Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:32 - ಕನ್ನಡ ಸತ್ಯವೇದವು J.V. (BSI)

32 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದುತರಬಾರದು; ಇಸ್ರಾಯೇಲ್ಯರಲ್ಲಿ ನಾನು ಪರಿಶುದ್ಧನೆಂದೆಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

32 ನನ್ನ ಪರಿಶುದ್ಧ ನಾಮದ ಘನತೆಗೆ ಕುಂದು ತರಬಾರದು; ಇಸ್ರಾಯೇಲರಲ್ಲಿ ನಾನು ಪರಿಶುದ್ಧನೆಂದು ಎಣಿಸಲ್ಪಡಬೇಕು; ನಾನು ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

32 ನನ್ನ ಪವಿತ್ರ ನಾಮದ ಘನತೆಗೆ ಕುಂದು ತರಬಾರದು. ಇಸ್ರಯೇಲರೆಲ್ಲರು ನನ್ನನ್ನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಸರ್ವೇಶ್ವರನು ನಾನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

32 ನನ್ನ ಪವಿತ್ರ ನಾಮವನ್ನು ಗೌರವಿಸಬೇಕು. ನಾನು ಇಸ್ರೇಲರಿಗೆ ಬಹಳ ವಿಶೇಷವಾದವನಾಗಿರಬೇಕು. ಯೆಹೋವನಾದ ನಾನು ನಿಮ್ಮನ್ನು ನನ್ನ ವಿಶೇಷ ಜನರನ್ನಾಗಿ ಮಾಡಿದ್ದೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

32 ನನ್ನ ಪರಿಶುದ್ಧವಾದ ಹೆಸರನ್ನು ಅಪರಿಶುದ್ಧಗೊಳಿಸಬಾರದು, ಏಕೆಂದರೆ ಇಸ್ರಾಯೇಲರ ಮಧ್ಯದಲ್ಲಿ ನಾನು ಪರಿಶುದ್ಧನೆಂದು ಪರಿಗಣಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವ ದೇವರು ನಾನೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:32
16 ತಿಳಿವುಗಳ ಹೋಲಿಕೆ  

ಅದಕ್ಕಾತನು - ನೀವು ಪ್ರಾರ್ಥಿಸುವಾಗ - ತಂದೆಯೇ, ನಿನ್ನ ನಾಮವು ಪರಿಶುದ್ಧವೆಂದು ಎಣಿಸಲ್ಪಡಲಿ. ನಿನ್ನ ರಾಜ್ಯವು ಬರಲಿ.


ನಿಮ್ಮ ಮಕ್ಕಳಲ್ಲಿ ಯಾರನ್ನಾದರೂ ಮೋಲೆಕನಿಗೆ ಸಮರ್ಪಿಸಿ ನಿಮ್ಮ ದೇವರ ಹೆಸರನ್ನು ಅಪಕೀರ್ತಿಗೆ ಗುರಿಮಾಡಬಾರದು; ನಾನು ಯೆಹೋವನು.


ಆದದರಿಂದ ನೀವು ಹೀಗೆ ಪ್ರಾರ್ಥನೆಮಾಡತಕ್ಕದ್ದು -


ಆರೋನನೂ ಅವನ ಮಕ್ಕಳೂ [ತಾವು ಅಶುದ್ಧರಾಗಿರುವಾಗ] ಇಸ್ರಾಯೇಲ್ಯರಿಂದ ನನಗೆ ಸಮರ್ಪಿಸಲ್ಪಡುವ ಪರಿಶುದ್ಧದ್ರವ್ಯಗಳನ್ನು ಮುಟ್ಟಬಾರದೆಂದು ಅವರಿಗೆ ಆಜ್ಞಾಪಿಸು. ಅವರು ನನ್ನ ಪರಿಶುದ್ಧ ನಾಮದ ಘನತೆಗೆ ಕುಂದನ್ನು ತರಬಾರದು; ನಾನು ಯೆಹೋವನು.


ಆಗ ಮೋಶೆ ಆರೋನನಿಗೆ - ಯೆಹೋವನು ಹೇಳಿದ ಮಾತಿಗೆ ಇದೇ ದೃಷ್ಟಾಂತ; ಆ ಮಾತು ಏನಂದರೆ - ನಾನು ಪರಿಶುದ್ಧನೆಂಬದನ್ನು ನನ್ನ ಬಳಿಯಲ್ಲಿರುವವರ ಮೂಲಕವಾಗಿಯೇ ತೋರ್ಪಡಿಸುವೆನು, ಜನರೆಲ್ಲರಿಗೆ ತಿಳಿಯುವಂತೆ ನನ್ನ ಘನತೆಯನ್ನು ಸ್ಥಾಪಿಸುವೆನು ಎಂಬದೇ ಎಂದು ಹೇಳಿದನು. ಅದಕ್ಕೆ ಆರೋನನು ಮೌನವಾಗಿದ್ದನು.


ಸೊಸ್ಥೆನನೂ ಕೊರಿಂಥದಲ್ಲಿನ ದೇವರ ಸಭೆಗೆ ಅಂದರೆ ಕ್ರಿಸ್ತೇಸುವಿನಲ್ಲಿ ಪ್ರತಿಷ್ಠಿತರೂ ದೇವಜನರಾಗುವದಕ್ಕೆ ಕರೆಯಲ್ಪಟ್ಟವರೂ ಆಗಿರುವವರಿಗೆ ಮತ್ತು ನಮಗೂ ಸಮಸ್ತ ದೇವಜನರಿಗೂ ಕರ್ತನಾಗಿರುವ ಯೇಸು ಕ್ರಿಸ್ತನ ನಾಮಸ್ಮರಣೆಯನ್ನು ಮಾಡುವವರು ಎಲ್ಲಿದ್ದರೂ


ಇವರನ್ನು ಸತ್ಯದಲ್ಲಿ ಸೇರಿಸಿ ಪ್ರತಿಷ್ಠೆ ಪಡಿಸು; ನಿನ್ನ ವಾಕ್ಯವೇ ಸತ್ಯವು.


ಸೇನಾಧೀಶ್ವರನಾದ ಯೆಹೋವನೋ ನ್ಯಾಯತೀರಿಸುವದರಲ್ಲಿ ಉನ್ನತೋನ್ನತನಾಗಿ ಕಾಣಿಸಿಕೊಳ್ಳುವನು; ಪರಿಶುದ್ಧನಾದ ದೇವರು ಧರ್ಮವನ್ನು ನಡಿಸುವದರಲ್ಲಿ ಪರಿಶುದ್ಧನೆನಿಸಿಕೊಳ್ಳುವನು.


ಇಲ್ಲವಾದರೆ ಅವನ ಸಂತತಿಯು ಸ್ವಜನರೊಳಗೆ ಅಪವಾದಕ್ಕೆ ಗುರಿಯಾದೀತು. ಅವನನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಅವರು ನಿಮ್ಮ ದೇವರ ಆಹಾರವನ್ನು ಸಮರ್ಪಿಸುವವರಾದ ಕಾರಣ ಅವರನ್ನು ದೇವರ ಸೇವಕರೆಂದು ಭಾವಿಸಬೇಕು. ನಿಮ್ಮನ್ನು ನನ್ನ ಸೇವೆಗೆ ಪ್ರತಿಷ್ಠಿಸಿಕೊಂಡಿರುವ ಯೆಹೋವನೆಂಬ ನಾನು ಪರಿಶುದ್ಧನಾಗಿರುವದರಿಂದ ಅವರನ್ನೂ ಪರಿಶುದ್ಧರೆಂದು ನೀವು ಭಾವಿಸಬೇಕು.


ನನ್ನ ಆಜ್ಞೆಗಳನ್ನು ಅನುಸರಿಸಿ ನಡೆಯಬೇಕು. ನಾನು ನಿಮ್ಮನ್ನು ಪರಿಶುದ್ಧ ಜನವಾಗುವಂತೆ ಮಾಡುವ ಯೆಹೋವನು.


ಹಾಗೆ ಎಣಿಸಿದರೆ ತಾವು ಆ ನೈವೇದ್ಯಪದಾರ್ಥಗಳನ್ನು ಊಟಮಾಡುವದರಿಂದ ಪಾಪಕ್ಕೆ ಒಳಗಾಗಿ ಶಿಕ್ಷೆಹೊಂದಾರು. ನನ್ನ ಸೇವೆಗೆ ಅವರನ್ನು ಪ್ರತಿಷ್ಠಿಸಿಕೊಂಡ ಯೆಹೋವನು ನಾನು.


ಈ ನನ್ನ ಆಜ್ಞೆಗಳನ್ನು ನೀವು ಅನುಸರಿಸಿ ನಡೆಯಬೇಕು; ನಾನು ಯೆಹೋವನು.


ನಿಮ್ಮ ದೇವರಾಗುವದಕ್ಕೆ ನಿಮ್ಮನ್ನು ಐಗುಪ್ತದೇಶದಿಂದ ಬರಮಾಡಿದೆನಲ್ಲಾ; ನಾನು ಯೆಹೋವನು.


ಸೇನಾಧೀಶ್ವರನಾದ ಯೆಹೋವನನ್ನೇ ಪ್ರತಿಷ್ಠೆಪಡಿಸಿರಿ; ಆತನಿಗೇ ಹೆದರಿಕೊಳ್ಳಿರಿ, ನಡುಗಿರಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು