ಯಾಜಕಕಾಂಡ 19:19 - ಕನ್ನಡ ಸತ್ಯವೇದವು J.V. (BSI)19 ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ಪಶುಗಳಿಗೆ ಬೇರೆ ಜಾತಿಯ ಪಶುಗಳನ್ನು ಹಾರಿಸಬಾರದು; ನಿಮ್ಮ ಹೊಲಗಳಲ್ಲಿ ವಿುಶ್ರಬೀಜಗಳನ್ನು ಬಿತ್ತಬಾರದು; ನಾರೂ ಉಣ್ಣೆಯೂ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201919 “‘ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. “‘ನಿಮ್ಮ ಪಶುಗಳನ್ನು ಬೇರೆ ಜಾತಿಯ ಪಶುಗಳೊಂದಿಗೆ ಕೂಡಿಸಿ ತಳಿಪಡಿಯಬಾರದು; “‘ನಿಮ್ಮ ಹೊಲಗಳಲ್ಲಿ ಮಿಶ್ರಬೀಜಗಳನ್ನು ಬಿತ್ತಬಾರದು; “‘ನಾರು ಮತ್ತು ಉಣ್ಣೆ ಕೂಡಿರುವ ಬಟ್ಟೆಯನ್ನು ಹಾಕಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)19 “ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು. ನಿಮ್ಮ ಜಾನುವಾರಗಳಿಂದ ಬೆರಕೆ ತಳಿಯನ್ನು ಪಡೆಯಲು ಅವಕಾಶವೀಯಬಾರದು; ನಿಮ್ಮ ಹೊಲದಲ್ಲಿ ಇಬ್ಬಗೆಯ ಬೀಜವನ್ನು ಬಿತ್ತಬಾರದು; ನಾರು ಮತ್ತು ಉಣ್ಣೆಯಿಂದ ನೇಯ್ದ ಬಟ್ಟೆಯನ್ನು ಹಾಕಿಕೊಳ್ಳಬಾರದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್19 “ನೀವು ನನ್ನ ಕಟ್ಟಳೆಗಳಿಗೆ ವಿಧೇಯರಾಗಿರಬೇಕು. ಎರಡು ಬೇರೆ ಜಾತಿಯ ಪಶುಗಳನ್ನು ಒಟ್ಟಿಗೆ ಸೇರಿಸಿ ಈಯಿಸಬಾರದು. ನಿಮ್ಮ ಹೊಲಗಳಲ್ಲಿ ಎರಡು ವಿಧದ ಬೀಜಗಳನ್ನು ಬಿತ್ತಬಾರದು. ಎರಡು ವಿಧದ ದಾರಗಳನ್ನು ಸೇರಿಸಿ ಮಾಡಿದ ಬಟ್ಟೆಯನ್ನು ಧರಿಸಿಕೊಳ್ಳಬಾರದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ19 “ ‘ನೀನು ನನ್ನ ಆಜ್ಞೆಗಳನ್ನು ಕೈಗೊಳ್ಳಬೇಕು. “ ‘ನಿನ್ನ ಪಶುಗಳನ್ನು ಬೇರೆ ಜಾತಿಯೊಂದಿಗೆ ಕೂಡಗೊಡಿಸಬೇಡ. “ ‘ನಿನ್ನ ಹೊಲದಲ್ಲಿ ಮಿಶ್ರವಾದ ಬೀಜಗಳನ್ನು ಬಿತ್ತಬೇಡ. “ ‘ಇದಲ್ಲದೆ ನಾರು ಮತ್ತು ಉಣ್ಣೆ ಕೂಡಿಸಿದ ಬಟ್ಟೆ ನಿನ್ನ ಮೇಲೆ ಇರಬಾರದು. ಅಧ್ಯಾಯವನ್ನು ನೋಡಿ |