23 ಆ ದೇಶವನ್ನು ಬಿಟ್ಟುಹೋಗುವಂತೆ ಅಲ್ಲಿಯ ಜನರನ್ನು ನಾನು ಹೊರಡಿಸಿಬಿಡುತ್ತಿದ್ದೇನೆ. ಯಾಕೆಂದರೆ ಅವರು ಆ ಪಾಪಗಳನ್ನೆಲ್ಲಾ ಮಾಡಿದರು. ನಾನು ಆ ಪಾಪಗಳನ್ನು ದ್ವೇಷಿಸುತ್ತೇನೆ. ಆದ್ದರಿಂದ ಅವರು ಜೀವಿಸಿದಂತೆ ನೀವು ಜೀವಿಸಬೇಡಿರಿ!
ನೀವು ಅವರ ದೇಶಕ್ಕೆ ಬಂದು ಅದನ್ನು ಸ್ವಾಧೀನಮಾಡಿಕೊಳ್ಳುವದಕ್ಕೆ ನಿಮ್ಮ ಪುಣ್ಯವೇ ಆಗಲಿ ನಿಮ್ಮ ಸುಸ್ವಭಾವವೇ ಆಗಲಿ ಕಾರಣವಲ್ಲ. ಆ ಜನಾಂಗಗಳ ದುರ್ನಡತೆಯ ದೆಸೆಯಿಂದಲೂ ನಿಮ್ಮ ದೇವರಾದ ಯೆಹೋವನು ನಿಮ್ಮ ಪಿತೃಗಳಾದ ಅಬ್ರಹಾಮ್ ಇಸಾಕ್ ಯಾಕೋಬರಿಗೆ ಪ್ರಮಾಣಪೂರ್ವಕವಾಗಿ ಮಾಡಿದ ವಾಗ್ದಾನವನ್ನು ನೆರವೇರಿಸಬೇಕೆಂದಿದ್ದದರಿಂದಲೂ ಅವರನ್ನು ನಿಮ್ಮ ಎದುರಿನಿಂದ ಹೊರಡಿಸಿಬಿಡುತ್ತಾನೆ.
ಆದದರಿಂದ ನಿಮಗಿಂತ ಮುಂಚೆ ನಡೆಯುತ್ತಿದ್ದ ಅಸಹ್ಯವಾದ ಆಚರಣೆಗಳನ್ನು ನಡಿಸಿ ನಿಮ್ಮನ್ನು ಅಶುದ್ಧಮಾಡಿಕೊಳ್ಳದೆ ನನ್ನ ವಿಧಿಗಳನ್ನೇ ಅನುಸರಿಸಿ ನಡೆಯಬೇಕು; ನಾನು ನಿಮ್ಮ ದೇವರಾದ ಯೆಹೋವನು.