ಯಾಜಕಕಾಂಡ 23:17 - ಕನ್ನಡ ಸತ್ಯವೇದವು J.V. (BSI)17 ನಿಮ್ಮ ನಿವಾಸಗಳಿಂದ [ತಂದ ಹಿಟ್ಟಿನಲ್ಲಿ] ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಆರು ಸೇರು ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 ನಿಮ್ಮ ನಿವಾಸಗಳಿಂದ ತಂದ ಹಿಟ್ಟಿನಲ್ಲಿ ಎರಡು ಕಿಲೋಗ್ರಾಂ ಹಿಟ್ಟಿನಿಂದ ಎರಡು ನೈವೇದ್ಯದ ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋದಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಸರ್ವೇಶ್ವರನಿಗೆ ಸಮರ್ಪಿಸಬೇಕು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 ಆ ದಿನದಲ್ಲಿ ನಿಮ್ಮ ಮನೆಗಳಿಂದ ಎರಡು ರೊಟ್ಟಿಗಳನ್ನು ತನ್ನಿರಿ. ಆ ರೊಟ್ಟಿಗಳು ನೈವೇದ್ಯವಾಗಿ ನಿವಾಳಿಸಲ್ಪಡುವುದಕ್ಕಾಗಿದೆಯಷ್ಟೆ. ಹುಳಿಯನ್ನು ಉಪಯೋಗಿಸಿ ಹದಿನಾರು ಬಟ್ಟಲು ಗೋಧಿಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಿರಿ. ಅದು ನಿಮ್ಮ ಪ್ರಥಮ ಬೆಳೆಯಿಂದ ಯೆಹೋವನಿಗೆ ಸಮರ್ಪಿಸುವ ಕಾಣಿಕೆಯಾಗಿರುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 ಇದಲ್ಲದೆ ನೀವು ನಿಮ್ಮ ಮನೆಗಳಿಂದ ತಂದ ಹಿಟ್ಟಿನಲ್ಲಿ ಎರಡೆರಡು ಓಮರ್ ಹಿಟ್ಟಿನಿಂದ ಎರಡು ರೊಟ್ಟಿಗಳನ್ನು ಮಾಡಬೇಕು. ಇವುಗಳನ್ನು ಹುಳಿಹಾಕಿದ ಗೋಧಿಯ ಹಿಟ್ಟಿನಿಂದ ಮಾಡಿ ಪ್ರಥಮಫಲವಾಗಿ ಯೆಹೋವ ದೇವರಿಗೆ ನೈವೇದ್ಯವಾಗಿ ನಿವಾಳಿಸಬೇಕು. ಅಧ್ಯಾಯವನ್ನು ನೋಡಿ |