Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 17:8 - ಕನ್ನಡ ಸತ್ಯವೇದವು J.V. (BSI)

8 ಮತ್ತು ನೀನು ಅವರಿಗೆ ಹೀಗೆ ಆಜ್ಞಾಪಿಸು - ಇಸ್ರಾಯೇಲ್ಯರಲ್ಲಿ ಆಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ಸರ್ವಾಂಗಹೋಮವನ್ನು ಅಥವಾ ಬೇರೆ ವಿಧವಾದ ಯಜ್ಞವನ್ನು ಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 “ಇದಲ್ಲದೆ ನೀನು ಅವರಿಗೆ ಹೀಗೆ ಆಜ್ಞಾಪಿಸು, ‘ಇಸ್ರಾಯೇಲರಲ್ಲಾಗಲಿ ಅಥವಾ ಅವರ ನಡುವೆ ವಾಸಮಾಡುತ್ತಿರುವ ಅನ್ಯದೇಶದವರಲ್ಲಿಯಾಗಲಿ ಯಾರಾದರೂ ಸರ್ವಾಂಗಹೋಮವನ್ನು ಅಥವಾ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಇದಲ್ಲದೆ ನೀನು ಅವರಿಗೆ ಹೀಗೆಂದು ಆಜ್ಞಾಪಿಸು: ಇಸ್ರಯೇಲರಲ್ಲಿ ಆಗಲಿ, ಅವರ ನಡುವೆ ವಾಸಿಸುವ ಅನ್ಯದೇಶದವರಲ್ಲಿ ಆಗಲಿ ಯಾವನಾದರು ದಹನಬಲಿಯನ್ನು ಆಥವಾ ಬೇರೆ ವಿಧವಾದ ಬಲಿದಾನ ಮಾಡುವಾಗ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 “ಜನರಿಗೆ ಹೇಳಬೇಕಾದದ್ದೇನೆಂದರೆ: ನಿಮ್ಮ ಮಧ್ಯದಲ್ಲಿ ವಾಸಿಸುತ್ತಿರುವ ಯಾವ ಇಸ್ರೇಲನಾಗಲಿ ಅನ್ಯನಾಗಲಿ ಸರ್ವಾಂಗಹೋಮವನ್ನಾಗಲಿ ಯಜ್ಞವನ್ನಾಗಲಿ ಅರ್ಪಿಸಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ಇದಲ್ಲದೆ ನೀನು ಅವರಿಗೆ ಹೇಳಬೇಕಾದದ್ದೇನೆಂದರೆ, ‘ಇಸ್ರಾಯೇಲಿನ ಮನೆತನದವರಲ್ಲಿ ಯಾವ ಮನುಷ್ಯನಾದರು ಇಲ್ಲವೆ ನಿಮ್ಮೊಳಗೆ ಪ್ರವಾಸಿಗರಾಗಿದ್ದ ಪರಕೀಯರು ದಹನಬಲಿಯನ್ನಾಗಲಿ, ಯಜ್ಞವನ್ನಾಗಲಿ ಅರ್ಪಿಸಿದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 17:8
16 ತಿಳಿವುಗಳ ಹೋಲಿಕೆ  

ಸೂರ್ಯನು ಮೂಡುವ ದಿಕ್ಕಿನಿಂದ ಮುಣುಗುವ ದಿಕ್ಕಿನವರೆಗೂ ನನ್ನ ನಾಮವು ಅನ್ಯಜನಾಂಗಗಳಲ್ಲಿ ಘನವಾಗಿದೆ; ಒಂದೊಂದು ಸ್ಥಳದಲ್ಲಿಯೂ ನನ್ನ ನಾಮಕ್ಕೆ ಧೂಪವನ್ನೂ ಶುದ್ಧನೈವೇದ್ಯವನ್ನೂ ಅರ್ಪಿಸುತ್ತಾರೆ; ಹೌದು, ಅನ್ಯಜನಾಂಗಗಳಲ್ಲಿಯೇ ನನ್ನ ನಾಮವು ಘನವಾಗಿದೆ; ಇದು ಸೇನಾಧೀಶ್ವರ ಯೆಹೋವನ ನುಡಿ.


ಅಲ್ಲಿ ಯೆಹೋವನಿಗೋಸ್ಕರ ಯಜ್ಞವೇದಿಯನ್ನು ಕಟ್ಟಿಸಿ ಅದರ ಮೇಲೆ ಆತನಿಗೆ ಸರ್ವಾಂಗ ಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಅರ್ಪಿಸಿದನು. ಹೀಗೆ ದೇಶದ ಮೇಲಿದ್ದ ಯೆಹೋವನ ಕೋಪವು ಶಾಂತವಾಯಿತು. ಇಸ್ರಾಯೇಲ್ಯರಲ್ಲಿದ್ದ ಸಂಹಾರಕವ್ಯಾಧಿಯು ನಿಂತುಹೋಯಿತು.


ಅದಕ್ಕೆ ಸಮುವೇಲನು - ನಾನು ಹೋಗುವದು ಹೇಗೆ? ಇದು ಸೌಲನಿಗೆ ಗೊತ್ತಾದರೆ ಅವನು ನನ್ನನ್ನು ಕೊಂದುಹಾಕುವನಲ್ಲವೇ ಅನ್ನಲು ಆತನು - ನೀನು ಒಂದು ಕಡಸನ್ನು ತೆಗೆದುಕೊಂಡು ಹೋಗಿ ಯೆಹೋವನಿಗೋಸ್ಕರ ಯಜ್ಞಮಾಡುವದಕ್ಕೆ ಬಂದಿದ್ದೇನೆಂದು ಹೇಳಿ ಇಷಯನನ್ನು ಅದಕ್ಕೆ ಕರೆ.


ನೀನು ಮುಂದಾಗಿ ಗಿಲ್ಗಾಲಿಗೆ ಹೋಗು; ಏಳು ದಿವಸಗಳಾದನಂತರ ನಾನು ಸರ್ವಾಂಗಹೋಮಗಳನ್ನೂ ಸಮಾಧಾನಯಜ್ಞಗಳನ್ನೂ ಸಮರ್ಪಿಸುವದಕ್ಕೋಸ್ಕರ ಅಲ್ಲಿಗೆ ಬಂದು ನೀನು ಮಾಡಬೇಕಾದದ್ದನ್ನು ನಿನಗೆ ತಿಳಿಸುವೆನು; ಅಲ್ಲಿಯವರೆಗೆ ಕಾದುಕೊಂಡಿರು ಎಂದು ಹೇಳಿದನು.


ಆಗ ಸಮುವೇಲನು ಹಾಲುಕುಡಿಯುವ ಕುರಿಮರಿಯನ್ನು ತಂದು ಯೆಹೋವನಿಗೆ ಸರ್ವಾಂಗಹೋಮವಾಗಿ ಸಮರ್ಪಿಸಿ ಇಸ್ರಾಯೇಲ್ಯರಿಗೋಸ್ಕರ ಮೊರೆಯಿಡಲು ಆತನು ಸದುತ್ತರವನ್ನು ದಯಪಾಲಿಸಿದನು. ಹೇಗಂದರೆ -


ಈ ಗುಡ್ಡದ ಶಿಖರದಲ್ಲಿ ಯೆಹೋವನಿಗೋಸ್ಕರ ನೇಮಕವಾದ ರೀತಿಯಿಂದ ಒಂದು ಯಜ್ಞವೇದಿಯನ್ನು ಕಟ್ಟಿಸಿ ನೀನು ಕಡಿದು ಹಾಕಿದ ಅಶೇರ ವಿಗ್ರಹಸ್ತಂಭದಿಂದ ಬೆಂಕಿಮಾಡಿ ಆ ಎರಡನೆಯ ಹೋರಿಯನ್ನೂ ಸರ್ವಾಂಗಹೋಮವಾಗಿ ಸಮರ್ಪಿಸು ಎಂದು ಹೇಳಿದನು.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಪಾಳೆಯದ ಒಳಗಾಗಲಿ ಹೊರಗಾಗಲಿ ಕೊಯಿದರೆ ಅವನನ್ನು ಕೊಲೆಪಾತಕ ಮಾಡಿದವನೆಂದು ನೀವು ನಿರ್ಣಯಿಸಬೇಕು. ಅವನು ರಕ್ತವನ್ನು ಸುರಿಸಿದವನಾದದರಿಂದ ಕುಲದಿಂದ ತೆಗೆದುಹಾಕಲ್ಪಡಬೇಕು.


ಅದು ಕುರಿಯಾಗಿದ್ದರೆ ತಂದವನು ಅದನ್ನು ಯೆಹೋವನ ಸನ್ನಿಧಿಗೆ ತೆಗೆದುಕೊಂಡು ಬಂದು


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ಅದರ ಪಶುವನ್ನು ಯೆಹೋವನಿಗೆ ಸಮರ್ಪಿಸುವದಕ್ಕಾಗಿ ದೇವದರ್ಶನದ ಗುಡಾರದ ಬಾಗಲಿಗೆ ತಾರದಿದ್ದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ರೂಬೇನ್ಯರೂ ಗಾದ್ಯರೂ ಮನಸ್ಸೆಕುಲದ ಅರ್ಧಜನರೂ ಇಸ್ರಾಯೇಲ್‍ದೇಶವಾದ ಕಾನಾನಿನ ಪೂರ್ವಕ್ಕಿರುವ ಯೊರ್ದನ್‍ಹೊಳೆಯ ತೀರಪ್ರದೇಶದಲ್ಲಿ ವೇದಿಯನ್ನು ಕಟ್ಟಿದ್ದಾರೆಂಬ ವರ್ತಮಾನವು ವಿುಕ್ಕ ಇಸ್ರಾಯೇಲ್ಯರಿಗೆ ಮುಟ್ಟಿದಾಗ


ಅವರು ಗಿಲ್ಯಾದಿನಲ್ಲಿದ್ದ ರೂಬೇನ್ಯರು, ಗಾದ್ಯರು ಮನಸ್ಸೆ ಕುಲದ ಅರ್ಧಜನರು ಇವರ ಬಳಿಗೆ ಬಂದು -


ಯೆಹೋವನ ಸರ್ವಸಭೆಯ ಮಾತನ್ನು ಕೇಳಿರಿ - ನೀವು ಇಸ್ರಾಯೇಲ್ ದೇವರಿಗೆ ವಿರುದ್ಧವಾಗಿ ಇಂಥ ದ್ರೋಹ ಮಾಡಿದ್ದೇಕೆ? ನಿಮಗೋಸ್ಕರ ವೇದಿಯನ್ನು ಕಟ್ಟಿಕೊಂಡದರಿಂದ ನೀವು ಯೆಹೋವನಿಗೆ ವಿಮುಖರಾದ ಹಾಗಾಯಿತಲ್ಲವೇ. ನೀವು ಈ ಹೊತ್ತು ಯೆಹೋವನಿಗೆ ವಿರುದ್ಧವಾಗಿ ತಿರುಗಿಬಿದ್ದಂತಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು