ಯಾಜಕಕಾಂಡ 22:3 - ಕನ್ನಡ ಸತ್ಯವೇದವು J.V. (BSI)3 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು - ನಿಮ್ಮಲ್ಲಿಯಾಗಲಿ ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲ್ಯರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆಯಲ್ಪಡಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20193 ಅವರಿಗೆ ನೀನು ಹೀಗೆ ಆಜ್ಞಾಪಿಸಬೇಕು, ‘ನಿಮ್ಮಲ್ಲಿಯಾಗಲಿ ಅಥವಾ ನಿಮ್ಮ ಸಂತತಿಯವರಲ್ಲಾಗಲಿ ಯಾವನಾದರೂ ಅಶುದ್ಧನಾಗಿರುವಾಗ ಇಸ್ರಾಯೇಲರು ಯೆಹೋವನಿಗೆ ಮೀಸಲೆಂದು ಸಮರ್ಪಿಸುವ ದ್ರವ್ಯಗಳ ಬಳಿಗೆ ಬಂದರೆ, ಅವನು ನನ್ನ ಸಾನ್ನಿಧ್ಯಸೇವೆಯಿಂದ ತೆಗೆದು ಹಾಕಬೇಕು; ನಾನು ಯೆಹೋವನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)3 ಅವರಿಗೆ ಹೀಗೆಂದು ವಿಧಿಸು: ನಿಮ್ಮಲ್ಲಿಯಾಗಲಿ, ನಿಮ್ಮ ಸಂತತಿಯವರಲ್ಲಿಯಾಗಲಿ ಯಾವನಾದರು ಅಶುದ್ಧನಾಗಿರುವಾಗ ಇಸ್ರಯೇಲರು ಸರ್ವೇಶ್ವರ ಸ್ವಾಮಿಗೆ ಮೀಸಲೆಂದು ಸಮರ್ಪಿಸುವ ಕಾಣಿಕೆಗಳ ಬಳಿಗೆ ಬಂದರೆ ಅವನನ್ನು ನನ್ನ ಸಾನ್ನಿಧ್ಯ ಸೇವೆಯಿಂದ ತೆಗೆದುಹಾಕಬೇಕು. ನಾನು ಸರ್ವೇಶ್ವರ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್3 ನಿಮ್ಮ ಸಂತತಿಯವರೆಲ್ಲರಲ್ಲಿ ಯಾವನಾದರೂ ಅಪವಿತ್ರನಾಗಿರುವಾಗ ಅವುಗಳನ್ನು ಮುಟ್ಟಿದರೆ, ಅವನನ್ನು ನನ್ನ ಸನ್ನಿಧಿ ಸೇವೆಯಿಂದ ತೆಗೆದುಹಾಕಬೇಕು! ಇಸ್ರೇಲರು ಅವುಗಳನ್ನು ನನಗೆ ಕೊಟ್ಟಿದ್ದಾರೆ. ನಾನೇ ಯೆಹೋವನು! ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ3 “ಅವರಿಗೆ ನೀನು ಹೀಗೆ ಹೇಳು: ‘ನಿಮ್ಮ ಎಲ್ಲಾ ಸಂತತಿಯ ವಂಶಾವಳಿಗಳಲ್ಲಿ ಅಶುದ್ಧತ್ವವಿರುವ ಇಸ್ರಾಯೇಲರು ಯೆಹೋವ ದೇವರಿಗೆ ಸಲ್ಲಿಸುವ ಪರಿಶುದ್ಧವಾದವುಗಳ ಬಳಿಗೆ ಯಾವನು ಬರುವನೋ, ಅವನನ್ನು ನನ್ನ ಸನ್ನಿಧಿಯಿಂದ ತೆಗೆದುಹಾಕಬೇಕು. ನಾನೇ ಯೆಹೋವ ದೇವರು. ಅಧ್ಯಾಯವನ್ನು ನೋಡಿ |