ಯಾಜಕಕಾಂಡ 2:13 - ಕನ್ನಡ ಸತ್ಯವೇದವು J.V. (BSI)13 ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವದರಿಂದ ಅದು ಯಾವ ನೈವೇದ್ಯದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪು ಸೇರೇ ಇರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201913 ಎಲ್ಲಾ ನೈವೇದ್ಯ ಪದಾರ್ಥಗಳಿಗೂ ಉಪ್ಪುಹಾಕಿ ಸಮರ್ಪಿಸಬೇಕು. ಉಪ್ಪು ಯೆಹೋವನ ಸಂಗಡ ನಿಮಗಿರುವ ಒಡಂಬಡಿಕೆಯನ್ನು ಸೂಚಿಸುವುದರಿಂದ ಅದು ಯಾವ ನೈವೇದ್ಯ ಪದಾರ್ಥವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲಾ ಪದಾರ್ಥಗಳಲ್ಲಿಯೂ ಉಪ್ಪನ್ನು ಸೇರಿಸಲೇಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)13 ನೈವೇದ್ಯವಾಗಿ ಸಮರ್ಪಿಸುವ ಎಲ್ಲ ಆಹಾರ ಪದಾರ್ಥಗಳಿಗೂ ಉಪ್ಪು ಹಾಕಿಯೆ ಸಮರ್ಪಿಸಬೇಕು. ಉಪ್ಪು ಸರ್ವೇಶ್ವರನ ಸಂಗಡ ನಿಮಗಿರುವ ಒಡಂಬಡಿಕೆಯ ಸೂಚನೆ. ಆದ್ದರಿಂದ ಅದು ಯಾವ ನೈವೇದ್ಯ ದ್ರವ್ಯವಾದರೂ ಉಪ್ಪಿಲ್ಲದೆ ಇರಬಾರದು. ನೀವು ಅರ್ಪಿಸುವ ಎಲ್ಲ ಪದಾರ್ಥಗಳಲ್ಲಿಯೂ ಉಪ್ಪು ಸೇರಿಸಿಯೇ ಇರಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್13 ನೀವು ಅರ್ಪಿಸುವ ಪ್ರತಿ ಧಾನ್ಯಸಮರ್ಪಣೆಯಲ್ಲೂ ಉಪ್ಪನ್ನು ಹಾಕಬೇಕು. ನಿಮ್ಮ ಧಾನ್ಯಸಮರ್ಪಣೆಯಲ್ಲಿ ದೇವರ ಒಡಂಬಡಿಕೆಯೆಂಬ ಉಪ್ಪು ಇರಲೇಬೇಕು. ನೀವು ಅರ್ಪಿಸುವ ನಿಮ್ಮ ಎಲ್ಲಾ ಕಾಣಿಕೆಗಳಲ್ಲಿ ಉಪ್ಪನ್ನು ಸೇರಿಸಬೇಕು.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ13 ನಿನ್ನ ಪ್ರತಿಯೊಂದು ಧಾನ್ಯ ಸಮರ್ಪಣೆಯೂ ಉಪ್ಪಿನಲ್ಲಿ ಬೆರಕೆಯಾಗಿರಬೇಕು. ನಿನ್ನ ದೇವರ ಒಡಂಬಡಿಕೆಯ ಉಪ್ಪು ನಿನ್ನ ಸಮರ್ಪಣೆಯಲ್ಲಿ ಇಲ್ಲದೆ ಇರಬಾರದು. ನಿನ್ನ ಎಲ್ಲಾ ಸಮರ್ಪಣೆಗಳಲ್ಲಿ ನೀನು ಉಪ್ಪನ್ನು ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿ |