Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:2 - ಕನ್ನಡ ಸತ್ಯವೇದವು J.V. (BSI)

2 ನೀನು ಇಸ್ರಾಯೇಲ್ಯರಿಗೆ ಹೀಗೆ ಆಜ್ಞಾಪಿಸಬೇಕು - ನಾನು ನಿಮ್ಮ ದೇವರಾಗಿರುವ ಯೆಹೋವನು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

2 “ನೀನು ಇಸ್ರಾಯೇಲರಿಗೆ ಹೀಗೆ ಆಜ್ಞಾಪಿಸಬೇಕು, ‘ನಾನು ನಿಮ್ಮ ದೇವರಾಗಿರುವ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

2 “ನಾನು ನಿಮ್ಮ ದೇವರಾಗಿರುವ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

2 “ಇಸ್ರೇಲರಿಗೆ ಹೀಗೆ ಹೇಳು: ನಾನು ನಿಮ್ಮ ದೇವರಾಗಿರುವ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

2 “ನೀನು ಇಸ್ರಾಯೇಲರೊಂದಿಗೆ ಮಾತನಾಡಿ ಹೀಗೆ ಹೇಳಬೇಕು, ‘ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:2
16 ತಿಳಿವುಗಳ ಹೋಲಿಕೆ  

ನಾನು ನಿಮ್ಮನ್ನು ನನ್ನ ಪ್ರಜೆಯೆಂದು ಆರಿಸಿಕೊಂಡು ನಿಮಗೆ ದೇವರಾಗಿರುವೆನು. ಐಗುಪ್ತ್ಯರು ಮಾಡಿಸುವ ಬಿಟ್ಟೀ ಸೇವೆಯನ್ನು ನಾನು ನಿಮಗೆ ತಪ್ಪಿಸಿದಾಗ ಯೆಹೋವನು ಎಂಬ ನಾನೇ ನಿಮ್ಮ ದೇವರಾಗಿದ್ದೇನೆಂಬದು ನಿಮಗೆ ತಿಳಿದುಬರುವದು.


ಯಾಕಂದರೆ ನಾನು ನಿಮ್ಮ ದೇವರಾದ ಯೆಹೋವನು; ನೀವು ದೇವಜನರಿಗೆ ತಕ್ಕಂತಿರಬೇಕು. ನಾನು ಪರಿಶುದ್ಧನಾಗಿರುವದರಿಂದ ನೀವೂ ಪರಿಶುದ್ಧರಾಗಿರಬೇಕು. ನೆಲದ ಮೇಲೆ ಹರಿದಾಡುವ ಯಾವ ಜಂತುವಿನಿಂದಾದರೂ ನೀವು ನಿಮ್ಮನ್ನು ಅಶುದ್ಧಮಾಡಿಕೊಳ್ಳಬಾರದು.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಯಾವ ದಿವಸದಲ್ಲಿ ನಾನು ಇಸ್ರಾಯೇಲನ್ನು ಆರಿಸಿಕೊಂಡು ಯಾಕೋಬ ಸಂತಾನದವರಿಗೆ ಮಾತುಕೊಟ್ಟು ನಾನು ನಿಮ್ಮ ದೇವರಾದ ಯೆಹೋವನು ಎಂದು ಐಗುಪ್ತ ದೇಶದಲ್ಲಿ ಪ್ರಮಾಣಪೂರ್ವಕವಾಗಿ ತಿಳಿಯಪಡಿಸಿದೆನೋ ಆ ದಿವಸದಲ್ಲಿ ನಾನು ಅವರಿಗೆ -


ನಾನು ನಿಮ್ಮ ದೇವರಾದ ಯೆಹೋವನಾಗಿರುವದರಿಂದ ನೀವು ನನ್ನವರಾಗಿ ಪರಿಶುದ್ಧರಾಗಿರಬೇಕು.


ನೀವೆಲ್ಲರೂ ನಿಮ್ಮ ಕಣ್ಣಿಗೆ ಇಷ್ಟವಾದ ಅಸಹ್ಯವಸ್ತುಗಳನ್ನು ಬಿಸಾಟುಬಿಡಿರಿ, ಐಗುಪ್ತದ ವಿಗ್ರಹಗಳಿಂದ ನಿಮ್ಮನ್ನು ಹೊಲಸು ಮಾಡಿಕೊಳ್ಳಬೇಡಿರಿ; ನಾನು ನಿಮ್ಮ ದೇವರಾದ ಯೆಹೋವನು ಎಂಬದಾಗಿ ಅವರನ್ನು ಎಚ್ಚರಿಸಿದೆನು.


ಯಾವ ಜನರಿಗೆ ಯೆಹೋವನೇ ದೇವರಾಗಿದ್ದಾನೋ ಯಾವ ಜನಾಂಗದವರನ್ನು ಸ್ವಕೀಯರನ್ನಾಗಿ ಆದುಕೊಂಡಿದ್ದಾನೋ ಅವರೇ ಧನ್ಯರು.


ಅವರು ನಿಮಗೆ ಸ್ವದೇಶದವರಂತೆಯೇ ಇರಬೇಕು; ಅವರನ್ನು ನಿಮ್ಮಂತೆಯೇ ಪ್ರೀತಿಸಬೇಕು. ಐಗುಪ್ತದೇಶದಲ್ಲಿದ್ದಾಗ ನೀವೂ ಅನ್ಯರಾಗಿದ್ದಿರಲ್ಲವೇ. ನಾನು ನಿಮ್ಮ ದೇವರಾದ ಯೆಹೋವನು.


ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಯೆಹೋವನೆಂಬ ನಾನೇ ನಿಮ್ಮ ದೇವರಾಗಿರುವದರಿಂದ ನನ್ನ ನಿರ್ಣಯಗಳ ಪ್ರಕಾರವೇ ನೀವು ನಡೆಯಬೇಕು, ನನ್ನ ವಿಧಿಗಳನ್ನು ಅನುಸರಿಸಬೇಕು.


ನೀನು ದಾಸತ್ವದಲ್ಲಿದ್ದ ಐಗುಪ್ತದೇಶದೊಳಗಿಂದ ನಿನ್ನನ್ನು ಬಿಡುಗಡೆ ಮಾಡಿದ ಯೆಹೋವನು ಎಂಬ ನಿನ್ನ ದೇವರು ನಾನೇ.


ನಿನಗೂ ನಿನ್ನ ಸಂತತಿಗೂ ದೇವರಾಗಿರುವೆನೆಂದು ನಾನು ನಿನಗೋಸ್ಕರವೂ ನಿನ್ನ ಸಂತತಿಯ ಎಲ್ಲಾ ತಲಾಂತರಗಳಿಗೋಸ್ಕರವೂ ಮಾಡಿಕೊಂಡ ನನ್ನ ಒಡಂಬಡಿಕೆಯನ್ನು ಸ್ಥಿರಪಡಿಸುವೆನು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ -


ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.


ನಾನು ನಿಮ್ಮ ಎದುರಿನಿಂದ ಹೊರಡಿಸುವ ಜನಾಂಗದ ಆಚಾರಗಳನ್ನು ನೀವು ಅನುಸರಿಸಬಾರದು; ಅವರು ಈ ದುರಾಚಾರಗಳನ್ನೆಲ್ಲಾ ನಡಿಸಿದದರಿಂದ ನನಗೆ ಹೇಸಿಗೆಯಾದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು