Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 18:8 - ಕನ್ನಡ ಸತ್ಯವೇದವು J.V. (BSI)

8 ಮಲತಾಯಿಯ ಸಂಗ ಮಾಡಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಮಲತಾಯಿಯ ಜೊತೆ ಸಂಗಮಿಸಬಾರದು; ಆಕೆ ತಂದೆಗೆ ಹೆಂಡತಿಯಾದವಳಲ್ಲವೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 “ಮಲತಾಯಿಯನ್ನು ಸಂಭೋಗಿಸಬಾರದು; ಹಾಗೆ ಮಾಡಿದರೆ ತಂದೆಗೆ ಮಾನಭಂಗವಾಗುವುದು. ಆಕೆ ನಿನ್ನ ತಂದೆಯ ಅರ್ಧಾಂಗಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಮಲತಾಯಿಯೊಂದಿಗೂ ಲೈಂಗಿಕ ಸಂಬಂಧ ಮಾಡಬಾರದು. ಅದು ನಿಮ್ಮ ತಂದೆಗೆ ಅವಮಾನ ತರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 “ ‘ನಿನ್ನ ಮಲತಾಯಿಯೊಂದಿಗೆ ಲೈಂಗಿಕ ಸಂಬಂಧ ಮಾಡಬೇಡ. ಅದು ನಿನ್ನ ತಂದೆಗೆ ಅಗೌರವವನ್ನುಂಟು ಮಾಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 18:8
10 ತಿಳಿವುಗಳ ಹೋಲಿಕೆ  

ನಿಮ್ಮಲ್ಲಿ ಜಾರತ್ವವುಂಟೆಂದು ಜನರು ಸಾಧಾರಣವಾಗಿ ಹೇಳುತ್ತಾರೆ. ಒಬ್ಬನು ತನ್ನ ಅಪ್ಪನ ಹೆಂಡತಿಯನ್ನು ಇಟ್ಟುಕೊಂಡಿದ್ದಾನಂತೆ; ಅಂಥ ಜಾರತ್ವವು ಅನ್ಯಜನರಲ್ಲಿಯೂ ಇಲ್ಲ.


ಯಾವನಾದರೂ ಮಲತಾಯಿಯನ್ನು ಕೂಡಿದರೆ ಅವನು ತಂದೆಗೇ ಮಾನಭಂಗಮಾಡಿದ ಹಾಗಾಯಿತು; ಅವರಿಬ್ಬರಿಗೂ ಮರಣಶಿಕ್ಷೆಯಾಗಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಅವರು - ಮಲತಾಯಿಯನ್ನು ಸಂಗವಿುಸಿ ತಂದೆಗೆ ಅವಮಾನಪಡಿಸಿದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ತಂದೆಗೆ ಹೆಂಡತಿಯಾದವಳನ್ನು ಸಂಗವಿುಸಲೇಬಾರದು; ಅದು ತಂದೆಗೆ ಅಪಮಾನಪಡಿಸಿದ ಹಾಗಾಗುವದು.


ಬಡವನು ತಲೆಯ [ಮೇಲೆ ಎರಚಿಕೊಂಡ] ನೆಲದ ದೂಳನ್ನೂ ಆತುರವಾಗಿ ಆಶಿಸುತ್ತಾರೆ; ದೀನರ ದಾರಿಗೆ ಅಡ್ಡಿಹಾಕುತ್ತಾರೆ; ಮಗನೂ ತಂದೆಯೂ ಒಬ್ಬಳಲ್ಲೇ ಹೋಗಿ ನನ್ನ ಪವಿತ್ರನಾಮವನ್ನು ಅಪಕೀರ್ತಿಗೆ ಗುರಿಮಾಡುತ್ತಾರೆ;


ಆದರೂ ದಡವನ್ನು ಮೀರಿದ ಪ್ರವಾಹದಂತಿರುವ ನೀನು ಇನ್ನು ಪ್ರಮುಖನ ಸ್ಥಾನದಲ್ಲಿ ಇರುವದಿಲ್ಲ. ನಿನ್ನ ತಂದೆಯ ಹಾಸಿಗೆಯನ್ನು ಹತ್ತಿ ಅದನ್ನು ಹೊಲೆ ಮಾಡಿದಿಯಲ್ಲಾ. ಇವನು ನನ್ನ ಮಂಚವನ್ನು ಹತ್ತಿದನು!


ನಿನ್ನಲ್ಲಿ ತಂದೆಗೆ ಮಾನಭಂಗಮಾಡಿದ್ದಾರೆ; ನಿನ್ನಲ್ಲಿ ಮುಟ್ಟಿನಿಂದ ಅಶುದ್ಧಳಾದವಳನ್ನು ಕೂಡಿದ್ದಾರೆ.


ಇಸ್ರಾಯೇಲನು ಆ ದೇಶದಲ್ಲಿ ವಾಸವಾಗಿದ್ದಾಗ ರೂಬೇನನು ತನ್ನ ತಂದೆಯ ಉಪಪತ್ನಿಯಾದ ಬಿಲ್ಹಳಲ್ಲಿ ಸಂಗವಿುಸಿದನು; ಮತ್ತು ಆ ಸಂಗತಿಯು ಇಸ್ರಾಯೇಲನಿಗೆ ತಿಳಿದುಬಂತು. ಯಾಕೋಬನ ಗಂಡು ಮಕ್ಕಳು ಹನ್ನೆರಡು ಮಂದಿ.


ಬೀಜಹೊಡಿಸಿಕೊಂಡಾಗಲಿ ರಹಸ್ಯಾಂಗ ಛೇದಿಸಿಕೊಂಡಾಗಲಿ ನಪುಂಸಕರಾದವರು ಯೆಹೋವನ ಸಭೆಯಲ್ಲಿ ಸೇರಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು