ಯಾಜಕಕಾಂಡ 22:27 - ಕನ್ನಡ ಸತ್ಯವೇದವು J.V. (BSI)27 ಕರುವಾಗಲಿ ಕುರಿಮರಿಯಾಗಲಿ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿವಸ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿವಸ ಮೊದಲುಗೊಂಡು ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕಾರವಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201927 “ಕರುವಾಗಲಿ, ಕುರಿಮರಿಯಾಗಲಿ ಅಥವಾ ಆಡುಮರಿಯಾಗಲಿ ಹುಟ್ಟಿದಾಗ ಅದು ಏಳು ದಿನಗಳ ವರೆಗೆ ತಾಯಿಯ ಬಳಿಯಲ್ಲಿ ಇರಬೇಕು. ಎಂಟನೆಯ ದಿನದಿಂದ ಅದನ್ನು ಯೆಹೋವನಿಗೆ ಹೋಮವಾಗಿ ಸಮರ್ಪಿಸಿದರೆ ಅದು ಅಂಗೀಕಾರವಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)27 “ಕರುವಾಗಲಿ, ಕುರಿಮರಿಯಾಗಲಿ, ಆಡುಮರಿಯಾಗಲಿ ಹುಟ್ಟಿ ಏಳು ದಿವಸ ಆದ ಬಳಿಕ ಅದನ್ನು ಸರ್ವೇಶ್ವರನಿಗೆ ಹೋಮವಾಗಿ ಸಮರ್ಪಿಸಿದರೆ ಅಂಗೀಕೃತವಾಗುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್27 “ಕರುವಾಗಲಿ ಕುರಿಮರಿಯಾಗಲಿ ಅಥವಾ ಆಡಾಗಲಿ ಹುಟ್ಟಿದ ಬಳಿಕ ತನ್ನ ತಾಯಿಯೊಂದಿಗೆ ಏಳು ದಿನಗಳವರೆಗೆ ಇರಲೇಬೇಕು. ಎಂಟನೆಯ ದಿನದಲ್ಲಿ ಮತ್ತು ಅದರ ನಂತರ, ಆ ಪಶುವು ಸರ್ವಾಂಗಹೋಮಕ್ಕೆ ಯೋಗ್ಯವಾಗಿರುತ್ತದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ27 “ಹೋರಿಯನ್ನಾಗಲಿ ಇಲ್ಲವೆ ಕುರಿಯನ್ನಾಗಲಿ ಇಲ್ಲವೆ ಆಡನ್ನಾಗಲಿ ತಂದಾಗ, ಏಳು ದಿವಸಗಳವರೆಗೆ ಅದು ತನ್ನ ತಾಯಿಯ ಬಳಿಯಲ್ಲಿ ಇರಲಿ. ಎಂಟನೆಯ ದಿನದಿಂದ ಅದು ಯೆಹೋವ ದೇವರಿಗೆ ದಹನಬಲಿಯಾಗಿ ಸಮರ್ಪಿಸಿದರೆ ಅಂಗೀಕಾರವಾಗುವುದು. ಅಧ್ಯಾಯವನ್ನು ನೋಡಿ |