Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:28 - ಕನ್ನಡ ಸತ್ಯವೇದವು J.V. (BSI)

28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ಕಾರಿಬಿಟ್ಟ ಪ್ರಕಾರವೇ ನಿವ್ಮಿುಂದ ಅಶುದ್ಧವಾದರೆ ನಿಮ್ಮನ್ನೂ ಕಾರಿಬಿಟ್ಟೀತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ತ್ಯಜಿಸಿದ ಪ್ರಕಾರವೇ ನಿಮ್ಮಿಂದ ಅಶುದ್ಧವಾದರೆ ನಿಮ್ಮನ್ನು ತ್ಯಜಿಸಿಬಿಡುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ನಿಮಗಿಂತ ಮುಂಚೆಯಿದ್ದ ಜನಾಂಗಗಳನ್ನು ಆ ನಾಡು ಕಕ್ಕಿಬಿಟ್ಟ ಪ್ರಕಾರವೇ ಅದು ನಿಮ್ಮಿಂದ ಅದು ಮಲಿನವಾದರೆ ನಿಮ್ಮನ್ನೂ ಅಂತೆಯೇ ಕಕ್ಕಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ನೀವು ಈ ಕಾರ್ಯಗಳನ್ನು ಮಾಡಿದರೆ, ನೀವು ಆ ದೇಶವನ್ನು ಹೊಲೆಮಾಡುವಿರಿ. ಅದು ಮೊದಲು ವಾಸಿಸಿದ ಜನಾಂಗಗಳನ್ನು ಕಾರಿಬಿಟ್ಟಂತೆ ನಿಮ್ಮನ್ನೂ ಕಾರಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ನೀವೂ ಅದನ್ನು ಅಶುದ್ಧಮಾಡಿದರೆ, ಅದು ನಿಮಗಿಂತ ಮೊದಲಿದ್ದ ಜನಾಂಗಗಳವರನ್ನು ಕಾರಿದಂತೆ ನಿಮ್ಮನ್ನೂ ಕಾರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:28
9 ತಿಳಿವುಗಳ ಹೋಲಿಕೆ  

ನೀನು ಬೆಚ್ಚಗೂ ಇಲ್ಲದೆ ತಣ್ಣಗೂ ಇಲ್ಲದೆ ಉಗುರುಬೆಚ್ಚಗಿರುವದರಿಂದ ನಿನ್ನನ್ನು ನನ್ನ ಬಾಯೊಳಗಿಂದ ಕಾರುವೆನು.


ಈ ನನ್ನ ಆಜ್ಞಾವಿಧಿಗಳನ್ನೆಲ್ಲಾ ನೀವು ಅನುಸರಿಸಿ ನಡೆಯಬೇಕು; ಹಾಗೆ ನಡೆದರೆ ನಾನು ನಿಮ್ಮನ್ನು ಯಾವ ದೇಶಕ್ಕೆ ಬರಮಾಡಿ ಅದನ್ನು ನಿವಾಸಕ್ಕಾಗಿ ಕೊಡುತ್ತೇನೋ ಆ ದೇಶವು ನಿಮ್ಮನ್ನು ಕಾರಿಬಿಡುವದಿಲ್ಲ.


ಅವರ ದೇಶವು ಅಶುದ್ಧವಾಗಿ ಹೋದದರಿಂದ ಅವರ ಪಾಪಕೃತ್ಯಗಳಿಗಾಗಿ ಅವರನ್ನು ಶಿಕ್ಷಿಸಿದ್ದೇನೆ; ಆ ದೇಶವು ತನ್ನಲ್ಲಿ ವಾಸಿಸಿದವರನ್ನು ಕಾರಿಬಿಟ್ಟಿತು.


ನರಪುತ್ರನೇ, ಇಸ್ರಾಯೇಲ್ ವಂಶದವರು ಸ್ವದೇಶದಲ್ಲಿ ವಾಸಿಸುತ್ತಿದ್ದಾಗ ತಮ್ಮ ದುರ್ಮಾರ್ಗ ದುರಾಚಾರಗಳಿಂದ ಅದನ್ನು ಹೊಲೆಗೈದರು; ಅವರ ನಡತೆಯು ಮುಟ್ಟಿನ ಹೊಲಸಿನಂತೆ ನನಗೆ ಅಸಹ್ಯವಾಗಿತ್ತು.


ಜಗತ್ತೆಲ್ಲಾ ಇಂದಿನವರೆಗೂ ನರಳುತ್ತಾ ಪ್ರಸವ ವೇದನೆಪಡುತ್ತಾ ಇರುತ್ತದೆಂದು ನಾವು ಬಲ್ಲೆವು.


ಅಯ್ಯೋ, ಹಾಳಾದೆವು, ಭಂಗಪಟ್ಟೆವು; ನಾವು ನಮ್ಮ ದೇಶವನ್ನು ಬಿಟ್ಟೆವಲ್ಲಾ, [ಶತ್ರುಗಳು] ನಮ್ಮ ಮನೆಗಳನ್ನು ಕೆಡವಿದ್ದಾರಲ್ಲಾ ಎಂಬ ಪ್ರಲಾಪಧ್ವನಿಯು ಚೀಯೋನಿನೊಳಗಿಂದ ಕೇಳಿಸುತ್ತದೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನೀನು ನರಭಕ್ಷಕನಾಗಿ ನಿನ್ನ ಪ್ರಜೆಗೆ ಪುತ್ರಶೋಕವನ್ನು ಕೊಟ್ಟಿದ್ದೀ ಎಂದು ನಿನ್ನನ್ನು ಬಯ್ಯುತ್ತಾರಲ್ಲಾ;


ನಿಮಗಿಂತ ಮುಂಚೆ ಆ ದೇಶದಲ್ಲಿ ಇದ್ದವರು ಇಂಥ ಹೇಸಿಗೆಯಾದ ಕೆಲಸಗಳನ್ನು ಮಾಡಿದ್ದರಿಂದ ಆ ದೇಶವು ಅಶುದ್ಧವಾಗಿ ಹೋಯಿತಲ್ಲಾ.


ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು