Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 20:5 - ಕನ್ನಡ ಸತ್ಯವೇದವು J.V. (BSI)

5 ನಾನಂತೂ ಆ ಮನುಷ್ಯನಿಗೂ ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆಮಾಡಿದವರೆಲ್ಲರನ್ನೂ ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಆಗ ನಾನು ಆ ಮನುಷ್ಯನಿಗೂ ಮತ್ತು ಅವನ ಕುಟುಂಬದವರಿಗೂ ವಿಮುಖನಾಗಿ ಅವನನ್ನು ಮಾತ್ರವಲ್ಲದೆ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕನಿಗೆ ಸೇವೆ ಮಾಡಿದವರೆಲ್ಲರನ್ನು ಕುಲದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ನಾನು ಆ ವ್ಯಕ್ತಿಗೂ ಅವನ ಕುಟುಂಬದವರಿಗೂ ವಿಮುಖನಾಗುವೆನು; ಅವನನ್ನು ಮಾತ್ರವಲ್ಲ, ಅವನನ್ನು ಹೊಂದಿಕೊಂಡು ದೇವದ್ರೋಹಿಗಳಾಗಿ ಮೋಲೆಕ ದೇವತೆಗೆ ಶರಣಾದವರೆಲ್ಲರನ್ನು ತಮ್ಮ ಜನದಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ನಾನು ಅವನಿಗೂ ಅವನ ಕುಟುಂಬಕ್ಕೂ ವಿರುದ್ಧನಾಗಿರುವೆನು; ನಾನು ಅವನನ್ನು ಅವನ ಜನರಿಂದ ಬೇರ್ಪಡಿಸುವೆನು. ಮೊಲೆಕನೊಡನೆ ಸೂಳೆತನ ಮಾಡುವ ಅವನನ್ನೂ ಅವನ ಹಿಂಬಾಲಕರನ್ನೂ ಅವರ ಜನರಿಂದ ಬೇರ್ಪಡಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಆಗ ನಾನು ಆ ಮನುಷ್ಯನಿಗೂ, ಅವನ ಕುಟುಂಬಕ್ಕೂ ವಿರೋಧವಾಗಿಯೂ, ವಿಮುಖವಾಗಿಯೂ ಇರುವೆನು. ಮೋಲೆಕನನ್ನು ಪೂಜೆ ಮಾಡಿದ್ದಕ್ಕಾಗಿ ಅವನನ್ನೂ, ದೇವದ್ರೋಹಿಗಳಾಗಿ ಅವನನ್ನು ಹಿಂಬಾಲಿಸುವವರೆಲ್ಲರನ್ನೂ ಅವರ ಜನರ ಮಧ್ಯದೊಳಗಿಂದ ತೆಗೆದುಹಾಕುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 20:5
13 ತಿಳಿವುಗಳ ಹೋಲಿಕೆ  

ಅವರು ತಮ್ಮ ದುಷ್ಕೃತ್ಯಗಳಿಂದ ಅಶುದ್ಧರಾದರು. ದುರಾಚಾರಗಳಿಂದ ದೇವದ್ರೋಹಿಗಳಾದರು.


ಅವಳು ನನ್ನನ್ನು ಮರೆತು ಮೂಗುತಿ ಮೊದಲಾದ ಒಡವೆಗಳಿಂದ ತನ್ನನ್ನು ಸಿಂಗರಿಸಿಕೊಂಡು ವಿುಂಡರ ಹಿಂದೆಹೋಗಿ ಬಾಳ್‍ದೇವತೆಗಳ ಉತ್ಸವದಿನಗಳಲ್ಲಿ ಧೂಪಹಾಕಿದ್ದಕ್ಕೆ ನಾನು ಅವಳನ್ನು ದಂಡಿಸುವೆನು; ಇದು ಯೆಹೋವನ ನುಡಿ.


ಅವರ ತಾಯಿಯು ಸೂಳೆತನ ಮಾಡಿದ್ದಾಳೆ, ಹೆತ್ತವಳು ನಾಚಿಕೆಗೇಡಿಯಾಗಿ ನಡೆದಿದ್ದಾಳೆ; ನನಗೆ ಬೇಕಾದ ಅನ್ನಪಾನಗಳನ್ನೂ ಉಣ್ಣೆನಾರುಗಳನ್ನೂ ತೈಲವನ್ನೂ ಪಾಯಸ ಪಾನಕಗಳನ್ನೂ ನನಗೆ ಕೊಡುವ ನನ್ನ ವಿುಂಡರ ಹಿಂದೆ ಹೋಗುವೆನು ಅಂದುಕೊಂಡಿದ್ದಾಳೆ.


ನಾನು ಅವರ ಹಿತವನ್ನೂ ಅವರ ತರುವಾಯ ಅವರ ಮಕ್ಕಳ ಹಿತವನ್ನೂ ಬಯಸುತ್ತಾ ಅವರು ಸದಾ ನನ್ನಲ್ಲಿ ಭಯಭಕ್ತಿಯುಳ್ಳವರಾಗಿರುವಂತೆ ಎಲ್ಲರಿಗೂ ಒಂದೇ ಮನಸ್ಸನ್ನೂ ಒಂದೇ ಮಾರ್ಗವನ್ನೂ ಅನುಗ್ರಹಿಸುವೆನು.


ಕಣ್ಣೆತ್ತಿ ಬೋಳುಗುಡ್ಡಗಳನ್ನು ನೋಡು, ಯಾವದರಲ್ಲಿ ನಿನ್ನನ್ನು ಕೆಡಿಸಲಿಲ್ಲ? ಅರಬಿಯನು ಅಡವಿಯಲ್ಲಿ ಹೊಂಚುಹಾಕುವ ಹಾಗೆ ನೀನು ದಾರಿಯ ಮಗ್ಗುಲಲ್ಲಿ ಅವರಿಗಾಗಿ ಹೊಂಚುತ್ತಾ ಕೂತಿದ್ದೀ; ನಿನ್ನ ಸೂಳೆತನದಿಂದಲೂ ನಿನ್ನ ಕೆಟ್ಟತನದಿಂದಲೂ ದೇಶವನ್ನು ಅಪವಿತ್ರಮಾಡಿದ್ದೀ.


ಇದಲ್ಲದೆ ಇಸ್ರಾಯೇಲ್ಯರಲ್ಲಿಯಾಗಲಿ ಅವರ ನಡುವೆ ಇಳುಕೊಂಡಿರುವ ಅನ್ಯದೇಶದವರಲ್ಲಿಯಾಗಲಿ ಯಾವನಾದರೂ ರಕ್ತಭೋಜನಮಾಡಿದರೆ ನಾನು ಆತನ ಮೇಲೆ ಉಗ್ರವಾದ ಕೋಪವನ್ನು ಮಾಡಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಅವರು ಇದುವರೆಗೆ ಪೂಜಿಸುತ್ತಿದ್ದ ಅಜದೇವತೆಗಳಿಗೆ ಇನ್ನು ಮುಂದೆ ಬಲಿಕೊಟ್ಟು ದೇವದ್ರೋಹಿಗಳಾಗಬಾರದು. ಅವರಿಗೂ ಅವರ ಸಂತತಿಯವರಿಗೂ ಇದು ಶಾಶ್ವತ ನಿಯಮ.


ಅವುಗಳಿಗೆ ಅಡ್ಡಬೀಳಲೂ ಬಾರದು ಪೂಜೆಮಾಡಲೂ ಬಾರದು. ನಿನ್ನ ದೇವರಾದ ಯೆಹೋವನೆಂಬ ನಾನು ನನಗೆ ಸಲ್ಲತಕ್ಕ ಗೌರವವನ್ನು ಮತ್ತೊಬ್ಬನಿಗೆ ಸಲ್ಲಗೊಡಿಸದವನಾದದರಿಂದ ನನ್ನನ್ನು ದ್ವೇಷಿಸುವವರ ವಿಷಯದಲ್ಲಿ ತಂದೆಗಳ ದೋಷಫಲವನ್ನು ಮಕ್ಕಳ ಮೇಲೆ ಮೂರು ನಾಲ್ಕು ತಲೆಗಳವರೆಗೆ ಬರಮಾಡುವವನಾಗಿಯೂ


ಆ ಮನುಷ್ಯನು ತನ್ನ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಕೊಡಲಾಗಿ ದೇಶದವರು ಅವನನ್ನು ಕೊಲ್ಲದೆ ಅವನು ಮಾಡಿದ ಕೆಲಸವನ್ನು ನೋಡಿಯೂ ನೋಡದವರಂತಿದ್ದರೆ


ಯಾವನಾದರೂ ಸತ್ತವರಲ್ಲಿ ವಿಚಾರಿಸುವವರ ಅಥವಾ ಬೇತಾಳಿಕರ ಬಳಿಗೆ ಹೋಗಿ ಅವರ ಆಲೋಚನೆ ಕೇಳಿಕೊಂಡು ದೇವದ್ರೋಹಿಯಾದರೆ ನಾನು ಆ ಮನುಷ್ಯನಿಗೆ ವಿಮುಖನಾಗಿ ಅವನನ್ನು ಕುಲದಿಂದ ತೆಗೆದುಹಾಕುವೆನು.


ಮತ್ತು ಅವನು ಯೆಹೂದದ ಗುಡ್ಡಗಳಲ್ಲಿ ಪೂಜಾಸ್ಥಳಗಳನ್ನು ಏರ್ಪಡಿಸಿ ಯೆರೂಸಲೇವಿುನವರನ್ನು ದೇವದ್ರೋಹಮಾಡುವಂತೆ ಪ್ರೇರಿಸಿ ಯೆಹೂದ್ಯರನ್ನು ಸನ್ಮಾರ್ಗದಿಂದ ತಪ್ಪಿಸಿದನು.


ಆದಕಾರಣ ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಹೀಗನ್ನುತ್ತಾನೆ - ಆಹಾ, ಯೆಹೂದವನ್ನೆಲ್ಲಾ ನಿರ್ಮೂಲಮಾಡುವೆನು, ಕೇಡಿಗಾಗಿಯೇ ನಿಮ್ಮ ಮೇಲೆ ದೃಷ್ಟಿಯಿಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು