Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯಾಜಕಕಾಂಡ 22:6 - ಕನ್ನಡ ಸತ್ಯವೇದವು J.V. (BSI)

6 ಆದದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

6 “‘ಅಶುದ್ಧವಾದುದನ್ನು ಮುಟ್ಟುವ ಯಾಜಕನು ಆ ದಿನದ ಸಾಯಂಕಾಲದ ವರೆಗೆ ಅಶುದ್ಧನಾಗಿರುವನು. ಆದುದರಿಂದ ಸ್ನಾನಮಾಡುವ ತನಕ ಅವನು ನೈವೇದ್ಯದ್ರವ್ಯವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

6 ಆದುದರಿಂದ ಸ್ನಾನಮಾಡುವ ತನಕ ನೈವೇದ್ಯ ಪದಾರ್ಥಗಳನ್ನು ತಿನ್ನಕೂಡದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

6 ಒಬ್ಬನು ಅವುಗಳಲ್ಲಿ ಯಾವುದನ್ನು ಮುಟ್ಟಿದರೂ ಸಾಯಂಕಾಲದವರೆಗೆ ಅಶುದ್ಧನಾಗುವನು. ಅವನು ನೈವೇದ್ಯ ಪದಾರ್ಥಗಳಲ್ಲಿ ಯಾವುದನ್ನೂ ತಿನ್ನಬಾರದು. ಅವನು ತನ್ನನ್ನು ನೀರಿನಿಂದ ತೊಳೆದುಕೊಂಡರೂ ಪವಿತ್ರ ಪದಾರ್ಥವನ್ನು ತಿನ್ನಬಾರದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

6 ಸಂಜೆಯವರೆಗೆ ಅಶುದ್ಧನಾಗಿರಬೇಕು. ಅವನು ನೀರಿನಲ್ಲಿ ಸ್ನಾನಮಾಡಿದ ಮೇಲೆ ಪರಿಶುದ್ಧವಾದವುಗಳನ್ನು ತಿನ್ನಬಹುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯಾಜಕಕಾಂಡ 22:6
16 ತಿಳಿವುಗಳ ಹೋಲಿಕೆ  

ಆದಕಾರಣ ನೀನಪರಾಧಿಯೆಂದು ನಮ್ಮ ಮನಸ್ಸು ನಮಗೆ ಸಾಕ್ಷಿಹೇಳದಂತೆ ನಾವು ಹೃದಯವನ್ನು ಪ್ರೋಕ್ಷಿಸಿಕೊಂಡು ದೇಹವನ್ನು ತಿಳಿನೀರಿನಿಂದ ತೊಳೆದುಕೊಂಡು ಪರಿಪೂರ್ಣವಾದ ನಂಬಿಕೆಯುಳ್ಳವರಾಗಿಯೂ ಯಥಾರ್ಥ ಹೃದಯವುಳ್ಳವರಾಗಿಯೂ ದೇವರ ಬಳಿಗೆ ಬರೋಣ.


ಅವನ ಹಾಸಿಗೆಯನ್ನು ಮುಟ್ಟಿದವನು ತನ್ನ ಬಟ್ಟೆಗಳನ್ನು ಒಗೆದುಕೊಂಡು ಸ್ನಾನಮಾಡಬೇಕು; ಅವನು ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು.


ನಿಮ್ಮಲ್ಲಿ ಕೆಲವರು ಅಂಥವರಾಗಿದ್ದಿರಿ; ಆದರೂ ಕರ್ತನಾದ ಯೇಸು ಕ್ರಿಸ್ತನ ಹೆಸರಿನಲ್ಲಿಯೂ ನಮ್ಮ ದೇವರ ಆತ್ಮದಲ್ಲಿಯೂ ತೊಳೆದುಕೊಂಡಿರಿ, ದೇವಜನರಾದಿರಿ, ನೀತಿವಂತರೆಂಬ ನಿರ್ಣಯವನ್ನು ಹೊಂದಿದಿರಿ.


ಆಮೇಲೆ ಹಗ್ಗಾಯನು - ಹೆಣವನ್ನು ಮುಟ್ಟಿ ಅಶುದ್ಧನಾದವನು ಇವುಗಳಲ್ಲಿ ಯಾವದನ್ನಾದರೂ ಸೋಕಿದರೆ ಅದು ಅಶುದ್ಧವಾಗುವದೋ ಎಂದು ಕೇಳಿದ್ದಕ್ಕೆ ಯಾಜಕರು - ಅಶುದ್ಧವೇ ಆಗುವದು ಎಂದು ಉತ್ತರಕೊಟ್ಟರು.


ಅಶುದ್ಧವಾದ ಕ್ರಿವಿುಕೀಟ ಮೂಷಕಾದಿಗಳನ್ನು ಅಥವಾ ಅಶುದ್ಧನಾದ ಮನುಷ್ಯನನ್ನು ಮುಟ್ಟಿದವನಾಗಲಿ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರುವನು;


ಹೊತ್ತು ಮುಣುಗಿದನಂತರ ಅವನು ಶುದ್ಧನಾಗಿ ನೈವೇದ್ಯದ್ರವ್ಯವನ್ನು ಊಟಮಾಡಬಹುದು;


ಅಶುದ್ಧನಿಗೆ ಸೋಂಕಿದ ವಸ್ತು ಯಾವದೇ ಆಗಲಿ ಅಶುದ್ಧವೆಂದು ನೀವು ತಿಳಿದುಕೊಳ್ಳಬೇಕು; ಅದು ಯಾರಿಗೆ ಸೋಂಕಿತೋ ಅವನೂ ಆ ದಿನದ ಸಾಯಂಕಾಲದವರೆಗೆ ಅಶುದ್ಧನಾಗಿರಬೇಕು.


ಚತುಷ್ಪಾದ ಪ್ರಾಣಿಗಳಲ್ಲಿ ಅಂಗಾಲುಗಳಿಂದ ನಡೆಯುವವುಗಳೆಲ್ಲಾ ನಿಮಗೆ ಅಶುದ್ಧವಾಗಿರುವವು; ಅವುಗಳ ಹೆಣ ಯಾವನಿಗೆ ಸೋಂಕುವದೋ ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಅವುಗಳ ಹೆಣವನ್ನು ಎತ್ತಿದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು ಮತ್ತು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಅವು ನಿಮಗೆ ಅಶುದ್ಧ.


ನೆಲದ ಮೇಲೆ ಸಂಚರಿಸುವ ಈ ಅಶುದ್ಧವಾದ ಸಣ್ಣ ಜಂತುಗಳ ಹೆಣವು ಯಾರಿಗೆ ಸೋಂಕುವದೋ ಅವರು ಆ ಸಾಯಂಕಾಲದವರೆಗೂ ಅಶುದ್ಧರಾಗಿರುವರು.


ಇವುಗಳ ಹೆಣವು ಯಾವ ವಸ್ತುವಿನ ಮೇಲೆ ಬೀಳುವದೋ ಆ ವಸ್ತುವು ಅಶುದ್ಧವಾಗಿರುವದು. ಅದು ಮರದ ವಸ್ತುವಾಗಲಿ ಬಟ್ಟೆಯಾಗಲಿ ಚರ್ಮವಾಗಲಿ ಗೋಣಿಯಾಗಲಿ ಅದು ಎಂಥದಾದರೂ ಯಾವ ಕೆಲಸಕ್ಕೆ ಉಪಯೋಗವಾಗಿದ್ದರೂ ಅದನ್ನು ನೀರಿನಲ್ಲಿ ನೆನಸಬೇಕು; ಅದು ಸಾಯಂಕಾಲದವರೆಗೂ ಅಶುದ್ಧವಾಗಿರುವದು; ತರುವಾಯ ಶುದ್ಧಿಯಾಗುವದು.


ಆಹಾರಕ್ಕೆ ಯೋಗ್ಯವಾಗಿರುವ ಪಶುವು ಸತ್ತರೆ ಅದರ ಹೆಣವನ್ನು ಮುಟ್ಟಿದವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ಆ ಹೆಣದಲ್ಲಿ ಸ್ವಲ್ಪವಾಗಿ ತಿಂದವನು ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು. ಅವನು ಆ ದಿನದ ಸಾಯಂಕಾಲದವರೆಗೂ ಅಶುದ್ಧನಾಗಿರುವನು. ಆ ಹೆಣವನ್ನು ಹೊತ್ತವನೂ ತನ್ನ ಬಟ್ಟೆಗಳನ್ನು ಒಗೆದುಕೊಳ್ಳಬೇಕು; ಅವನು ಆ ಸಾಯಂಕಾಲದವರೆಗೂ ಅಶುದ್ಧನಾಗಿರುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು