Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:12 - ಕನ್ನಡ ಸತ್ಯವೇದವು J.V. (BSI)

12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವಿಸುವ ದೇವರ ಮಂದಿರದ ಗೌರವಕ್ಕೆ ಕುಂದುಬರುವದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ; ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಇದಕ್ಕಾಗಿ ಅವನು ದೇವಸ್ಥಾನವನ್ನು ಬಿಡಲೇ ಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವರ ಮಂದಿರದ ಗೌರವಕ್ಕೆ ಕುಂದು ಬರುವುದು. ತನ್ನ ದೇವರ ಅಭಿಷೇಕತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನಲ್ಲಾ, ನಾನು ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಇದಕ್ಕಾಗಿ ದೇವಸ್ಥಾನವನ್ನು ಬಿಡಲೇಬಾರದು; ಬಿಟ್ಟುಹೋದರೆ ತಾನು ಸೇವೆಮಾಡುವ ದೇವಮಂದಿರದ ಗೌರವಕ್ಕೆ ಕುಂದುಬರುವುದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನು ಸರ್ವೇಶ್ವರ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಪ್ರಧಾನಯಾಜಕನು ದೇವರ ಪರಿಶುದ್ಧ ಸ್ಥಳವನ್ನು ಬಿಟ್ಟು ಹೊರಗೆ ಹೋದರೆ ಅಶುದ್ಧನಾಗುವನು. ಅಲ್ಲದೆ ಅವನಿಂದ ದೇವರ ಪರಿಶುದ್ಧಸ್ಥಳವು ಅಶುದ್ಧವಾಗುವುದು. ಅಭಿಷೇಕತೈಲವು ಪ್ರಧಾನಯಾಜಕನ ತಲೆಯ ಮೇಲೆ ಹೊಯ್ಯಲ್ಪಟ್ಟಿದೆ. ಇದು ಅವನನ್ನು ಇತರ ಜನರಿಂದ ಪ್ರತ್ಯೇಕಗೊಳಿಸಿದೆ. ನಾನೇ ಯೆಹೋವನು!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಇದಲ್ಲದೆ ಪರಿಶುದ್ಧ ಸ್ಥಳದಿಂದ ಹೊರಗೆ ಹೋಗಬಾರದು ಮತ್ತು ತನ್ನ ದೇವರ ಪರಿಶುದ್ಧ ಸ್ಥಳವನ್ನು ಅಪವಿತ್ರ ಮಾಡಬಾರದು. ಏಕೆಂದರೆ ತನ್ನ ದೇವರ ಅಭಿಷೇಕ ತೈಲವನ್ನು ತಲೆಯ ಮೇಲೆ ಹೊಯ್ಯಿಸಿಕೊಂಡು ಪ್ರತಿಷ್ಠಿತನಾಗಿದ್ದಾನೆ. ನಾನೇ ಯೆಹೋವ ದೇವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:12
9 ತಿಳಿವುಗಳ ಹೋಲಿಕೆ  

ಯೆಹೋವನ ಅಭಿಷೇಕ ತೈಲವು ನಿಮ್ಮ ಮೇಲಿರುವದರಿಂದ ನೀವು ದೇವದರ್ಶನದ ಗುಡಾರದ ಬಾಗಲನ್ನು ಬಿಟ್ಟು ಹೋಗಬಾರದು; ಹೋದರೆ ಸತ್ತೀರಿ ಎಂದು ಹೇಳಿದನು. ಮೋಶೆಯ ಮಾತಿನಂತೆಯೇ ಅವರು ನಡಕೊಂಡರು.


ಚೊಕ್ಕಬಂಗಾರದ ಪಟ್ಟವನ್ನು ಮಾಡಿಸಿ ಮುದ್ರೆಯನ್ನು ಕೆತ್ತುವ ರೀತಿಯಾಗಿ ಅದರಲ್ಲಿ ಯೆಹೋವನಿಗೆ ಮೀಸಲು ಎಂಬ ಲಿಪಿಯನ್ನು ಕೆತ್ತಿಸಬೇಕು.


ಕರ್ತನಾದ ಯೆಹೋವನ ಆತ್ಮವು ನನ್ನ ಮೇಲೆ ಅದೆ, ಆತನು ನನ್ನನ್ನು ಬಡವರಿಗೆ ಶುಭವರ್ತಮಾನವನ್ನು ಸಾರುವದಕ್ಕೆ ಅಭಿಷೇಕಿಸಿದನು; ಮನಮುರಿದವರನ್ನು ಕಟ್ಟಿ ವಾಸಿಮಾಡುವದಕ್ಕೂ ಸೆರೆಯವರಿಗೆ ಬಿಡುಗಡೆಯಾಗುವದನ್ನು, ಬಂದಿಗಳಿಗೆ [ಕದ] ತೆರೆಯುವದನ್ನು ಪ್ರಸಿದ್ಧಿಪಡಿಸುವದಕ್ಕೂ


ಆಗ ಮೋಶೆ ಅಭಿಷೇಕತೈಲದಲ್ಲಿಯೂ ಯಜ್ಞವೇದಿಯ ಮೇಲಿದ್ದ ರಕ್ತದಲ್ಲಿಯೂ ಸ್ವಲ್ಪ ತೆಗೆದುಕೊಂಡು ಆರೋನನ ಮತ್ತು ಅವನ ವಸ್ತ್ರಗಳ ಮೇಲೆಯೂ ಅವನ ಮಕ್ಕಳ ಮತ್ತು ಅವರ ವಸ್ತ್ರಗಳ ಮೇಲೆಯೂ ಚಿವಿುಕಿಸಿದನು. ಹೀಗೆ ಆರೋನನನ್ನೂ ಅವನ ವಸ್ತ್ರಗಳನ್ನೂ ಅವನ ಮಕ್ಕಳನ್ನೂ ಅವರ ವಸ್ತ್ರಗಳನ್ನೂ ಪ್ರತಿಷ್ಠಿಸಿದನು.


ದೇವರು ನಜರೇತಿನ ಯೇಸುವನ್ನು ಪವಿತ್ರಾತ್ಮದಿಂದಲೂ ಬಲದಿಂದಲೂ ಅಭಿಷೇಕಿಸಿದನು; ದೇವರು ಆತನ ಸಂಗಡ ಇದ್ದದರಿಂದ ಆತನು ಉಪಕಾರಗಳನ್ನು ಮಾಡುತ್ತಾ ಸೈತಾನನಿಂದ ಬಾಧಿಸಲ್ಪಡುತ್ತಿರುವವರೆಲ್ಲರನ್ನು ಗುಣಮಾಡುತ್ತಾ ಸಂಚರಿಸಿದನು; ಇದೆಲ್ಲಾ ನಿಮಗೆ ಗೊತ್ತಾಗಿರುವದಷ್ಟೆ.


ಅವನು ಪುರುಷ ಸಂಪರ್ಕವೇ ಇಲ್ಲದ ಯುವತಿಯನ್ನು ಮದುವೆ ಮಾಡಿಕೊಳ್ಳಬೇಕೇ ಹೊರತು


ತನ್ನನ್ನು ಯೆಹೋವನಿಗೆ ಪ್ರತಿಷ್ಠಿಸಿಕೊಂಡ ದಿನಗಳೆಲ್ಲಾ ಯಾವ ಶವವನ್ನೂ ಮುಟ್ಟಬಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು