Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:4 - ಕನ್ನಡ ಸತ್ಯವೇದವು J.V. (BSI)

4 ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಡಲಾಗಿ ದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟಾಗ ಸ್ವದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಆ ವ್ಯಕ್ತಿ ತನ್ನ ಮಕ್ಕಳಲ್ಲಿ ಒಂದನ್ನು ಮೋಲೆಕ ದೇವತೆಗೆ ಅರ್ಪಿಸಿದ್ದರೂ ನಾಡಿನವರು ಅವನನ್ನು ಕೊಲ್ಲದೆ ಅವನು ಮಾಡಿದ ಕೃತ್ಯವನ್ನು ನೋಡಿಯೂ ನೋಡದವರಂತೆ ವರ್ತಿಸಿದರೆ

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಒಂದುವೇಳೆ ದೇಶದ ಜನರು ಅವನು ಮಾಡಿದ ಕಾರ್ಯವನ್ನು ನಿರ್ಲಕ್ಷಿಸಿ ಅವನನ್ನು ಕೊಲ್ಲದಿದ್ದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆ ಮನುಷ್ಯನು ತನ್ನ ಸಂತತಿಯನ್ನು ಮೋಲೆಕನಿಗೆ ಕೊಡುವಾಗ, ಜನರು ತಮ್ಮ ಕಣ್ಣುಗಳನ್ನು ಮರೆಮಾಡಿ, ಅವನನ್ನು ಕೊಲ್ಲದೆ ಹೋದರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:4
9 ತಿಳಿವುಗಳ ಹೋಲಿಕೆ  

ಆ ಅಜ್ಞಾನಕಾಲಗಳನ್ನು ದೇವರು ಲಕ್ಷ್ಯಕ್ಕೆ ತರಲಿಲ್ಲ; ಈಗಲಾದರೋ ಆತನು ನಾಲ್ಕು ದಿಕ್ಕಿನಲ್ಲಿರುವ ಮನುಷ್ಯರೆಲ್ಲರೂ ತನ್ನ ಕಡೆಗೆ ತಿರುಗಿಕೊಳ್ಳಬೇಕೆಂದು ಅಪ್ಪಣೆಕೊಡುತ್ತಾನೆ.


ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಆದದರಿಂದ ಇಸ್ರಾಯೇಲ್ಯರು ಶತ್ರುಗಳ ಮುಂದೆ ನಿಲ್ಲಲಾರದೆ ಅವರಿಗೆ ಬೆನ್ನು ತೋರಿಸುವರು. ಅವರು ಶಾಪಗ್ರಸ್ತರೇ. ಶಾಪಕ್ಕೆ ಕಾರಣವಾದದ್ದನ್ನು ನಿಮ್ಮ ಮಧ್ಯದಿಂದ ತೆಗೆದು ಹಾಕುವವರೆಗೆ ನಾನು ನಿಮ್ಮ ಸಂಗಡ ಬರುವದಿಲ್ಲ. ಎದ್ದು ಜನರನ್ನು ಶುದ್ಧಪಡಿಸು.


ಅವನನ್ನು ಕನಿಕರಿಸಕೂಡದು, ತಪ್ಪಿಸಕೂಡದು, ಬಚ್ಚಿಡಕೂಡದು; ಕೊಲ್ಲಿಸಲೇಬೇಕು.


ಆದರೂ ಕೆಲವು ವಿಷಯಗಳಲ್ಲಿ ನಿನ್ನ ಮೇಲೆ ತಪ್ಪುಹೊರಿಸಬೇಕಾಗುತ್ತದೆ; ವಿಗ್ರಹಕ್ಕೆ ನೈವೇದ್ಯಮಾಡಿದ ಪದಾರ್ಥಗಳನ್ನು ತಿನ್ನುವದರಲ್ಲಿಯೂ ಜಾರತ್ವ ಮಾಡುವದರಲ್ಲಿಯೂ ಇಸ್ರಾಯೇಲ್ಯರು ಮುಗ್ಗರಿಸಿ ಬೀಳಬೇಕೆಂದು ಬಿಳಾಮನು ಬಾಲಾಕನಿಗೆ ಹೇಳಿದ ದುರ್ಬೋಧನೆಯನ್ನು ಅವಲಂಬಿಸಿರುವವರು ನಿನ್ನಲ್ಲಿದ್ದಾರೆ.


ಅವನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಟ್ಟು ನನ್ನ ದೇವಸ್ಥಾನವನ್ನು ಅಶುದ್ಧಮಾಡಿ ನನ್ನ ಪರಿಶುದ್ಧವಾದ ಹೆಸರನ್ನು ಅಪಕೀರ್ತಿಗೆ ಒಳಪಡಿಸಿದದರಿಂದ ನಾನು ಅವನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ನಾನಂತೂ ಆ ಮನುಷ್ಯನಿಗೂ ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆಮಾಡಿದವರೆಲ್ಲರನ್ನೂ ಕುಲದಿಂದ ತೆಗೆದುಹಾಕುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು