Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:32 - ಕನ್ನಡ ಸತ್ಯವೇದವು J.V. (BSI)

32 ತಲೆನರೆತ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 “‘ವಯೋ ವೃದ್ಧರ ಮುಂದೆ ಎದ್ದು ನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 “ತಲೆನರೆತ ವೃದ್ಧರ ಮುಂದೆ ಎದ್ದುನಿಂತು ಅವರನ್ನು ಸನ್ಮಾನಿಸಬೇಕು. ನಿಮ್ಮ ದೇವರಲ್ಲಿ ಭಯಭಕ್ತಿಯುಳ್ಳವರಾಗಿರಬೇಕು. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 “ವೃದ್ಧರ ಮುಂದೆ ಎದ್ದು ನಿಂತುಕೊಳ್ಳಿರಿ. ಹಿರಿಯರಿಗೆ ಗೌರವಕೊಡಿರಿ. ನಿಮ್ಮ ದೇವರನ್ನು ಸನ್ಮಾನಿಸಿರಿ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 “ ‘ತಲೆ ನೆರೆತ ವೃದ್ಧರ ಮುಂದೆ ಎದ್ದು ನಿಂತುಕೊಳ್ಳಬೇಕು, ಅವರ ಸಮ್ಮುಖವನ್ನು ಗೌರವಿಸು. ನಿನ್ನ ದೇವರಿಗೆ ಭಯಪಡಬೇಕು. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:32
15 ತಿಳಿವುಗಳ ಹೋಲಿಕೆ  

ವೃದ್ಧನನ್ನು ಗದರಿಸದೆ ತಂದೆಯೆಂದು ಭಾವಿಸಿ ಬುದ್ಧಿಹೇಳು. ಯೌವನಸ್ಥರನ್ನು ಅಣ್ಣತಮ್ಮಂದಿರೆಂದೂ


ಸರದಾರರ ಕೈಗಳನ್ನು ಗಲ್ಲಿಗೆ ನೇತಕಟ್ಟಿದರು; ವೃದ್ಧರು ಮಾನಭಂಗಪಟ್ಟರು.


ನರೆಗೂದಲೇ ಸುಂದರ ಕಿರೀಟವು; ಅದು ಧರ್ಮಮಾರ್ಗದಲ್ಲಿ ದೊರಕುವದು.


ಯುವಕರಿಗೆ ಬಲವು ಭೂಷಣ, ಮುದುಕರಿಗೆ ನರೆಯು ಒಡವೆ.


ಆಗ ಬೂಜ್ ಕುಲಕ್ಕೆ ಸೇರಿದ ಬರಕೇಲನ ಮಗನಾದ ಆ ಎಲೀಹು ಇಂತೆಂದನು - ನಾನು ಯೌವನಸ್ಥನು, ನೀವು ಅತಿವೃದ್ಧರು; ಆದದರಿಂದ ಸಂಕೋಚಪಟ್ಟು ನನ್ನ ಅಭಿಪ್ರಾಯವನ್ನು ನಿಮಗೆ ಅರಿಕೆ ಮಾಡಲು ಅಂಜಿದೆನು.


ಅವರು ತನಗಿಂತ ವೃದ್ಧರಾಗಿದ್ದ ಕಾರಣ ಎಲೀಹು ಯೋಬನೊಂದಿಗೆ ಮೊದಲು ಮಾತಾಡದೆ ತಡೆದಿದ್ದನು.


ನೀವು ದೇವರ ದಾಸರಾಗಿದ್ದೀರಲ್ಲಾ. ಎಲ್ಲರನ್ನೂ ಸನ್ಮಾನಿಸಿರಿ. ಸಹೋದರರನ್ನು ಪ್ರೀತಿಸಿರಿ. ದೇವರಿಗೆ ಭಯಪಡಿರಿ. ಅರಸನನ್ನು ಸನ್ಮಾನಿಸಿರಿ.


ಅವರವರಿಗೆ ಸಲ್ಲಿಸತಕ್ಕದ್ದನ್ನು ಸಲ್ಲಿಸಿರಿ; ಯಾರಿಗೆ ಕಂದಾಯವೋ ಅವರಿಗೆ ಕಂದಾಯವನ್ನು, ಯಾರಿಗೆ ಸುಂಕವೋ ಅವರಿಗೆ ಸುಂಕವನ್ನು, ಯಾರಿಗೆ ಭಯವೋ ಅವರಿಗೆ ಭಯವನ್ನು, ಯಾರಿಗೆ ಮರ್ಯಾದೆಯೋ ಅವರಿಗೆ ಮರ್ಯಾದೆಯನ್ನು ಸಲ್ಲಿಸಿರಿ.


ಪ್ರಜೆಗಳು ಪರಸ್ಪರ ವಿರೋಧಿಗಳಾಗಿ ಒಬ್ಬರನ್ನೊಬ್ಬರು ಹಿಂಸಿಸುವರು; ಹುಡುಗನು ಮುದುಕನ ಮೇಲೆಯೂ ನೀಚನು ಘನವಂತನ ಮೇಲೆಯೂ ಸೊಕ್ಕೇರಿ ನಡೆಯುವರು.


ಕಿವುಡರನ್ನು ದೂಷಿಸಬಾರದು; ಕುರುಡರು ನಡೆಯುವ ದಾರಿಯಲ್ಲಿ ಕಾಲು ಎಡವುವಂತೆ ಕಲ್ಲನ್ನು ಇಡಬಾರದು; ನಿಮ್ಮ ದೇವರಿಗೆ ಭಯಭಕ್ತಿಯಿಂದ ನಡೆದುಕೊಳ್ಳಬೇಕು. ನಾನು ಯೆಹೋವನು.


ಆಕೆಯು ಅದೋನೀಯನಿಗಾಗಿ ಮಾತಾಡುವದಕ್ಕೋಸ್ಕರ ಅರಸನಾದ ಸೊಲೊಮೋನನ ಬಳಿಗೆ ಬರುತ್ತಿರುವಾಗ ಅರಸನು ಎದ್ದುಹೋಗಿ ಆಕೆಯನ್ನು ಎದುರುಗೊಂಡು ನಮಸ್ಕರಿಸಿದನು. ಅನಂತರ ತಾನು ಸಿಂಹಾಸನದ ಮೇಲೆ ಕೂತು ರಾಜಮಾತೆಗೋಸ್ಕರ ಒಂದು ಆಸನವನ್ನು ತರಿಸಲು ಆಕೆಯು ಅವನ ಬಲಗಡೆಯಲ್ಲಿ ಕೂತುಕೊಂಡು -


ರಾಹೇಲಳು ತನ್ನ ತಂದೆಗೆ - ಅಪ್ಪಾ, ನಾನು ನಿನ್ನ ಮುಂದೆ ಎದ್ದು ನಿಂತುಕೊಳ್ಳದೆ ಹೋದರೂ ಕೋಪಿಸಿಕೊಳ್ಳಬೇಡ; ನಾನು ಮುಟ್ಟಾಗಿದ್ದೇನೆ ಎಂದು ಹೇಳಿದ್ದರಿಂದ ಅವನು ಚೆನ್ನಾಗಿ ಹುಡುಕಿದರೂ ಆ ವಿಗ್ರಹಗಳನ್ನು ಕಂಡುಕೊಳ್ಳಲಿಲ್ಲ.


ನಿಮ್ಮನ್ನು ಮಹಾಶಕ್ತಿ ಭುಜಪರಾಕ್ರಮ ಇವುಗಳ ಮೂಲಕವಾಗಿ ಐಗುಪ್ತದೇಶದಿಂದ ಕರಕೊಂಡುಬಂದ ಯೆಹೋವನಾದ ನನ್ನಲ್ಲಿ ಭಯಭಕ್ತಿಯುಳ್ಳವರಾಗಿ ನನಗೊಬ್ಬನಿಗೇ ಕೈ ಮುಗಿದು ಯಜ್ಞವರ್ಪಿಸಬೇಕು,


ಹೆತ್ತ ತಂದೆಯ ಮಾತಿಗೆ ಕಿವಿಗೊಡು; ಮುಪ್ಪಿನಲ್ಲಿಯೂ ತಾಯಿಯನ್ನು ಅಸಡ್ಡೆಮಾಡಬೇಡ.


ಆಗ ಯೋಸೇಫನು ಅವರನ್ನು ತಂದೆಯ ಮೊಣಕಾಲಿನ ಕಡೆಯಿಂದ ಬರಮಾಡಿ [ಅವನಿಗೆ] ಅಡ್ಡಬಿದ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು