Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:31 - ಕನ್ನಡ ಸತ್ಯವೇದವು J.V. (BSI)

31 ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 “‘ಸತ್ತವರಲ್ಲಿ ವಿಚಾರಿಸುವವರ ಮತ್ತು ಮಂತ್ರವಾದಿಗಳ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 “ಭೂತಪ್ರೇತಗಳನ್ನು ವಿಚಾರಿಸುವವರ ಬಳಿಗೆ ಹೋಗಬೇಡ; ಅವರ ಆಲೋಚನೆಯನ್ನು ಕೇಳಿ ಅಶುದ್ಧನಾಗಬೇಡ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 “ಸಲಹೆಗಾಗಿ, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಗೆ ಹೋಗಬೇಡಿರಿ. ಅವರು ನಿಮ್ಮನ್ನು ಕೇವಲ ಅಶುದ್ಧರನ್ನಾಗಿ ಮಾಡುವರು. ನಾನೇ ನಿಮ್ಮ ದೇವರಾದ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 “ ‘ಮಾಟಗಾರರನ್ನು ಲಕ್ಷಿಸಬೇಡ, ಅಲ್ಲದೆ ಅವರಿಂದ ಅಶುದ್ಧವಾಗದಂತೆ ಭೂತಪ್ರೇತಗಳನ್ನು ವಿಚಾರಿಸುವವರನ್ನು ಅನುಸರಿಸಬೇಡ. ನಿಮ್ಮ ದೇವರಾಗಿರುವ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:31
22 ತಿಳಿವುಗಳ ಹೋಲಿಕೆ  

ಲೊಚಗುಟ್ಟುವ ಪಿಟಿಪಿಟಿಗುಟ್ಟುವ ಪ್ರೇತವಿಚಾರಕರನ್ನೂ ಬೇತಾಳಿಕರನ್ನೂ ಆಶ್ರಯಿಸಿರಿ ಎಂದು ಒಂದು ವೇಳೆ ನಿಮಗೆ ಹೇಳಾರು. ಜನರು ತಮ್ಮ ದೇವರನ್ನೇ ಆಶ್ರಯಿಸಬಾರದೋ? ಜೀವಿತರಿಗಾಗಿ ಸತ್ತವರಲ್ಲಿ ವಿಚಾರಿಸುವದು ಯುಕ್ತವೋ?


ಸತ್ತವರಲ್ಲಿ ವಿಚಾರಿಸುವವರೂ ಬೇತಾಳಿಕರೂ ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಸೌಲನು ಯೆಹೋವನ ಮಾತನ್ನು ಕೇಳದೆ ಆತನಿಗೆ ವಿರೋಧವಾಗಿ ದ್ರೋಹಮಾಡಿದ್ದರಿಂದಲೂ ಯೆಹೋವನ ಸನ್ನಿಧಿಯಲ್ಲಿ ವಿಚಾರಿಸದೆ ಪ್ರೇತಸಿದ್ಧರಲ್ಲಿ ವಿಚಾರಿಸಿದ್ದರಿಂದಲೂ ಅವನಿಗೆ ಇಂಥ ಮರಣವಾಯಿತು.


ಇದಲ್ಲದೆ ಅವನು ತನ್ನ ಮಗನನ್ನು ಆಹುತಿಕೊಟ್ಟನು. ಕಣಿಹೇಳಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೈತಾಳಿಕರ ಬಳಿಕೆ ಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ಆದರೆ ಹೇಡಿಗಳು, ನಂಬಿಕೆಯಿಲ್ಲದವರು, ಅಸಹ್ಯವಾದದ್ದರಲ್ಲಿ ಸೇರಿದವರು, ಕೊಲೆಗಾರರು, ಜಾರರು, ಮಾಟಗಾರರು, ವಿಗ್ರಹಾರಾಧಕರು, ಎಲ್ಲಾ ಸುಳ್ಳುಗಾರರು ಇವರಿಗೆ ಸಿಕ್ಕುವ ಪಾಲು ಬೆಂಕಿ ಗಂಧಕಗಳುರಿಯುವ ಕೆರೆಯೇ; ಅದು ಎರಡನೆಯ ಮರಣವು ಎಂದು ನನಗೆ ಹೇಳಿದನು.


ಸಮುವೇಲನು ಮೃತಿಹೊಂದಿದ್ದನು. ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟಿದ್ದನು.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ನೀನು ಕುಗ್ಗಿ ಭೂವಿುಯೊಳಗಿಂದ ಮಾತಾಡುವಿ, ನಿನ್ನ ನುಡಿಯು ಮಣ್ಣಿನೊಳಗಿಂದ ಸಣ್ಣಸ್ವರವಾಗಿ ಹೊರಡುವದು. ನಿನ್ನ ಧ್ವನಿಯು ಪ್ರೇತದ ಧ್ವನಿಯಂತೆ ನೆಲದೊಳಗಿಂದ ಬರುವದು, ನಿನ್ನ ನುಡಿಯು ದೂಳಿನೊಳಗಿಂದ ಲೊಚಗುಟ್ಟುವದು.


ಮಾಟಗಾರ್ತಿಯನ್ನು ಬದುಕಲೀಸಬಾರದು.


ಕಕ್ಷಭೇದ ಭಿನ್ನಮತ ಮತ್ಸರ ಕುಡಿಕತನ ದುಂದೌತಣ ಇಂಥವುಗಳೇ.


ತಮ್ಮ ಗಂಡು ಹೆಣ್ಣು ಮಕ್ಕಳನ್ನು ಆಹುತಿಕೊಟ್ಟರು; ಯೆಹೋವನ ದೃಷ್ಟಿಯಲ್ಲಿ ಕೆಟ್ಟವುಗಳಾಗಿರುವ ಕಣಿಹೇಳುವದು, ಯಂತ್ರಮಂತ್ರಗಳನ್ನು ಮಾಡುವದು ಮೊದಲಾದ ದುಷ್ಕೃತ್ಯಗಳಿಗೆ ತಮ್ಮನ್ನು ಮಾರಿಬಿಟ್ಟು ಆತನಿಗೆ ಕೋಪವನ್ನೆಬ್ಬಿಸಿದರು.


ಬಹುಕಾಲದಿಂದಲೂ ಅವನು ಮಂತ್ರತಂತ್ರಗಳನ್ನು ನಡಿಸಿ ಜನರಲ್ಲಿ ಬೆರಗನ್ನು ಹುಟ್ಟಿಸಿದ್ದ ಕಾರಣದಿಂದ ಅವರು ಅವನಿಗೆ ಲಕ್ಷ್ಯಕೊಡುತ್ತಿದ್ದರು.


ರಕ್ತ ಸಹಿತವಾದ ಯಾವ ಮಾಂಸವನ್ನೂ ತಿನ್ನಬಾರದು. ಯಂತ್ರಮಂತ್ರಗಳನ್ನು ಮಾಡಬಾರದು, ಶಕುನಗಳನ್ನು ನೋಡಬಾರದು.


ಇದಲ್ಲದೆ ಅವನು ಸತ್ತವರಲ್ಲಿ ವಿಚಾರಿಸುವವರನ್ನೂ ಬೈತಾಳಿಕರನ್ನೂ ಯೆರೂಸಲೇಮ್ ಯೆಹೂದಪ್ರಾಂತ ಇವುಗಳಲ್ಲಿದ್ದ ಎಲ್ಲಾ ತೆರಾಫೀಮ್ ಎಂಬ ಬೊಂಬೆಗಳನ್ನೂ ಮೂರ್ತಿಗಳನ್ನೂ ಎಲ್ಲಾ ಅಸಹ್ಯ ವಿಗ್ರಹಗಳನ್ನೂ ತೆಗೆದುಹಾಕಿ ಯಾಜಕನಾದ ಹಿಲ್ಕೀಯನಿಗೆ ಯೆಹೋವನ ಆಲಯದಲ್ಲಿ ಸಿಕ್ಕಿದ ಧರ್ಮೋಪದೇಶಗ್ರಂಥದ ವಾಕ್ಯಗಳನ್ನು ನೆರವೇರಿಸಿದನು.


ಪ್ರತಿಯೊಬ್ಬನು ತನ್ನ ತಾಯಿತಂದೆಗಳ ವಿಷಯದಲ್ಲಿ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ನೇವಿುಸಿರುವ ಸಬ್ಬತ್‍ದಿನಗಳನ್ನು ಆಚರಿಸಬೇಕು. ನಾನು ನಿಮ್ಮ ದೇವರಾದ ಯೆಹೋವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು