Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:29 - ಕನ್ನಡ ಸತ್ಯವೇದವು J.V. (BSI)

29 ನೀವು ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 “ನೀವು ಕೃತಜ್ಞತೆಯನ್ನು ತೋರಿಸುವುದಕ್ಕಾಗಿ ಯೆಹೋವನಿಗೆ ಮಾಡುವ ಯಜ್ಞವನ್ನು ಮೆಚ್ಚಿಗೆಯಾದ ರೀತಿಯಲ್ಲೇ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನೀವು ಧನ್ಯವಾದ ಸಲ್ಲಿಸಲು ಸರ್ವೇಶ್ವರನಿಗೆ ಮಾಡುವ ಬಲಿದಾನವನ್ನು ಮೆಚ್ಚುಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 “ಯೆಹೋವನಿಗೆ ವಿಶೇಷ ಕೃತಜ್ಞತಾ ಕಾಣಿಕೆಯನ್ನು ಅರ್ಪಿಸಲು ಬಯಸಿದರೆ, ಆ ಕಾಣಿಕೆಯನ್ನು ಯೆಹೋವನಿಗೆ ಮೆಚ್ಚಿಕೆಯಾದ ರೀತಿಯಲ್ಲಿ ಅರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 “ನೀವು ಕೃತಜ್ಞತೆಯ ಯಜ್ಞಾರ್ಪಣೆಯನ್ನು, ಯೆಹೋವ ದೇವರಿಗೆ ಮಾಡುವ ಬಲಿದಾನವನ್ನು ಮೆಚ್ಚಿಗೆಯಾದ ರೀತಿಯಲ್ಲಿ ಸಮರ್ಪಿಸಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:29
9 ತಿಳಿವುಗಳ ಹೋಲಿಕೆ  

ನಾನು ನಿನಗೆ ಕೃತಜ್ಞತಾಯಜ್ಞಗಳನ್ನು ಸಮರ್ಪಿಸುವೆನು; ಯೆಹೋವನಾಮವನ್ನು ಪ್ರಖ್ಯಾತಿಪಡಿಸುವೆನು.


ಕೃತಜ್ಞತಾಯಜ್ಞಗಳನ್ನು ಸಮರ್ಪಿಸಿ ಉತ್ಸಾಹಧ್ವನಿಮಾಡುತ್ತಾ ಆತನ ಮಹತ್ಕಾರ್ಯಗಳನ್ನು ವರ್ಣಿಸಲಿ.


ಹುಳಿಹಿಟ್ಟನ್ನು ಕೃತಜ್ಞತಾರ್ಪಣವಾಗಿ ಹೋಮಮಾಡಿರಿ, [ಕೊಟ್ಟ] ಕಾಣಿಕೆಗಳನ್ನು ಪ್ರಕಟಿಸಿರಿ, ಸಾರಿಕೊಳ್ಳಿರಿ; ಇಸ್ರಾಯೇಲ್ಯರೇ, ಹೀಗೆ ಮಾಡುವದು ನಿಮಗಿಷ್ಟವಷ್ಟೆ; ಇದು ಕರ್ತನಾದ ಯೆಹೋವನ ನುಡಿ.


ನೀವು ಸಹ ಜೀವವುಳ್ಳ ಕಲ್ಲುಗಳಾಗಿದ್ದು ಆತ್ಮ ಸಂಬಂಧವಾದ ಮಂದಿರವಾಗಲಿಕ್ಕೆ ಕಟ್ಟಲ್ಪಡುತ್ತಾ ಇದ್ದೀರಿ, ಮತ್ತು ಯೇಸು ಕ್ರಿಸ್ತನ ಮೂಲಕ ದೇವರಿಗೆ ಸಮರ್ಪಕವಾದ ಆತ್ಮೀಯಯಜ್ಞಗಳನ್ನು ಸಮರ್ಪಿಸುವದಕ್ಕೆ ಪವಿತ್ರ ಯಾಜಕವರ್ಗದವರಾಗಿದ್ದೀರಿ.


ಆದದರಿಂದ ಆತನ ಮೂಲಕವಾಗಿಯೇ ದೇವರಿಗೆ ಸ್ತೋತ್ರಯಜ್ಞವನ್ನು ಎಡೆಬಿಡದೆ ಸಮರ್ಪಿಸೋಣ. ಆತನು ಕರ್ತನೆಂದು ಬಾಯಿಂದ ಪ್ರತಿಜ್ಞೆಮಾಡುವದೇ ನಾವು ಅರ್ಪಿಸುವ ಯಜ್ಞವಾಗಿದೆ.


[ಪಶ್ಚಾತ್ತಾಪದ] ಮಾತುಗಳನ್ನು ತೆಗೆದುಕೊಂಡು ಯೆಹೋವನ ಬಳಿಗೆ ಹಿಂದಿರುಗಿ ಆತನಿಗೆ - ನಮ್ಮ ಅಪರಾಧವನ್ನು ಸಂಪೂರ್ಣವಾಗಿ ನಿವಾರಣೆಮಾಡಿ [ನಮ್ಮಲ್ಲಿನ] ಒಳ್ಳೆಯದನ್ನು ಅಂಗೀಕರಿಸು; ನಮ್ಮ ಸ್ತೋತ್ರಗಳೆಂಬ ಹೋರಿಗಳನ್ನು ಅರ್ಪಿಸುವೆವು.


ಅದೇ ದಿವಸದಲ್ಲಿ ಅದನ್ನು ಊಟಮಾಡಬೇಕು; ಮರುದಿನದವರೆಗೆ ಸ್ವಲ್ಪವನ್ನಾದರೂ ವಿುಗಿಸಬಾರದು. ನಾನು ಯೆಹೋವನು.


ಸಮಾಧಾನಯಜ್ಞನಿಯಮಗಳು. ಯಾರಾದರೂ ಕೃತಜ್ಞತೆಯನ್ನು ತೋರಿಸುವದಕ್ಕಾಗಿ ಸಮಾಧಾನಯಜ್ಞವನ್ನು ಯೆಹೋವನಿಗೆ ಮಾಡುವದಾದರೆ ಅದರೊಡನೆ ಎಣ್ಣೆ ವಿುಶ್ರವಾದ ಹುಳಿಯಿಲ್ಲದ ಹೋಳಿಗೆಗಳನ್ನೂ ಎಣ್ಣೆ ಹಾಕಿದ ಹುಳಿಯಿಲ್ಲದ ಕಡುಬುಗಳನ್ನೂ ಎಣ್ಣೆಯಿಂದ ಪೂರಾ ನೆನಸಿದ ಗೋದಿಹಿಟ್ಟಿನ ಹೋಳಿಗೆಗಳನ್ನೂ ಸಮರ್ಪಿಸಬೇಕು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು