Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:27 - ಕನ್ನಡ ಸತ್ಯವೇದವು J.V. (BSI)

27 ಸತ್ತವರಲ್ಲಿ ವಿಚಾರಿಸುವವರೂ ಬೇತಾಳಿಕರೂ ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 “‘ಸತ್ತವರಲ್ಲಿ ವಿಚಾರಿಸುವವರೂ, ಬೇತಾಳಿಕರೂ ಅವರು ಸ್ತ್ರೀಯರಾಗಲಿ ಅಥವಾ ಪುರುಷರಾಗಲಿ ಅವರು ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು, ಆ ಶಿಕ್ಷೆಗೆ ಅವರೇ ಕಾರಣರು’” ಎಂದು ಹೇಳಿದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಭೂತಪ್ರೇತಗಳನ್ನು ವಿಚಾರಿಸುವವರು ಸ್ತ್ರೀಯರಾಗಲಿ ಪುರುಷರಾಗಲಿ ಮರಣಶಿಕ್ಷೆ ಹೊಂದಬೇಕು. ಕಲ್ಲೆಸೆದು ಅವರನ್ನು ಕೊಲ್ಲಬೇಕು; ಆ ಶಿಕ್ಷೆಗೆ ಅವರೇ ಕಾರಣರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 “ಸತ್ತವರಲ್ಲಿ ವಿಚಾರಿಸುವವರು ಅಥವಾ ಬೇತಾಳಿಕರು, ಪುರುಷರಾಗಲಿ ಸ್ತ್ರೀಯರಾಗಲಿ ಆಗಿದ್ದರೂ, ಅವರಿಗೆ ಮರಣಶಿಕ್ಷೆಯಾಗಬೇಕು. ಜನರು ಅವರನ್ನು ಕಲ್ಲೆಸೆದು ಕೊಲ್ಲಬೇಕು. ಅವರ ಮರಣಕ್ಕೆ ಅವರೇ ಜವಾಬ್ದಾರರಾಗಿದ್ದಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 “ ‘ಪುರುಷನಾಗಲಿ, ಸ್ತ್ರೀಯಾಗಲಿ ಮಾಟಗಾರರಾಗಿದ್ದರೆ ಇಲ್ಲವೆ ಭೂತಪ್ರೇತಗಳನ್ನು ವಿಚಾರಿಸುವವರಾಗಿದ್ದರೆ, ಅವರನ್ನು ನಿಶ್ಚಯವಾಗಿ ಕೊಲ್ಲಬೇಕು. ಅವರ ಪಾಪವು ಅವರ ಮೇಲೆ ಇರುವುದು.’ ”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:27
12 ತಿಳಿವುಗಳ ಹೋಲಿಕೆ  

ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಹತ್ತಿರ ಹೋಗಬಾರದು; ಅವರ ಆಲೋಚನೆಯನ್ನು ಕೇಳಿ ಅಶುದ್ಧರಾಗಬಾರದು. ನಾನು ನಿಮ್ಮ ದೇವರಾದ ಯೆಹೋವನು.


ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಮಾಟಗಾರ್ತಿಯನ್ನು ಬದುಕಲೀಸಬಾರದು.


ಬಳಿಕ ಪ್ರಾರ್ಥನೆ ನಡೆಯುವ ಆ ಸ್ಥಳಕ್ಕೆ ನಾವು ಹೋಗುತ್ತಿರುವಾಗ ಗಾರುಡಗಾತಿಯಾದ ಒಬ್ಬ ದಾಸಿಯು ನಮ್ಮೆದುರಿಗೆ ಬಂದಳು. ಅವಳು ಕಣಿ ಹೇಳುವದರಿಂದ ಅವಳ ಯಜಮಾನರಿಗೆ ಬಹು ಆದಾಯವಾಗುತ್ತಿತ್ತು.


ನೀನು ಇಸ್ರಾಯೇಲ್ಯರಿಗೆ ಹೀಗೆ ಹೀಗೆ ಆಜ್ಞಾಪಿಸಬೇಕು - ಇಸ್ರಾಯೇಲ್ಯರಲ್ಲಾಗಲಿ ಅವರ ನಡುವೆ ಇಳುಕೊಂಡಿರುವ ಪರದೇಶದವರಲ್ಲಾಗಲಿ ಯಾವನಾದರೂ ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟರೆ ಅವನಿಗೆ ಮರಣಶಿಕ್ಷೆಯಾಗಬೇಕು; ದೇಶದ ಜನರು ಅವನನ್ನು ಕಲ್ಲೆಸೆದು ಕೊಲ್ಲಬೇಕು.


ಆ ದೂಷಿಸಿದವನನ್ನು ಪಾಳೆಯದ ಹೊರಗೆ ಒಯ್ಯಬೇಕು. ಅವನ ದೂಷಣೆಯ ಮಾತುಗಳನ್ನು ಕೇಳಿದವರೆಲ್ಲರೂ ಅವನ ತಲೆಯ ಮೇಲೆ ತಮ್ಮ ಕೈಗಳನ್ನಿಟ್ಟನಂತರ ಸಮೂಹದವರೆಲ್ಲರೂ ಅವನನ್ನು ಕಲ್ಲೆಸೆದು ಕೊಲ್ಲಬೇಕು.


ತರುವಾಯ ಯೆಹೋವನು - ಆ ಮನುಷ್ಯನಿಗೆ ಮರಣಶಿಕ್ಷೆಯಾಗಬೇಕು; ಸರ್ವಸಮೂಹದವರು ಪಾಳೆಯದ ಹೊರಗೆ ಅವನನ್ನು ಕಲ್ಲೆಸೆದು ಕೊಲ್ಲಬೇಕೆಂದು ಮೋಶೆಗೆ ಆಜ್ಞಾಪಿಸಿದನು.


ಹೀಗೆ ನೀವು ಆ ದುಷ್ಟತ್ವವನ್ನು ನಿಮ್ಮ ಮಧ್ಯದೊಳಗಿಂದ ತೆಗೆದುಹಾಕಿಬಿಡಬೇಕು. ಇಸ್ರಾಯೇಲ್ಯರೆಲ್ಲರೂ ಕೇಳಿ ಭಯಪಡುವರು.


ಸಮುವೇಲನು ಮೃತಿಹೊಂದಿದ್ದನು. ಇಸ್ರಾಯೇಲ್ಯರು ಅವನಿಗೋಸ್ಕರ ಗೋಳಾಡಿ ಅವನ ಶವವನ್ನು ಅವನ ಸ್ವಂತ ಊರಾದ ರಾಮದಲ್ಲಿ ಸಮಾಧಿಮಾಡಿದ್ದರು. ಸೌಲನು ಸತ್ತವರಲ್ಲಿ ವಿಚಾರಿಸುವವರನ್ನೂ ಬೇತಾಳಿಕರನ್ನೂ ದೇಶದಿಂದ ಹೊರಡಿಸಿಬಿಟ್ಟಿದ್ದನು.


ಇದಲ್ಲದೆ ಅವನು ತನ್ನ ಮಕ್ಕಳನ್ನು ಬೆನ್‍ಹಿನ್ನೋಮ್ ತಗ್ಗಿನಲ್ಲಿ ಆಹುತಿಕೊಟ್ಟನು. ಕಣಿಹೇಳಿಸುವದು, ಶಕುನ ನೋಡಿಸುವದು, ಯಂತ್ರಮಂತ್ರಗಳನ್ನು ಮಾಡಿಸುವದು, ಸತ್ತವರಲ್ಲಿ ವಿಚಾರಿಸುವವರ ಮತ್ತು ಬೇತಾಳಿಕರ ಬಳಿಕೆಮಾಡುವದು ಇವೇ ಮೊದಲಾದ ದುಷ್ಕೃತ್ಯಗಳಿಂದ ಯೆಹೋವನಿಗೆ ಕೋಪವನ್ನೆಬ್ಬಿಸಿದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು