Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:11 - ಕನ್ನಡ ಸತ್ಯವೇದವು J.V. (BSI)

11 ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

11 “‘ಕದಿಯಬಾರದು, “‘ಮೋಸಮಾಡಬಾರದು, “‘ಒಬ್ಬರಿಗೊಬ್ಬರು ಸುಳ್ಳು ಹೇಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

11 “ಕಳಬೇಡ; ಹುಸಿಯನ್ನು ನುಡಿಯಲು ಬೇಡ; ಒಬ್ಬರನ್ನೊಬ್ಬರು ಮೋಸಗೊಳಿಸುವುದು ಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

11 “ನೀವು ಕದಿಯಬಾರದು; ಮೋಸಮಾಡಬಾರದು; ಒಬ್ಬರಿಗೊಬ್ಬರು ಸುಳ್ಳಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

11 “ ‘ಕದಿಯಬಾರದು. “ ‘ಸುಳ್ಳಾಡಬಾರದು. “ ‘ಒಬ್ಬರಿಗೊಬ್ಬರು ಮೋಸಮಾಡಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:11
28 ತಿಳಿವುಗಳ ಹೋಲಿಕೆ  

ಒಬ್ಬರಿಗೊಬ್ಬರು ಸುಳ್ಳಾಡಬೇಡಿರಿ; ನೀವು ಪೂರ್ವಸ್ವಭಾವವನ್ನು ಅದರ ಕೃತ್ಯಗಳ ಕೂಡ ತೆಗೆದಿಟ್ಟು ನೂತನಸ್ವಭಾವವನ್ನು ಧರಿಸಿಕೊಂಡಿದ್ದೀರಲ್ಲವೇ.


ಆದಕಾರಣ ಸುಳ್ಳಾಡುವದನ್ನು ಬಿಟ್ಟುಬಿಟ್ಟು ಪ್ರತಿಯೊಬ್ಬನು ತನ್ನ ನೆರೆಯವನ ಸಂಗಡ ಸತ್ಯವನ್ನೇ ಆಡಲಿ; ಯಾಕಂದರೆ ನಾವು ಒಬ್ಬರಿಗೊಬ್ಬರು ಅಂಗಗಳಾಗಿದ್ದೇವಲ್ಲಾ.


ಮೋಸಗಾರನು ನನ್ನ ಮನೆಯಲ್ಲಿರಲೇಬಾರದು; ಸುಳ್ಳುಗಾರನು ನನ್ನ ಮುಂದೆ ನಿಲ್ಲಕೂಡದು.


ಎಲ್ಲಾ ಮನುಷ್ಯರು ಸುಳ್ಳುಗಾರರಾದರೂ ದೇವರು ಸತ್ಯವಂತನೇ ಸರಿ. ನೀನು ಎಲ್ಲಾ ನುಡಿಗಳಲ್ಲಿ ನ್ಯಾಯಸ್ಥನೆಂದು ಕಾಣಿಸಿಕೊಳ್ಳಬೇಕು, ನಿನ್ನ ಮೇಲೆ ವ್ಯಾಜ್ಯ ನಡೆಯುವಾಗ ನೀನು ಗೆಲ್ಲಬೇಕು ಎಂದು ಬರೆದದೆ.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಕಳವು ಮಾಡುವವನು ಇನ್ನು ಮೇಲೆ ಕಳವುಮಾಡದೆ ಕೈಯಿಂದ ಯಾವದೊಂದು ಒಳ್ಳೇ ಉದ್ಯೋಗವನ್ನು ಮಾಡಿ ದುಡಿಯಲಿ; ಆಗ ಕಷ್ಟದಲ್ಲಿರುವವರಿಗೆ ಕೊಡುವದಕ್ಕೆ ಅವನಿಂದಾಗುವದು.


ಚಿಕ್ಕವರು ಮೊದಲುಗೊಂಡು ದೊಡ್ಡವರ ತನಕ ಎಲ್ಲರು ಬಾಚಿಕೊಳ್ಳುತ್ತಲೇ ಇದ್ದಾರೆ; ಪ್ರವಾದಿಗಳು ಮೊದಲಾಗಿ ಯಾಜಕರವರೆಗೆ ಸಕಲರು ಮೋಸಮಾಡುತ್ತಾರೆ.


ಭರವಸವುಳ್ಳವನಾಗಿಯೇ ಇದ್ದೆನು.


ಒಬ್ಬನು ಹಣವನ್ನಾದರೂ ಒಡವೆಗಳನ್ನಾದರೂ ಕಾಪಾಡುವದಕ್ಕೆ ಮತ್ತೊಬ್ಬನಿಗೆ ಒಪ್ಪಿಸಿದಾಗ ಅದು ಆ ಮನುಷ್ಯನ ಮನೆಯಲ್ಲಿ ಕಳವಾಗಿ ಹೋದರೆ ಕಳ್ಳನು ಸಿಕ್ಕುವ ಪಕ್ಷಕ್ಕೆ ಎರಡರಷ್ಟು ಕೊಡಬೇಕು.


ಒಬ್ಬನು ಎತ್ತನ್ನಾಗಲಿ ಕುರಿಯನ್ನಾಗಲಿ ಕದ್ದುಕೊಂಡು ಕೊಯಿದರೆ ಇಲ್ಲವೆ ಮಾರಿದರೆ ಅವನು ಎತ್ತಿಗೆ ಪ್ರತಿಯಾಗಿ ಐದು ಎತ್ತುಗಳನ್ನು, ಕುರಿಗೆ ಪ್ರತಿಯಾಗಿ ನಾಲ್ಕು ಕುರಿಗಳನ್ನು ಕೊಡಬೇಕು.


ಮತ್ತೊಬ್ಬನ ಮನೆಯನ್ನು ಆಶಿಸಬಾರದು; ಮತ್ತೊಬ್ಬನ ಹೆಂಡತಿ ಗಂಡಾಳು ಹೆಣ್ಣಾಳು ಎತ್ತು ಕತ್ತೆ ಮುಂತಾದ ಯಾವದನ್ನೂ ಆಶಿಸಬಾರದು.


ಆಗ ಮುದುಕನು - ನಾನೂ ನಿನ್ನಂತೆ ಪ್ರವಾದಿಯಾಗಿದ್ದೇನೆ; ಒಬ್ಬ ದೇವದೂತನು ನನಗೆ ಕಾಣಿಸಿಕೊಂಡು ನಿನ್ನನ್ನು ಕರಕೊಂಡು ಬರಬೇಕೆಂದೂ ನಿನಗೆ ಅನ್ನಪಾನಗಳನ್ನು ಕೊಡಬೇಕೆಂದೂ ಯೆಹೋವನ ಹೆಸರಿನಲ್ಲಿ ಆಜ್ಞಾಪಿಸಿದ್ದಾನೆ ಎಂದು ಹೇಳಿದನು; ಆದರೆ ಈ ಮಾತು ಸುಳ್ಳು.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ದ್ರಾಕ್ಷೆಯ ತೋಟಗಳಲ್ಲಿಯೂ ಹಕ್ಕಲಾಯಕೂಡದು; ಉದುರಿದ ಹಣ್ಣುಗಳನ್ನು ಆರಿಸಿಕೊಳ್ಳದೆ ಬಡವರಿಗೂ ಪರದೇಶಿಗಳಿಗೂ ಬಿಟ್ಟುಬಿಡಬೇಕು. ನಾನು ನಿಮ್ಮ ದೇವರಾದ ಯೆಹೋವನು.


ಅಬ್ಷಾಲೋಮನ ಸೇವಕರು ಸ್ತ್ರೀಯ ಮನೆಗೆ ಹೋಗಿ - ಅಹೀಮಾಚ್ ಯೋನಾತಾನರೆಲ್ಲಿ ಎಂದು ಆಕೆಯನ್ನು ಕೇಳಿದ್ದಕ್ಕೆ ಆಕೆಯು - ಅವರು ಹಳ್ಳದಾಟಿ ಹೋಗಿ ಬಿಟ್ಟರು ಎಂದು ಉತ್ತರ ಕೊಟ್ಟಳು. ಅವರು ಅವರನ್ನು ಹುಡುಕುವದಕ್ಕೆ ಹೋಗಿ ಕಾಣದೆ ಯೆರೂಸಲೇವಿುಗೆ ಹಿಂದಿರುಗಿದರು.


ಕಾರಣವಿಲ್ಲದೆ ನೆರೆಯವನಿಗೆ ವಿರುದ್ಧವಾಗಿ ಸಾಕ್ಷಿ ಹೇಳಬೇಡ; ಮಾತಿನಿಂದ ಮೋಸಮಾಡುವಿಯಾ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು