Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 21:5 - ಕನ್ನಡ ಸತ್ಯವೇದವು J.V. (BSI)

5 ಅವರು ತಲೆಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಅವರು ತಲೆಬೋಳಿಸಿಕೊಳ್ಳಬಾರದು, ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಯಾಜಕರು ತಲೆ ಬೋಳಿಸಿಕೊಳ್ಳಬಾರದು; ಗಡ್ಡವನ್ನು ಕತ್ತರಿಸಿ ವಿಕಾರಗೊಳಿಸಿಕೊಳ್ಳಬಾರದು; ದೇಹವನ್ನು ಗಾಯಮಾಡಿಕೊಳ್ಳಬಾರದು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 “ಯಾಜಕರು ತಮ್ಮ ತಲೆಗಳನ್ನು ಬೋಳಿಸಿಕೊಳ್ಳಬಾರದು; ತಮ್ಮ ಗಡ್ಡದ ಪಾರ್ಶ್ವಗಳನ್ನು ಕತ್ತರಿಸಿ ವಿಕಾರಗೊಳಿಸಬಾರದು; ತಮ್ಮ ದೇಹಗಳಲ್ಲಿ ಯಾವ ಗಾಯ ಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 “ ‘ಅವರು ತಮ್ಮ ತಲೆಯನ್ನು ಬೋಳಿಸಿಕೊಳ್ಳಬಾರದು. ಅಲ್ಲದೆ ತಮ್ಮ ಗಡ್ಡದ ಮೂಲೆಯನ್ನು ಬೋಳಿಸಿಕೊಳ್ಳಬಾರದು. ದೇಹವನ್ನು ಗಾಯಮಾಡಿಕೊಳ್ಳಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 21:5
12 ತಿಳಿವುಗಳ ಹೋಲಿಕೆ  

ನೀವು ನಿಮ್ಮ ದೇವರಾಗಿರುವ ಯೆಹೋವನ ಮಕ್ಕಳಾಗಿರುವದರಿಂದ ಸತ್ತವರಿಗೋಸ್ಕರ ದೇಹವನ್ನು ಗಾಯಮಾಡಿಕೊಳ್ಳಬಾರದು; ಮುಂದಲೆಯನ್ನು ಬೋಳಿಸಿಕೊಳ್ಳಲೂಬಾರದು.


ಅವರು ತಲೆ ಬೋಳಿಸಬಾರದು, ಕೂದಲನ್ನು ಬೆಳಸಬಾರದು, ಕತ್ತರಿಸಿಕೊಂಡಿರಬೇಕು.


[ಯೆಹೂದವೇ,] ನಿನ್ನ ಮುದ್ದು ಮಕ್ಕಳಿಗಾಗಿ ಕ್ಷೌರಮಾಡಿಸಿಕೋ, ತಲೆಬೋಳಿಸಿಕೋ; ನಿನ್ನ ಬೋಳುತನವನ್ನು ರಣಹದ್ದಿನ ಹಾಗೆ ವಿಸ್ತರಿಸಿಕೋ; ಅವರು ನಿನ್ನ ಕಡೆಯಿಂದ ಸೆರೆಹೋಗಿದ್ದಾರಲ್ಲಾ!


ನಿಮ್ಮ ಉತ್ಸವಗಳನ್ನು ದುಃಖಕ್ಕೆ ಮಾರ್ಪಡಿಸುವೆನು, ನಿಮ್ಮ ಗಾಯನಗಳನ್ನೆಲ್ಲಾ ಶೋಕಗೀತಕ್ಕೆ ತಿರುಗಿಸುವೆನು; ಎಲ್ಲರೂ ಸೊಂಟಕ್ಕೆ ಗೋಣಿತಟ್ಟನ್ನು ಸುತ್ತಿಕೊಂಡು ತಲೆಬೋಳಿಸಿಕೊಳ್ಳುವಂತೆ ಮಾಡುವೆನು; ನಿನ್ನ ಪ್ರಲಾಪವು ಏಕಪುತ್ರಶೋಕಕ್ಕೆ ಸಮಾನವಾಗುವದು, ಅದು ಆದ ಮೇಲೂ ವ್ಯಾಕುಲವು ಇದ್ದೇ ಇರುವದು.


ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರ, ಎಲ್ಲರ ಕೈಯಲ್ಲಿ ಗಾಯ, ಎಲ್ಲರ ನಡುವಿನ ಮೇಲೆ ಗೋಣಿತಟ್ಟು.


ಈ ದೇಶದಲ್ಲಿನ ದೊಡ್ಡವರೂ ಅಲ್ಪರೂ ಸಾಯುವರು; ಅವರನ್ನು ಯಾರೂ ಹೂಣಿಡರು, ಅವರಿಗಾಗಿ ಯಾರೂ ಗೋಳಾಡರು, ಗಾಯ ಮಾಡಿಕೊಳ್ಳರು, ತಲೆಬೋಳಿಸಿಕೊಳ್ಳರು;


ಕಣ್ಣೀರುಸುರಿಸಿ ಅಂಗಲಾಚಿ ತಲೆಬೋಳಿಸಿಕೊಂಡು ಗೋಣಿತಟ್ಟನ್ನು ಸುತ್ತಿಕೊಳ್ಳಿರಿ ಎಂದು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಆ ದಿನದಲ್ಲಿ ನಿಮಗೆ ಆಜ್ಞಾಪಿಸಿದನು;


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಮೋಶೆ ಆರೋನನಿಗೂ ಅವನ ಮಕ್ಕಳಾದ ಎಲ್ಲಾಜಾರ್ ಈತಾಮಾರ್ ಎಂಬವರಿಗೂ - ನೀವು ತಲೆಯನ್ನು ಕೆದರಿಕೊಳ್ಳಬಾರದು; ಬಟ್ಟೆಗಳನ್ನು ಹರಿದುಕೊಳ್ಳಬಾರದು. ಹಾಗೆ ಮಾಡಿದರೆ ನೀವೂ ಸತ್ತೀರಿ; ಅದಲ್ಲದೆ ಯೆಹೋವನಿಗೆ ಜನಸಮೂಹದವರೆಲ್ಲರ ಮೇಲೆ ಸಿಟ್ಟು ಉಂಟಾದೀತು. ಯೆಹೋವನು ಹೊತ್ತಿಸಿದ ಈ ಬೆಂಕಿಯ ದೆಸೆಯಿಂದ ನಿಮ್ಮ ಸಹೋದರರಾಗಿರುವ ಎಲ್ಲಾ ಇಸ್ರಾಯೇಲ್ಯರ ಮನೆತನದವರೇ ದುಃಖಿಸಲಿ.


ಅವನು ಕುಲದಲ್ಲಿ ನಾಯಕನಾಗಿರುವದರಿಂದ ತನ್ನನ್ನು ಅಪವಿತ್ರಮಾಡಿಕೊಳ್ಳಕೂಡದು; ಮಾಡಿದರೆ ಯಾಜಕಸೇವೆಗೆ ಅಯೋಗ್ಯನಾದಾನು.


ನರಪುತ್ರನೇ, ಹದವಾದ ಖಡ್ಗವನ್ನು ತೆಗೆದುಕೊಂಡು ಕ್ಷೌರಕನ ಕತ್ತಿಯನ್ನಾಗಿ ಉಪಯೋಗಿಸಿ ನಿನ್ನ ತಲೆಯನ್ನೂ ಗಡ್ಡವನ್ನೂ ಬೋಳಿಸಿಬಿಟ್ಟು ತ್ರಾಸನ್ನು ತಂದು ಅದರಿಂದ ಆ ಕೂದಲನ್ನು ಸರಿಯಾಗಿ ಮೂರು ಭಾಗ ಮಾಡು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು