Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:22 - ಕನ್ನಡ ಸತ್ಯವೇದವು J.V. (BSI)

22 ಕುರುಡಾದದ್ದು ಕುಂಟಾದದ್ದು ಗಾಯವಾದದ್ದು ಹುಣ್ಣುಳ್ಳದ್ದು ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೂಬಾರದು, ಯಜ್ಞವೇದಿಯ ಮೇಲೆ ಹೋಮಮಾಡಲೂ ಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಕುರುಡಾದದ್ದು, ಕುಂಟಾದದ್ದು, ಗಾಯವಾದದ್ದು, ಹುಣ್ಣುಳ್ಳದ್ದು, ಕಜ್ಜಿ ತುರಿಯುಳ್ಳದ್ದು ಇಂಥವುಗಳನ್ನು ಯೆಹೋವನಿಗೆ ಸಮರ್ಪಿಸಲೇಬಾರದು, ಯಜ್ಞವೇದಿಯ ಮೇಲೆ ಹೋಮ ಮಾಡಲೇಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಕುರುಡಾದುದು, ಹುಣ್ಣು, ಕಜ್ಜಿ, ತುರಿ ಉಳ್ಳದ್ದು ಇಂಥ ಪ್ರಾಣಿಗಳನ್ನು ಸರ್ವೇಶ್ವರನಿಗೆ ಸಮರ್ಪಿಸಬಾರದು; ಬಲಿಪೀಠದ ಮೇಲೆ ಹೋಮಮಾಡಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಕುರುಡಾದದ್ದನ್ನಾಗಲಿ ಮೂಳೆ ಮುರಿದುಕೊಂಡದ್ದನ್ನಾಗಲಿ ಕುಂಟಾದದ್ದನ್ನಾಗಲಿ ಸ್ರಾವವುಳ್ಳದ್ದನ್ನಾಗಲಿ ಕೆಟ್ಟದಾದ ಚರ್ಮರೋಗವುಳ್ಳದ್ದನ್ನಾಗಲಿ ನೀವು ಯೆಹೋವನಿಗೆ ಅರ್ಪಿಸಬಾರದು. ಯೆಹೋವನ ಯಜ್ಞವೇದಿಕೆಯ ಬೆಂಕಿಯಲ್ಲಿ ಅನಾರೋಗ್ಯವಾದ ಪ್ರಾಣಿಗಳನ್ನು ಅರ್ಪಿಸಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಕುರುಡಾದದ್ದು, ಮುರಿದದ್ದು, ಅಂಗಹೀನವಾದದ್ದು, ಬೊಕ್ಕೆಯುಳ್ಳದ್ದು, ಕಜ್ಜಿ ತುರಿಯುಳ್ಳದ್ದು, ಇವುಗಳನ್ನು ನೀವು ಯೆಹೋವ ದೇವರಿಗೆ ಸಮರ್ಪಿಸಲೂಬಾರದು ಮತ್ತು ಅವುಗಳನ್ನು ಬಲಿಪೀಠದ ಮೇಲೆ ದಹನಬಲಿಯಾಗಿ ಯೆಹೋವ ದೇವರಿಗೆ ಸಮರ್ಪಿಸಲೂಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:22
9 ತಿಳಿವುಗಳ ಹೋಲಿಕೆ  

ಕುಂದುಕೊರತೆ ಇರುವಂಥದನ್ನು ತರಬಾರದು; ಅಂಥದು ಸಮರ್ಪಕವಾಗುವದಿಲ್ಲ.


ಕುರುಡಾದ ಪಶುವನ್ನು ಯಜ್ಞಕ್ಕೆ ಒಪ್ಪಿಸುವದು ದೋಷವಲ್ಲವೆಂದು ನೆನಸುತ್ತೀರೋ? ಕುಂಟಾದದ್ದನ್ನೂ ರೋಗದ ಪಶುವನ್ನೂ ಅರ್ಪಿಸುವದು ದೋಷವಲ್ಲವೆಂದು ನಂಬುತ್ತೀರೋ? ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಇಂಥದನ್ನು ನಿನ್ನ ದೇಶಾಧಿಪತಿಗೆ ಒಪ್ಪಿಸು;


ಆರೋನನ ವಂಶದವರಾದ ಯಾಜಕರು ಅದನ್ನು ಯಜ್ಞವೇದಿಯಲ್ಲಿ ಉರಿಯುವ ಕಟ್ಟಿಗೆಯ ಮೇಲಿರುವ ಸರ್ವಾಂಗಹೋಮದ್ರವ್ಯದ ಮೇಲೆಯೇ ಹೋಮಮಾಡಬೇಕು. ಅದು ಯೆಹೋವನಿಗೆ ಸುಗಂಧಹೋಮವಾಗಿರುವದು.


ಆ ಯಜ್ಞಪಶುವಿನ ವಪೆಯನ್ನೂ ಕರುಳುಗಳ ಮೇಲಣ ಎಲ್ಲಾ ಕೊಬ್ಬನ್ನೂ


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆಸಿದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟು ಮಾಡುವ ಸರ್ವಾಂಗಹೋಮವಾಗಿದೆ.


ಅದರ ಕರುಳುಗಳನ್ನೂ ಕಾಲುಗಳನ್ನೂ ನೀರಿನಲ್ಲಿ ತೊಳೆದನಂತರ ಯಾಜಕನು ಅದನ್ನು ಪೂರ್ತಿಯಾಗಿ ಯಜ್ಞವೇದಿಯ ಮೇಲೆ ಹೋಮಮಾಡಬೇಕು. ಅದು ಅಗ್ನಿಯ ಮೂಲಕ ಯೆಹೋವನಿಗೆ ಸುವಾಸನೆಯನ್ನುಂಟುಮಾಡುವ ಸರ್ವಾಂಗಹೋಮವಾಗಿದೆ.


ಯಾವನಾದರೂ ಸಮಾಧಾನಯಜ್ಞಕ್ಕಾಗಿ ಹರಕೆಯಾಗಿಯಾಗಲಿ ಕಾಣಿಕೆಯಾಗಿಯಾಗಲಿ ದನವನ್ನು ಅಥವಾ ಆಡುಕುರಿಗಳನ್ನು ತಂದರೆ ಅವು ಸಮರ್ಪಕವಾಗುವದಕ್ಕೆ ಪೂರ್ಣಾಂಗವಾಗಿಯೇ ಇರಬೇಕು; ಅದರಲ್ಲಿ ಯಾವ ಕುಂದುಕೊರತೆಯೂ ಇರಬಾರದು.


ಹೋರಿಯ ಇಲ್ಲವೆ ಕುರಿಯ ಅವಯವಗಳಲ್ಲಿ ಏನಾದರೂ ಹೆಚ್ಚುಕಡಿಮೆ ಇದ್ದರೆ ಅದನ್ನು ಕಾಣಿಕೆಯಾಗಿ ಸಮರ್ಪಿಸಬಹುದೇ ಹೊರತು ಹರಕೆಯಾಗಿ ಒಪ್ಪಿಸಿದರೆ ಅದು ಸಮರ್ಪಕವಾಗುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು