ಯಾಜಕಕಾಂಡ 2:4 - ಕನ್ನಡ ಸತ್ಯವೇದವು J.V. (BSI)4 ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳಾದರೂ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾದರೂ ಆಗಿರಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20194 “‘ನೀವು ಒಲೆಯಲ್ಲಿ ಅಡಿಗೆಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿಹಿಟ್ಟಿನ ಹೋಳಿಗೆಗಳು ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳು ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)4 “ನೀವು ಒಲೆಯಲ್ಲಿ ಅಡಿಗೆ ಮಾಡಿದ್ದನ್ನು ನೈವೇದ್ಯವಾಗಿ ಸಮರ್ಪಿಸಬೇಕಾದರೆ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಗೋದಿ ಹಿಟ್ಟಿನ ಹೋಳಿಗೆಗಳಾಗಿರಲಿ ಅಥವಾ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳಾಗಿರಲಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್4 “ಒಬ್ಬನು ಒಲೆಯಲ್ಲಿ ಬೇಯಿಸಿದ ಧಾನ್ಯನೈವೇದ್ಯವನ್ನು ಅರ್ಪಿಸಿದರೆ, ಆಗ ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ರೊಟ್ಟಿಯಾಗಲಿ ಅಥವಾ ಎಣ್ಣೆ ಹೊಯಿದು ಮಾಡಿದ ಕಡುಬುಗಳಾಗಲಿ ಆಗಿರಬೇಕು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ4 “ ‘ನೀನು ಒಲೆಯಲ್ಲಿ ಸುಟ್ಟ ಧಾನ್ಯ ಸಮರ್ಪಣೆಯನ್ನು ಕಾಣಿಕೆಯಾಗಿ ತರುವುದಾದರೆ, ಅದು ಹುಳಿಯಿಲ್ಲದ ಮತ್ತು ಎಣ್ಣೆಯಿಂದ ಬೆರೆಸಿದ ನಯವಾದ ಹಿಟ್ಟಿನ ರೊಟ್ಟಿಗಳು ಇಲ್ಲವೆ ಹುಳಿಯಿಲ್ಲದ ಎಣ್ಣೆ ಹೊಯ್ದ ದೋಸೆಗಳಾಗಿರಬೇಕು. ಅಧ್ಯಾಯವನ್ನು ನೋಡಿ |