ಯಾಜಕಕಾಂಡ 23:1 - ಕನ್ನಡ ಸತ್ಯವೇದವು J.V. (BSI)1 ಯೆಹೋವನು ಮೋಶೆಗೆ ಹೇಳಿದ್ದೇನಂದರೆ - ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಯೆಹೋವನು ಮೋಶೆಯೊಂದಿಗೆ ಮಾತನಾಡಿ, ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲರಿಗೆ ಈ ಪ್ರಕಾರ ಆಜ್ಞಾಪಿಸಬೇಕೆಂದು ಸರ್ವೇಶ್ವರ ಸ್ವಾಮಿ ಮೋಶೆಗೆ ಹೇಳಿದರು: ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಯೆಹೋವನು ಮೋಶೆಗೆ ಹೇಳಿದ್ದೇನೆಂದರೆ: ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಯೆಹೋವ ದೇವರು ಮೋಶೆಯೊಂದಿಗೆ ಮಾತನಾಡಿ ಹೇಳಿದ್ದೇನೆಂದರೆ, ಅಧ್ಯಾಯವನ್ನು ನೋಡಿ |
ಉತ್ಸವಗಳಲ್ಲಿಯೂ ಅಮಾವಾಸ್ಯೆಗಳಲ್ಲಿಯೂ ಸಬ್ಬತ್ತುಗಳಲ್ಲಿಯೂ ಇಸ್ರಾಯೇಲ್ ವಂಶದವರಿಗೆ ನೇಮಕವಾದ ಎಲ್ಲಾ ಹಬ್ಬಗಳಲ್ಲಿಯೂ ಸರ್ವಾಂಗಹೋಮಪಶು, ಧಾನ್ಯನೈವೇದ್ಯ, ಪಾನನೈವೇದ್ಯ, ಇವುಗಳನ್ನು ಒದಗಿಸುವದು ಪ್ರಭುವಿನ ಕರ್ತವ್ಯ; ಇಸ್ರಾಯೇಲ್ ವಂಶದ ದೋಷನಿವಾರಣೆಗಾಗಿ ಅವನು ದೋಷಪರಿಹಾರಕಯಜ್ಞಪಶು, ಧಾನ್ಯನೈವೇದ್ಯ, ಸರ್ವಾಂಗಹೋಮಪಶು, ಸಮಾಧಾನಯಜ್ಞಪಶು, ಇವುಗಳನ್ನು ಒಪ್ಪಿಸತಕ್ಕದ್ದು.
ಈಗ ನಾನು ನನ್ನ ದೇವರಾದ ಯೆಹೋವನ ಹೆಸರಿಗಾಗಿ ಒಂದು ಆಲಯವನ್ನು ಕಟ್ಟಿಸಿ ಇಸ್ರಾಯೇಲ್ಯರಿಗಿರುವ ಶಾಶ್ವತನಿಯಮದ ಪ್ರಕಾರ ಆತನ ಸನ್ನಿಧಿಯಲ್ಲಿ ಸುಗಂಧದ್ರವ್ಯಗಳಿಂದ ಧೂಪಹಾಕುವದಕ್ಕೂ ಪ್ರತಿನಿತ್ಯ ನೈವೇದ್ಯದ ರೊಟ್ಟಿಗಳನ್ನಿಡುವದಕ್ಕೂ ಪ್ರಾತಃಕಾಲ, ಸಾಯಂಕಾಲ, ಸಬ್ಬತ್‍ದಿನ, ಅಮಾವಾಸ್ಯೆ, ನಮ್ಮ ದೇವರಾದ ಯೆಹೋವನ ಜಾತ್ರೆ ಇವುಗಳಲ್ಲಿ ಸರ್ವಾಂಗ ಹೋಮವನ್ನರ್ಪಿಸುವದಕ್ಕೂ ಆ ಆಲಯವನ್ನು ಆತನಿಗೋಸ್ಕರ ಪ್ರತಿಷ್ಠಿಸಬೇಕೆಂದಿದ್ದೇನೆ.