Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:29 - ಕನ್ನಡ ಸತ್ಯವೇದವು J.V. (BSI)

29 ಯಾವನಾದರೂ ಈ ಹೇಸಿಗೆಯಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ಯಾವನಾದರೂ ಈ ಅಸಹ್ಯವಾದ ಕೆಲಸಗಳಲ್ಲಿ ಒಂದನ್ನಾದರೂ ಮಾಡಿದರೆ ಅವನನ್ನು ಕುಲದಿಂದ ಹೊರಗೆ ಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 ಯಾರಾದರೂ ಈ ಅಸಹ್ಯವಾದ ಕಾರ್ಯಗಳಲ್ಲಿ ಒಂದನ್ನು ಮಾಡಿದ್ದೇ ಆದರೆ ಅವನನ್ನು ಕುಲದಿಂದ ತೆಗೆದುಬಿಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಯಾವನಾದರೂ ಆ ಭಯಂಕರ ಪಾಪಗಳಲ್ಲಿ ಯಾವುದನ್ನಾದರೂ ಮಾಡಿದರೆ, ಆ ವ್ಯಕ್ತಿಯನ್ನು ಅವನ ಜನರಿಂದ ತೆಗೆದುಹಾಕಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ ‘ಏಕೆಂದರೆ ಯಾವನಾದರೂ ಈ ಅಸಹ್ಯವಾದವುಗಳಲ್ಲಿ ಯಾವುದನ್ನಾದರೂ ಮಾಡಿದರೆ, ಅವನನ್ನು ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:29
9 ತಿಳಿವುಗಳ ಹೋಲಿಕೆ  

ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಏಳು ದಿವಸ ನೀವು ಹುಳಿಯಿಲ್ಲದ ರೊಟ್ಟಿಗಳನ್ನು ತಿನ್ನಬೇಕು. ಮೊದಲನೆಯ ದಿನದಲ್ಲಿಯೇ ಹುಳಿಹಿಟ್ಟನ್ನೆಲ್ಲಾ ನಿಮ್ಮ ಮನೆಗಳೊಳಗಿಂದ ತೆಗೆದುಬಿಡಬೇಕು. ಆ ದಿವಸ ಮೊದಲುಗೊಂಡು ಏಳು ದಿವಸಗಳೊಳಗೆ ಯಾವನಾದರೂ ಹುಳಿಬೆರಸಿದ್ದನ್ನು ತಿಂದರೆ ಅವನು ಇಸ್ರಾಯೇಲ್ಯರಿಂದ ತೆಗೆದು ಹಾಕಲ್ಪಡಬೇಕು.


ಆ ದೇಶವು ನಿಮಗಿಂತ ಮುಂಚೆ ಇದ್ದ ಜನಾಂಗಗಳನ್ನು ಕಾರಿಬಿಟ್ಟ ಪ್ರಕಾರವೇ ನಿವ್ಮಿುಂದ ಅಶುದ್ಧವಾದರೆ ನಿಮ್ಮನ್ನೂ ಕಾರಿಬಿಟ್ಟೀತು.


ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.


ಇದರಂತೆ ತೈಲವನ್ನು ಮಾಡುವವನಾಗಲಿ ಇದನ್ನು ಯಾಜಕನಲ್ಲದವನ ಮೇಲೆ ಹಚ್ಚುವವನಾಗಲಿ ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾವನಾದರೂ ಅಶುದ್ಧನಾಗಿದ್ದು ಯೆಹೋವನಿಗೆ ಸಮರ್ಪಿತವಾದ ಸಮಾಧಾನಯಜ್ಞಪಶುವಿನ ಮಾಂಸವನ್ನು ತಿಂದರೆ ಅವನು ತನ್ನ ಕುಲದಿಂದ ತೆಗೆದುಹಾಕಲ್ಪಡಬೇಕು.


ಯಾವನಿಗಾದರೂ ಮನುಷ್ಯ ದೇಹದಿಂದುಂಟಾದ ಅಶುದ್ಧ ವಸ್ತು, ಅಶುದ್ಧ ಮೃಗ, ನಿಷಿದ್ಧವಸ್ತು ಇವುಗಳಲ್ಲಿ ಯಾವದಾದರೂ ಸೋಂಕಿದರೆ ಅವನು ಯೆಹೋವನಿಗೆ ಸಮರ್ಪಿತವಾದ ಯಜ್ಞಪಶುವಿನ ಮಾಂಸವನ್ನು ತಿಂದರೆ ಕುಲದಿಂದ ತೆಗೆದುಹಾಕಲ್ಪಡಬೇಕು.


ಇಂಥ ಕೆಲಸವನ್ನು ನಡಿಸಿದ ಪ್ರತಿಯೊಬ್ಬನ ಕುಟುಂಬದಲ್ಲಿ ಎಬ್ಬಿಸುವವರಾಗಾಲಿ ಉತ್ತರ ಕೊಡುವವರಾಗಾಲಿ ಎಲ್ಲರನ್ನೂ ಯೆಹೋವನು ಯಾಕೋಬಿನ ಗುಡಾರಗಳೊಳಗಿಂದ ನಿರ್ಮೂಲಮಾಡುವನು; ಸೇನಾಧೀಶ್ವರ ಯೆಹೋವನಿಗೆ ನೈವೇದ್ಯ ತಂದರ್ಪಿಸುವವನನ್ನೂ ಕಡಿದುಬಿಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು