ್ಟನು.


ಇದಲ್ಲದೆ ಯಾಕೋಬನು ಆ ಬೆಟ್ಟದ ಮೇಲೆ ಯಜ್ಞವನ್ನು ಮಾಡಿ ತನ್ನ ಬಂಧುಗಳನ್ನು ತನ್ನೊಡನೆ ಸಹಭೋಜನಕ್ಕೆ ಕರಸಿದನು. ಅವರು ಸಹಭೋಜನ ಮಾಡಿ ಆ ರಾತ್ರಿಯೆಲ್ಲಾ ಬೆಟ್ಟದ ಮೇಲೆ ಇದ್ದರು.


ಅಬ್ರಹಾಮನು ಕಣ್ಣೆತ್ತಿ ನೋಡುವಾಗ ತನ್ನ ಹಿಂದುಗಡೆ ಒಂದು ಟಗರು ಪೊದೆಯಲ್ಲಿ ಕೊಂಬುಗಳಿಂದ ಸಿಕ್ಕಿಕೊಂಡಿತ್ತು. ಅವನು ಹೋಗಿ ಅದನ್ನು ಹಿಡಿದುತಂದು ತನ್ನ ಮಗನಿಗೆ ಬದಲಾಗಿ ಹೋಮಮಾಡಿದನು.


ಆಗಲಾತನು - ನಿನಗೆ ಪ್ರಿಯನಾಗಿರುವ ಒಬ್ಬನೇ ಮಗನಾದ ಇಸಾಕನನ್ನು ತೆಗೆದುಕೊಂಡು ಮೊರೀಯ ದೇಶಕ್ಕೆ ಹೋಗಿ ಅಲ್ಲಿ ಅವನನ್ನು ನಾನು ಹೇಳುವ ಒಂದು ಬೆಟ್ಟದ ಮೇಲೆ ಸರ್ವಾಂಗಹೋಮವಾಗಿ ಅರ್ಪಿಸಬೇಕು ಅಂದನು.


ಅಬ್ರಹಾಮನು ಬೇರ್ಷೆಬದಲ್ಲಿ ಪಿಚುಲವೃಕ್ಷವನ್ನು ನೆಟ್ಟು ನಿತ್ಯದೇವರಾದ ಯೆಹೋವನ ಹೆಸರನ್ನು ಹೇಳಿಕೊಂಡು ಆರಾಧಿಸಿದನು.


ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾಜಕನು ಅವುಗಳ ರಕ್ತವನ್ನು ದೇವದರ್ಶನದ ಗುಡಾರದ ಬಾಗಲಿನ ಮುಂದಿರುವ ಯಜ್ಞವೇದಿಗೆ ಎರಚಿ ಅವುಗಳ ಕೊಬ್ಬನ್ನು ಹೋಮಮಾಡಿ ಯೆಹೋವನಿಗೆ ಸುವಾಸನೆಯನ್ನುಂಟುಮಾಡಬೇಕು.


ಏಳು ದಿನಗಳ ಕಾರ್ಯವನ್ನು ಮುಗಿಸಿದ ಬಳಿಕ ಎಂಟನೆಯ ದಿನದಲ್ಲಿಯೂ ಮುಂದೆಯೂ ಯಾಜಕರು ಯಜ್ಞವೇದಿಯ ಮೇಲೆ ನಿಮ್ಮ ಪಕ್ಷವಾಗಿ ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಮಾಡಬೇಕು; ಆಗ ನಾನು ನಿಮಗೆ ಪ್ರಸನ್ನನಾಗುವೆನು; ಇದು ಕರ್ತನಾದ ಯೆಹೋವನ ನುಡಿ.


ಆದರೆ ಇಸ್ರಾಯೇಲ್ಯರು ನನ್ನನ್ನು ತೊರೆದಾಗ ಲೇವಿಯರೂ ಚಾದೋಕನ ಸಂತಾನದವರೂ ಆದ ಯಾಜಕರು ನನ್ನ ಪವಿತ್ರಾಲಯದ ಪಾರುಪತ್ಯವನ್ನು ನೆರವೇರಿಸಿದ್ದರಿಂದ ಅವರು ನನ್ನನ್ನು ಸೇವಿಸಲು ನನ್ನ ಸನ್ನಿಧಿಗೆ ಸೇರುವರು, ನನಗೆ ರಕ್ತಮೇದಸ್ಸುಗಳನ್ನು ಅರ್ಪಿಸಲು ನನ್ನ ಸಮ್ಮುಖದಲ್ಲಿ ನಿಂತುಕೊಳ್ಳುವರು; ಇದು ಕರ್ತನಾದ ಯೆಹೋವನ ನುಡಿ.


ಆವರೆಗೂ ಯೆಹೋವನಾಮಕ್ಕೋಸ್ಕರ ಆಲಯವಿರಲಿಲ್ಲವಾದದರಿಂದ ಜನರು ಪೂಜಾಸ್ಥಳಗಳಲ್ಲಿ ಯಜ್ಞಮಾಡುತ್ತಿದ್ದರು.


ಸೊಲೊಮೋನನು ಯೆಹೋವನನ್ನು ಪ್ರೀತಿಸಿ ತನ್ನ ತಂದೆಯಾದ ದಾವೀದನ ವಿಧಿಗಳನ್ನು ಕೈಕೊಳ್ಳುವವನಾಗಿದ್ದರೂ ಆ ಪೂಜಾಸ್ಥಳಗಳಲ್ಲಿಯೇ ಯಜ್ಞವರ್ಪಿಸುತ್ತಿದ್ದನು; ಅಲ್ಲಿಯೇ ಧೂಪಸುಡುತ್ತಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು