Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 2:5 - ಕನ್ನಡ ಸತ್ಯವೇದವು J.V. (BSI)

5 ನೀವು ಅರ್ಪಿಸುವದು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ನೀವು ಅರ್ಪಿಸುವ ಧಾನ್ಯ ನೈವೇದ್ಯವು ಕಬ್ಬಿಣದ ಹಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿಹಿಟ್ಟಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನೀವು ಅರ್ಪಿಸುವುದು ಕಬ್ಬಿಣದ ಹೆಂಚಿನ ಮೇಲೆ ಸುಟ್ಟದ್ದಾದರೆ ಅದು ಎಣ್ಣೆ ಬೆರಸಿದ ಹುಳಿಯಿಲ್ಲದ ಗೋದಿ ಹಿಟ್ಟಿನದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಿಮ್ಮ ಧಾನ್ಯನೈವೇದ್ಯವು ಕಬ್ಬಿಣದ ಹಂಚಿನಲ್ಲಿ ಬೇಯಿಸಲ್ಪಟ್ಟಿದ್ದರೆ, ಅದು ಎಣ್ಣೆ ಬೆರೆಸಿದ ಹುಳಿಯಿಲ್ಲದ ಶ್ರೇಷ್ಠ ಹಿಟ್ಟಿನಿಂದ ಮಾಡಿದ್ದಾಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ನಿನ್ನ ಕಾಣಿಕೆಯು ಬೋಗುಣಿಯಲ್ಲಿ ಬೇಯಿಸಿದ ಧಾನ್ಯ ಸಮರ್ಪಣೆಯಾಗಿದ್ದರೆ, ಅದು ಹುಳಿಯಿಲ್ಲದ ನಯವಾದ ಹಿಟ್ಟಿನಿಂದ ಎಣ್ಣೆ ಮಿಶ್ರಿತವಾದದ್ದು ಆಗಿರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 2:5
5 ತಿಳಿವುಗಳ ಹೋಲಿಕೆ  

ಒಲೆಯಲ್ಲಾಗಲಿ ಕಬ್ಬಿಣದ ಹಂಚಿನಲ್ಲಾಗಲಿ ಬಾಂಡ್ಲೆಯಲ್ಲಾಗಲಿ ಬೇಯಿಸಿದ ನೈವೇದ್ಯಪದಾರ್ಥವೆಲ್ಲಾ ಅದನ್ನು ಸಮರ್ಪಿಸುವ ಯಾಜಕನಿಗೆ ಆಗಬೇಕು.


ಕಬ್ಬಿಣದ ಹಂಚಿನ ಮೇಲೆ ಎಣ್ಣೆ ಸವರಿ ಅದನ್ನು ಸುಡಬೇಕು. ಅದನ್ನು ತರುವಾಗ ಅದು ಎಣ್ಣೆಯಿಂದ ನೆನೆದೇ ಇರಬೇಕು. ಅದನ್ನು ಭಾಗ ಭಾಗವಾಗಿ ಮಾಡಿ ಯೆಹೋವನಿಗೆ ಸುವಾಸನೆಯುಳ್ಳ ನೈವೇದ್ಯವನ್ನಾಗಿ ಸಮರ್ಪಿಸಬೇಕು.


ಅದನ್ನು ಚೂರುಚೂರಾಗಿ ಮುರಿದು ಅದರ ಮೇಲೆ ಎಣ್ಣೆ ಹೊಯಿದು ನೈವೇದ್ಯ ಮಾಡಬೇಕು.


ಅವನ ಕಾಣಿಕೆ ಯಾವದಂದರೆ - ದೇವರ ಸೇವೆಗೆ ನೇಮಕವಾದ ರೂಪಾಯಿಯ ತೂಕದ ಮೇರೆಗೆ ನೂರ ಮೂವತ್ತು ರೂಪಾಯಿ ತೂಕದ ಬೆಳ್ಳಿಯ ಹರಿವಾಣವು; ಎಪ್ಪತ್ತು ತೊಲೆ ತೂಕವುಳ್ಳ ಬೆಳ್ಳಿಯ ಬಟ್ಟಲು; ಈ ಎರಡರಲ್ಲಿಯೂ ನೈವೇದ್ಯಕ್ಕಾಗಿ ಎಣ್ಣೆ ಬೆರಸಿದ ಗೋದಿಯ ಹಿಟ್ಟು ತುಂಬಿತ್ತು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು