Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:16 - ಕನ್ನಡ ಸತ್ಯವೇದವು J.V. (BSI)

16 ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ಮತ್ತೊಬ್ಬನಿಗೆ ಮರಣ ಶಿಕ್ಷೆಯಾಗಲೇಬೇಕೆಂದು ಛಲ ಹಿಡಿಯಬಾರದು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 “‘ಪರಿಚಯವುಳ್ಳವರಲ್ಲಿ ಒಬ್ಬರ ಮೇಲೊಬ್ಬರು ಚಾಡಿಹೇಳಬಾರದು. ನೆರೆಯವನಿಗೆ ಮರಣ ಶಿಕ್ಷೆಯಾಗಲೇಬೇಕು ಎಂದು ಹಠ ಹಿಡಿಯಬಾರದು. ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 “ನಿನ್ನ ಜನರ ನಡುವೆ ಚಾಡಿಕೋರನಾಗಿ ತಿರುಗಾಡಬೇಡ; ಮತ್ತೊಬ್ಬನಿಗೆ ಮರಣಶಿಕ್ಷೆ ಆಗಲೇಬೇಕೆಂದು ಛಲಹಿಡಿಯಬೇಡ. ನಾನೇ ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಬೇರೆ ಜನರ ವಿರುದ್ಧ ಚಾಡಿ ಹೇಳಬಾರದು. ನಿಮ್ಮ ನೆರೆಯವನ ಪ್ರಾಣವನ್ನು ಅಪಾಯಕ್ಕೆ ಈಡುಮಾಡುವ ಯಾವ ಕಾರ್ಯವನ್ನೂ ನೀವು ಮಾಡಬಾರದು. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 “ ‘ನಿನ್ನ ಜನರ ಮಧ್ಯದಲ್ಲಿ ಚಾಡಿಗಾರನಾಗಿ ತಿರುಗಾಡಬೇಡ. “ ‘ನಿನ್ನ ನೆರೆಯವನ ರಕ್ತಾಪರಾಧಕ್ಕೆ ಕಾರಣನಾಗಬೇಡ. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:16
24 ತಿಳಿವುಗಳ ಹೋಲಿಕೆ  

ಆಧಾರವಿಲ್ಲದ ಸುದ್ದಿಯನ್ನು ಹಬ್ಬಿಸಬಾರದು. ದುಷ್ಟರ ಸಹಾಯಕ್ಕಾಗಿ ನ್ಯಾಯವಿರುದ್ಧವಾದ ಸಾಕ್ಷಿಯನ್ನು ನುಡಿಯಬಾರದು.


ನಿರಪರಾಧಿಯಾಗಿಯೂ ಸನ್ಮಾರ್ಗಸ್ಥನಾಗಿಯೂ ಇರುವ ಮನುಷ್ಯನಿಗೆ ಮರಣದಂಡನೆಯನ್ನು ವಿಧಿಸಲೇ ಬಾರದು; ಅಂಥ ದುಷ್ಟತ್ವವನ್ನು ಮಾಡಿದವನಿಗೆ ನಾನು ಶಿಕ್ಷೆಯನ್ನು ವಿಧಿಸದೆ ಬಿಡುವದಿಲ್ಲ.


ಚಾಡಿಕೋರನು ಗುಟ್ಟು ರಟ್ಟುಮಾಡುವನು; ಆದದರಿಂದ ತುಟಿಬಿಗಿಹಿಡಿಯದವನ ಗೊಡವೆಗೆ ಹೋಗಬೇಡ.


ನಿನ್ನಲ್ಲಿ ಚಾಡಿಕೋರರು ರಕ್ತಹರಿಸಿದ್ದಾರೆ; ನಿನ್ನವರು ಗುಡ್ಡಗಳ ಮೇಲೆ [ಯಜ್ಞಶೇಷವನ್ನು] ತಿಂದಿದ್ದಾರೆ; ನಿನ್ನ ಮಧ್ಯದಲ್ಲಿ ದುರಾಚಾರಗಳನ್ನು ನಡಿಸಿದ್ದಾರೆ.


ನೀವೆಲ್ಲರೂ ನಿಮ್ಮ ನಿಮ್ಮ ನೆರೆಯವರ ವಿಷಯದಲ್ಲಿ ಎಚ್ಚರಿಕೆಯಾಗಿರಿ, ಯಾರೇ ಆಗಲಿ ತನ್ನ ತಮ್ಮನನ್ನೂ ನಂಬದಿರಲಿ; ಪ್ರತಿಯೊಬ್ಬ ತಮ್ಮನೂ ವಂಚಿಸೇ ವಂಚಿಸುವನು, ಒಬ್ಬೊಬ್ಬ ನೆರೆಯವನೂ ಚಾಡಿಹೇಳುತ್ತಾ ತಿರುಗಾಡುವನು.


ಅವರೆಲ್ಲರೂ ಕೇವಲ ದ್ರೋಹಿಗಳು, ಚಾಡಿಹೇಳುತ್ತಾ ತಿರುಗಾಡುವವರು; ಅವರು [ಬೆಳ್ಳಿಯಲ್ಲಾ,] ತಾಮ್ರ, ಕಬ್ಬಿಣ; ಎಲ್ಲರೂ ಕೇಡಿಗರು.


ಚಾಡಿಕೋರನು ಗುಟ್ಟು ರಟ್ಟುಮಾಡುವನು; ನಂಬಿಗಸ್ತನು ಸಂಗತಿಯನ್ನು ಗುಪ್ತಪಡಿಸುವನು.


ಆದಕಾರಣ ಎಲ್ಲಾ ಕೆಟ್ಟತನವನ್ನೂ ಎಲ್ಲಾ ವಂಚನೆಯನ್ನೂ ಕಪಟವನ್ನೂ ಹೊಟ್ಟೆಕಿಚ್ಚನ್ನೂ


ಅವನು ಚಾಡಿಯನ್ನು ಹೇಳದವನೂ ಮತ್ತೊಬ್ಬರಿಗೆ ಅನ್ಯಾಯಮಾಡದವನೂ ಯಾರನ್ನೂ ನಿಂದಿಸದವನೂ ಆಗಿರಬೇಕು.


ಮತ್ತೊಬ್ಬನ ಮೇಲೆ ಸುಳ್ಳುಸಾಕ್ಷಿ ಹೇಳಬಾರದು.


ದೇವಭಕ್ತೆಯರಿಗೆ ಯೋಗ್ಯವಾದ ನಡತೆಯುಳ್ಳವರೂ ಸದ್ಬೋಧನೆ ಹೇಳುವವರೂ ಆಗಿರಬೇಕೆಂದು ಬೋಧಿಸು.


ದೇವಭಯವಿಲ್ಲದವರೂ ಮಮತೆಯಿಲ್ಲದವರೂ ಸಮಾಧಾನವಾಗದವರೂ ಚಾಡಿಹೇಳುವವರೂ ದಮೆಯಿಲ್ಲದವರೂ ಉಗ್ರತೆಯುಳ್ಳವರೂ ಒಳ್ಳೇದನ್ನು ಪ್ರೀತಿಸದವರೂ


ಹಾಗೆಯೇ ಸಭಾಸೇವಕಿಯರಾದ ಸ್ತ್ರೀಯರೂ ಗೌರವವುಳ್ಳವರಾಗಿರಬೇಕು; ಚಾಡಿ ಹೇಳುವವರಾಗಿರದೆ ಮದ್ಯಾಸಕ್ತಿಯಿಲ್ಲದವರಾಗಿಯೂ ಎಲ್ಲಾ ವಿಷಯಗಳಲ್ಲಿ ನಂಬಿಗಸ್ತರಾಗಿಯೂ ಇರಬೇಕು.


ತಪ್ಪಿಲ್ಲದವನನ್ನು ಮರಣಕ್ಕೆ ಒಪ್ಪಿಸಿಕೊಟ್ಟು ಪಾಪಮಾಡಿದೆನು ಅಂದನು. ಅದಕ್ಕವರು - ಅದು ನಮಗೇನು? ನೀನೇ ನೋಡಿಕೋ ಅಂದರು.


ಅವರು - ಹಣತೆಗೆದುಕೊಂಡು ನಿರಪರಾಧಿಯನ್ನು ಕೊಂದವನು ಶಾಪಗ್ರಸ್ತ ಎನ್ನಲಾಗಿ ಜನರೆಲ್ಲರೂ - ಹೌದು ಅನ್ನಬೇಕು.


ಯಾವನು ಸ್ವಲಾಭಕ್ಕಾಗಿ ವಿುತ್ರರ ಮೇಲೆ ದೂರು ಹೊರಿಸುವನೋ ಅವನ ಮಕ್ಕಳು ಕಂಗೆಡುವರು.


ಈಹೊತ್ತು ಯೆಹೋವನು ಗವಿಯಲ್ಲಿ ನಿನ್ನನ್ನು ನನ್ನ ಕೈಗೆ ಒಪ್ಪಿಸಿಕೊಟ್ಟಿದ್ದನೆಂಬದು ಈಗ ನಿನಗೆ ಗೊತ್ತಾಯಿತಲ್ಲವೋ? ನಿನ್ನನ್ನು ಕೊಂದುಬಿಡಬೇಕೆಂದು ಕೆಲವರು ನನಗೆ ಹೇಳಿದರು; ಆದರೆ ನಾನು ಅವರಿಗೆ - ಯೆಹೋವನ ಅಭಿಷಿಕ್ತನಾದ ನನ್ನ ಒಡೆಯನ ಮೇಲೆ ಕೈಹಾಕುವದಿಲ್ಲ ಎಂದು ಹೇಳಿ ನಿನ್ನನ್ನು ಉಳಿಸಿದೆನು.


ಸಹೋದರನನ್ನು ಕ್ಷುದ್ರಮಾಡುತ್ತಾ ಕೂತುಕೊಳ್ಳುತ್ತೀರಿ; ಒಡಹುಟ್ಟಿದವರನ್ನು ದೂರುತ್ತೀರಿ.


ಗುಪ್ತದಲ್ಲಿ ನೆರೆಯವನ ಮೇಲೆ ಚಾಡಿಹೇಳುವವನನ್ನು ಸಂಹರಿಸುವೆನು; ಸೊಕ್ಕಿನ ಕಣ್ಣೂ ಉಬ್ಬಿದ ಮನಸ್ಸೂ ಉಳ್ಳವನನ್ನು ಸಹಿಸುವದಿಲ್ಲ.


ಹೊಟ್ಟೆಯಲ್ಲಿ ಹಗೆಯನ್ನಿಟ್ಟುಕೊಂಡವನು ಸುಳ್ಳುಗಾರ; ಚಾಡಿಗಾರನು ಜ್ಞಾನಹೀನ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು