Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 19:7 - ಕನ್ನಡ ಸತ್ಯವೇದವು J.V. (BSI)

7 ಮೂರನೆಯ ದಿನದ ತನಕ ವಿುಕ್ಕಿದ್ದು ಹೇಯವಾದದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

7 ಮೂರನೆಯ ದಿನದ ತನಕ ಉಳಿದದ್ದು ಹೇಯವಾದುದರಿಂದ ಅದರಲ್ಲಿ ಏನಾದರೂ ತಿಂದರೆ ಆ ಯಜ್ಞವು ಯೆಹೋವನಿಗೆ ಅಂಗೀಕಾರವಾಗುವುದೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

7 ಮೂರನೆಯ ದಿನದ ತನಕ ಉಳಿದದ್ದು ಅಳಿಸಿಹೋದದ್ದು. ಆದುದರಿಂದ ಅದರಲ್ಲಿ ಏನನ್ನಾದರೂ ತಿಂದರೆ ಆ ಬಲಿದಾನ ಸರ್ವೇಶ್ವರನಿಗೆ ಸ್ವೀಕೃತವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

7 ಅದರಲ್ಲಿ ಯಾವುದನ್ನಾದರೂ ಮೂರನೆಯ ದಿನದಲ್ಲಿ ತಿಂದರೆ, ಅದು ಅಪವಿತ್ರವಾಗುವುದು. ಅದು ಅಂಗೀಕೃತವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

7 ಅದನ್ನು ಮೂರನೆಯ ದಿನದಲ್ಲಿ ತಿಂದದ್ದೇ ಆದರೆ, ಅದು ಅಸಹ್ಯವಾದದ್ದು, ಅದು ಅಂಗೀಕೃತವಾಗುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 19:7
9 ತಿಳಿವುಗಳ ಹೋಲಿಕೆ  

ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.


ಹೋರಿಯನ್ನು ವಧಿಸುವವನು ನರಬಲಿಯನ್ನು ಕೊಡುತ್ತಾನೆ; ಕುರಿಯನ್ನು ಕಡಿಯುವವನು ನಾಯಿಯ ಕತ್ತನ್ನು ಮುರಿಯುತ್ತಾನೆ; ನೈವೇದ್ಯಮಾಡುವವನು ಹಂದಿಯ ರಕ್ತವನ್ನು ಅರ್ಪಿಸುತ್ತಾನೆ; ಧೂಪಹಾಕುವವನು ವಿಗ್ರಹಾರಾಧನೆ ಮಾಡುತ್ತಾನೆ; ಇವರು ಮನಸ್ಸಿಗೆ ಬಂದ ಮಾರ್ಗಗಳನ್ನು ಆರಿಸಿಕೊಂಡು ತಮ್ಮ ಅಸಹ್ಯಕಾರ್ಯಗಳಲ್ಲಿ ಮನಃಪೂರ್ವಕವಾಗಿ ಆನಂದಿಸುತ್ತಾರೆ;


ಗುಪ್ತಸ್ಥಳಗಳಲ್ಲಿ ರಾತ್ರಿಕಳೆಯುತ್ತಾ ಹಂದಿಯ ಬಾಡು ತಿನ್ನುತ್ತಾ ಅಸಹ್ಯಪದಾರ್ಥಗಳ ಸಾರನ್ನು ತಮ್ಮ ಗಂಗಳಗಳಲ್ಲಿ ಬಡಿಸಿಕೊಳ್ಳುತ್ತಾ ಅಲ್ಲಿ ನಿಂತಿರು,


ವ್ಯರ್ಥನೈವೇದ್ಯವನ್ನು ಇನ್ನು ತಾರದಿರಿ, ಧೂಪವು ನನಗೆ ಅಸಹ್ಯ; ಅಮಾವಾಸ್ಯೆ, ಸಬ್ಬತ್‍ದಿನ, ಕೂಟಪ್ರಕಟನೆ, ಇವು ಬೇಡ; ಅಧರ್ಮದಿಂದ ಕೂಡಿದ ಸಂಘವನ್ನು ನಾನು ಸಹಿಸಲಾರೆನು.


ಅನ್ಯದೇಶದವನಿಂದ ತೆಗೆದುಕೊಂಡು ಅಂಥ ಪಶುವನ್ನು ನಿಮ್ಮ ದೇವರಿಗೆ ಆಹಾರವಾಗಿ ಒಪ್ಪಿಸಬಾರದು; ಅದು ಕುಂದುಳ್ಳದ್ದು, ಪೂರ್ಣಾಂಗವಾದದ್ದಲ್ಲ; ಆದಕಾರಣ ಸಮರ್ಪಕವಾಗುವದಿಲ್ಲ.


ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಕವಾಗುವದಿಲ್ಲ.


ನೀವು ಮಾಡುವ ಯಜ್ಞದ ಮಾಂಸವನ್ನು ಆ ದಿನದಲ್ಲಿಯಾಗಲಿ ಮರುದಿನದಲ್ಲಿಯಾಗಲಿ ಊಟಮಾಡಬೇಕು. ಮೂರನೆಯ ದಿನದವರೆಗೆ ಏನಾದರೂ ವಿುಕ್ಕಿದ್ದರೆ ಅದನ್ನು ಬೆಂಕಿಯಿಂದ ಸುಟ್ಟುಬಿಡಬೇಕು.


ಅದರಲ್ಲಿ ಏನಾದರೂ ತಿಂದವನು ಯೆಹೋವನ ದ್ರವ್ಯವನ್ನು ಹೊಲೆಮಾಡಿದವನಾದದರಿಂದ ತನ್ನ ಪಾಪದ ಫಲವನ್ನು ಅನುಭವಿಸಬೇಕು; ಅವನು ಕುಲದಿಂದ ತೆಗೆದುಹಾಕಲ್ಪಡಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು