Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:17 - ಕನ್ನಡ ಸತ್ಯವೇದವು J.V. (BSI)

17 ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗಹೀನನೂ ದೇವರ ಆಹಾರವನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು; ಅಂಗಹೀನನು ಈ ಕಾರ್ಯವನ್ನು ವಹಿಸಿಕೊಳ್ಳಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 “ನೀನು ಆರೋನನಿಗೆ ಹೀಗೆ ಆಜ್ಞಾಪಿಸು, ‘ನಿನ್ನ ಸಂತತಿಯವರ ಎಲ್ಲಾ ತಲಾಂತರಗಳಲ್ಲಿಯೂ ಯಾವ ಅಂಗವಿಕಲನೂ ದೇವರ ಆಹಾರವನ್ನು ಸಮರ್ಪಿಸುವುದಕ್ಕೆ ನನ್ನ ಸನ್ನಿಧಿಗೆ ಬರಬಾರದು; ಅಂಗವಿಕಲನು ಈ ಕಾರ್ಯವನ್ನು ವಹಿಸಿಕೊಳ್ಳಲೇ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ನಿನ್ನ ಸಂತತಿಯವರಲ್ಲಿ, ತಲತಲಾಂತರದವರೆಗೂ, ಯಾವ ಅಂಗವಿಕಲನೂ ದೇವ ಆಹಾರವನ್ನು ಸಮರ್ಪಿಸಲು ನನ್ನ ಸನ್ನಿಧಿಗೆ ಬರಬಾರದು. ಅಂಗವಿಕಲನು ಈ ಸೇವೆಯನ್ನು ವಹಿಸಿಕೊಳ್ಳಲೇಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಆರೋನನಿಗೆ ಹೀಗೆ ಹೇಳು: ನಿನ್ನ ಸಂತತಿಯವರ ಮಕ್ಕಳಲ್ಲಿ ಯಾರಾದರೂ ಅಂಗವಿಕಲರಾಗಿದ್ದರೆ, ಅವರು ವಿಶೇಷ ರೊಟ್ಟಿಯನ್ನು ದೇವರ ಬಳಿಗೆ ತೆಗೆದುಕೊಂಡು ಹೋಗಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಆರೋನನೊಂದಿಗೆ ಮಾತನಾಡಿ ಹೀಗೆ ಹೇಳು: ‘ನಿನ್ನ ಸಂತತಿಯ ವಂಶಾವಳಿಗಳಲ್ಲಿ ಯಾವನಿಗೆ ನ್ಯೂನತೆವಿರುತ್ತದೋ, ಅವನು ದೇವರ ರೊಟ್ಟಿಯನ್ನು ಸಮರ್ಪಿಸುವುದಕ್ಕಾಗಿ ಬರಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:17
12 ತಿಳಿವುಗಳ ಹೋಲಿಕೆ  

ನಿನ್ನ ಅಂಗಳದಲ್ಲಿ ವಾಸಿಸುವವರಾಗಿ ನಿನ್ನ ಸನ್ನಿಧಿಯಲ್ಲಿ ಸೇವೆಮಾಡುವದಕ್ಕೋಸ್ಕರ ಯಾರನ್ನು ಆರಿಸಿಕೊಳ್ಳುತ್ತೀಯೋ ಅವರೇ ಧನ್ಯರು. ನೀನು ವಾಸಿಸುವ ಮಹಾಪವಿತ್ರಾಲಯದ ಸೌಭಾಗ್ಯದಿಂದ ನಮಗೆ ಸಂತೃಪ್ತಿಯಾಗಲಿ.


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಇಂಥವನೇ ನಮಗೆ ಬೇಕಾದ ಮಹಾಯಾಜಕನು. ಈತನು ಪರಿಶುದ್ಧನೂ ನಿರ್ದೋಷಿಯೂ ನಿಷ್ಕಳಂಕನೂ ಪಾಪಿಗಳಲ್ಲಿ ಸೇರದೆ ಪ್ರತ್ಯೇಕವಾಗಿರುವವನೂ ಆಕಾಶಮಂಡಲಗಳಿಗಿಂತ ಉನ್ನತದಲ್ಲಿರುವವನೂ ಆಗಿರುವನು.


ಸಭಾಧ್ಯಕ್ಷನು ದೋಷಾರೋಪಣೆಯಿಲ್ಲದವನೂ ಏಕಪತ್ನಿಯುಳ್ಳವನೂ ಮದ್ಯಾಸಕ್ತಿಯಿಲ್ಲದವನೂ ಜಿತೇಂದ್ರಿಯನೂ ಮಾನಸ್ಥನೂ ಅತಿಥಿಸತ್ಕಾರಮಾಡುವವನೂ ಬೋಧಿಸುವದರಲ್ಲಿ ಪ್ರವೀಣನೂ ಆಗಿರಬೇಕು.


ನಂಬುವವರಾದ ನಿಮ್ಮ ವಿಷಯದಲ್ಲಿ ನಾವು ಎಷ್ಟೋ ಶುದ್ಧರಾಗಿಯೂ ನೀತಿವಂತರಾಗಿಯೂ ನಿರ್ದೋಷಿಗಳಾಗಿಯೂ ನಡೆದುಕೊಂಡೆವೆಂಬದಕ್ಕೆ ನೀವು ಸಾಕ್ಷಿಗಳು, ದೇವರೂ ಸಾಕ್ಷಿ.


ಬೀಜದೋಷವುಳ್ಳವನಾಗಲಿ ಬೇರೆ ಯಾವ ಕಳಂಕವಿದ್ದವನಾಗಲಿ ಯೆಹೋವನಿಗೆ ಹೋಮದ್ರವ್ಯಗಳನ್ನು ಸಮರ್ಪಿಸುವದಕ್ಕೆ ಸನ್ನಿಧಿಗೆ ಬರಬಾರದು. ಅಂಥವನು ದೇಹದಲ್ಲಿ ದೋಷವಿರುವದರಿಂದ ದೇವರ ಆಹಾರವನ್ನು ಸಮರ್ಪಿಸಲೇಬಾರದು.


ಅವರು ದೇವರಿಗೆ ಮೀಸಲಾಗಿರಬೇಕು; ತಾವು ಸೇವಿಸುವ ದೇವರ ಹೆಸರನ್ನು ಅಪಕೀರ್ತಿಗೆ ಗುರಿಪಡಿಸಬಾರದು. ತಮ್ಮ ದೇವರ ಆಹಾರವನ್ನು ಅಂದರೆ ಯೆಹೋವನ ಹೋಮದ್ರವ್ಯಗಳನ್ನು ಅವರು ಸಮರ್ಪಿಸುವವರಾಗಿರುವದರಿಂದ ಪವಿತ್ರರಾಗಿರಬೇಕು.


ಯಾಜಕನು ಅದನ್ನು ಯಜ್ಞವೇದಿಯ ಮೇಲೆ ಹೋಮ ಮಾಡಬೇಕು. ಅದು ಸುಗಂಧ ಹೋಮರೂಪವಾಗಿ ಯೆಹೋವನಿಗೆ ಆಹಾರವಾಗಿರುವದು. ಯಜ್ಞಪಶುಗಳ ಕೊಬ್ಬೆಲ್ಲವೂ ಯೆಹೋವನದು.


ಯಾಜಕನು ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಮೂಲಕವಾಗಿ ಯೆಹೋವನಿಗೆ ಆಹಾರವಾಗುವದು.


ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ನೀನು ಆರೋನನಿಗೆ ಹೀಗೆ ಆಜ್ಞಾಪಿಸು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು