Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:27 - ಕನ್ನಡ ಸತ್ಯವೇದವು J.V. (BSI)

27 ಚಂಡಿಕೆ ಬಿಡಬಾರದು, ಗಡ್ಡವನ್ನು ವಿಕಾರಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “‘ಚಂಡಿಕೆ ಬಿಡಬಾರದು ಹಾಗೂ ಗಡ್ಡವನ್ನು ವಿಕಾರಗೊಳಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಚಂಡಿಕೆ ಬಿಡಬೇಡ, ಗಡ್ಡವನ್ನು ವಿಕಾರಗೊಳಿಸಬೇಡ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ನಿಮ್ಮ ಮುಖದ ಪಾರ್ಶ್ವದಲ್ಲಿ ಬೆಳೆಯುವ ಕೂದಲನ್ನು ನೀವು ಕತ್ತರಿಸಬಾರದು. ನಿಮ್ಮ ಮುಖದ ಪಾರ್ಶ್ವದಲ್ಲಿರುವ ಗಡ್ಡವನ್ನು ಕತ್ತರಿಸಿಕೊಳ್ಳುವುದರ ಮೂಲಕ ನೀವು ನಿಮ್ಮ ಗಡ್ಡವನ್ನು ವಿಕಾರ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ ‘ನಿಮ್ಮ ತಲೆಯ ಮೂಲೆಗಳನ್ನು ದುಂಡಗೆ ಕತ್ತರಿಸಬಾರದು. ಇದಲ್ಲದೆ ನಿಮ್ಮ ಗಡ್ಡದ ಮೂಲೆಯನ್ನು ಕೆಡಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:27
11 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ಅವರು ತಲೆಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯ ಮಾಡಿಕೊಳ್ಳಬಾರದು.


ಅವರು ತಲೆ ಬೋಳಿಸಬಾರದು, ಕೂದಲನ್ನು ಬೆಳಸಬಾರದು, ಕತ್ತರಿಸಿಕೊಂಡಿರಬೇಕು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಅವರು ಗೋಣಿತಟ್ಟನ್ನು ಸುತ್ತಿಕೊಳ್ಳುವರು, ದಿಗಿಲು ಅವರನ್ನು ಮುಚ್ಚಿಬಿಡುವದು; ಎಲ್ಲರ ಮುಖದಲ್ಲಿಯೂ ನಾಚಿಕೆತೋರುವದು. ಎಲ್ಲರೂ ತಲೆ ಬೋಳಿಸಿಕೊಂಡಿರುವರು.


ಸತ್ತವರಿಗೋಸ್ಕರ ದುಃಖವನ್ನು ಸೂಚಿಸುವದಕ್ಕಾಗಿ ದೇಹವನ್ನು ಗಾಯಮಾಡಿಕೊಳ್ಳಬಾರದು. ಶರೀರದ ಮೇಲೆ ಹಚ್ಚೇ ಚುಚ್ಚಿಸಿಕೊಳ್ಳಬಾರದು. ನಾನು ಯೆಹೋವನು.


ಗಡ್ಡ ಬೋಳಿಸಿ ಬಟ್ಟೆಹರಿದು ಗಾಯಮಾಡಿಕೊಂಡಿದ್ದ ಎಂಭತ್ತು ಜನರು ಶೆಕೆಮ್, ಶಿಲೋ, ಸಮಾರ್ಯ ಎಂಬ ಊರುಗಳಿಂದ ಒಂದು ಕೈಯಲ್ಲಿ ಧೂಪನೈವೇದ್ಯದ್ರವ್ಯಗಳನ್ನು ತೆಗೆದುಕೊಂಡು ಯೆಹೋವನ ಆಲಯಕ್ಕೆ ಹೋಗುತ್ತಿದ್ದರು.


ಆದದರಿಂದ ಹಾನೂನನು ದಾವೀದನ ಸೇವಕರನ್ನು ಹಿಡಿಸಿ [ಗಡ್ಡದ ಅರ್ಧಭಾಗವನ್ನು] ಬೋಳಿಸಿ ಅವರ ಸೊಂಟದ ಕೆಳಭಾಗದ ನಿಲುವಂಗಿಗಳನ್ನು ಕತ್ತರಿಸಿ ಕಳುಹಿಸಿಬಿಟ್ಟನು.


ಆಹಾ, ಐಗುಪ್ತ್ಯರು ಯೆಹೂದ್ಯರು ಎದೋಮ್ಯರು ಅಮ್ಮೋನ್ಯರು ಮೋವಾಬ್ಯರು ಚಂಡಿಕೆಬಿಟ್ಟುಕೊಂಡಿರುವ ಅರಣ್ಯನಿವಾಸಿಗಳು, ಅಂತು ಸುನ್ನತಿಯುಳ್ಳವರಾದರೂ ಸುನ್ನತಿಯಿಲ್ಲದ ಇವರೆಲ್ಲರನ್ನೂ ನಾನು ದಂಡಿಸುವ ದಿನಗಳು ಬರುತ್ತವೆ;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು