ಯಾಜಕಕಾಂಡ 2:1 - ಕನ್ನಡ ಸತ್ಯವೇದವು J.V. (BSI)1 ಯಾವನಾದರೂ ಯೆಹೋವನಿಗೆ ಧಾನ್ಯ ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯಿದು ಧೂಪವನ್ನಿಟ್ಟು ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 “‘ಯಾವನಾದರೂ ಯೆಹೋವನಿಗೆ ಧಾನ್ಯನೈವೇದ್ಯವನ್ನು ಮಾಡಬೇಕೆಂದಿದ್ದರೆ ಅದು ಗೋದಿಹಿಟ್ಟಿನದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಹೊಯ್ದು ಅದರ ಮೇಲೆ ಧೂಪವನ್ನು ಇಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 “ಯಾರಾದರು ಸರ್ವೇಶ್ವರ ಸ್ವಾಮಿಗೆ ಧಾನ್ಯವನ್ನು ನೈವೇದ್ಯ ಮಾಡಬೇಕೆಂದಿದ್ದರೆ ಅದು ಗೋದಿ ಹಿಟ್ಟಾಗಿರಬೇಕು. ಅದರ ಮೇಲೆ ಎಣ್ಣೆಹೊಯ್ದು, ಸಾಂಬ್ರಾಣಿಯನ್ನಿಟ್ಟು, ಅದನ್ನು ಆರೋನನ ವಂಶಜರಾದ ಯಾಜಕರ ಬಳಿಗೆ ತರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 “ಒಬ್ಬನು ದೇವರಾದ ಯೆಹೋವನಿಗೆ ಧಾನ್ಯಸಮರ್ಪಣೆ ಮಾಡಬೇಕೆಂದಿದ್ದರೆ, ಅದು ಗೋಧಿಹಿಟ್ಟಾಗಿರಬೇಕು. ಅವನು ಈ ಹಿಟ್ಟಿನ ಮೇಲೆ ಎಣ್ಣೆಯನ್ನು ಹೊಯಿದು, ಧೂಪವನ್ನಿಡಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 “ ‘ಯಾರಾದರೂ ಯೆಹೋವ ದೇವರಿಗೆ ಧಾನ್ಯ ಸಮರ್ಪಣೆಯನ್ನು ಸಮರ್ಪಿಸುವುದಾದರೆ ಅವನ ಸಮರ್ಪಣೆಯು ನಯವಾದ ಹಿಟ್ಟಿನದ್ದಾಗಿರಬೇಕು. ಅವನು ಅದರ ಮೇಲೆ ಎಣ್ಣೆಯನ್ನು ಸುರಿಸಬೇಕು, ಅದರ ಮೇಲೆ ಸಾಂಬ್ರಾಣಿಯನ್ನು ಹಾಕಬೇಕು. ಅಧ್ಯಾಯವನ್ನು ನೋಡಿ |